AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟ ಬಟಾಬಯಲು: ಮುತ್ತಪ್ಪ ರೈ ಪುತ್ರನಿಗೆ ಮತ್ತೊಂದು ಸಂಕಷ್ಟ

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ನಡೆಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಕಾರನ್ನು ವಶಕ್ಕೆ ಪಡೆದು ರಿಕ್ಕಿ ರೈಯನ್ನು ವಿಚಾರಣೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದಿಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟ ಬಟಾಬಯಲು: ಮುತ್ತಪ್ಪ ರೈ ಪುತ್ರನಿಗೆ ಮತ್ತೊಂದು ಸಂಕಷ್ಟ
Rikki Rai
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 27, 2026 | 11:18 PM

Share

ಬೆಂಗಳೂರು, (ಮಾರ್ಚ್ 27): ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ (Rikki Rai) ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಕಾರು ಡ್ರಿಫ್ಟಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ರಿಕ್ಕಿ ವಿರುದ್ಧ ಇದೀಗ ಹೊಸ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಹೌದು…ಬೆಂಗಳೂರಿನ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಡ್ರಿಫ್ಟಿಂಗ್ ಮಾಡಿದ್ದ  ಲ್ಯಾಂಬೋರ್ಗಿನಿ ಕಾರನ್ನ  ರಿಜಿಸ್ಟರ್ ಮಾಡಿಸಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.  ದೆಹಲಿಯಲ್ಲಿ ಖರೀದಿಸಿದ್ದ  ಸುಮಾರು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರು ಕರ್ನಾಟಕದಲ್ಲಿ ರಿಜಿಸ್ಟರ್ ಮಾಡಿಸಿಲ್ಲ. ಹಾಗೇ RTO ಹರಾಜಿನಲ್ಲಿ ಫ್ಯಾನ್ಸಿ ನಂಬರ್ ಖರೀದಿ ಮಾಡಿ ಟ್ಯಾಕ್ಸ್ ಕಟ್ಟದೇ  ವಂಚನೆ ಮಾಡಿದ್ದಾರೆ. ಈ ಸಂಬಂಧ ರಿಕ್ಕಿ ರೈ ವಿರುದ್ಧ ವಂಚನೆ ಕೇಸ್ ದಾಖಲಾಗಿದೆ.

ಬೆಂಗಳೂರಿನ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಸುಮಾರು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರಿನಿಂದ ಹಲವು ಬಾರಿ ಡ್ರಿಫ್ಟಿಂಗ್ ನಡೆಸಿರುವ ವಿಡಿಯೋಗಳು ವೈರಲ್ ಆಗಿದ್ದವು. ಸ್ಥಳೀಯರೊಬ್ಬರು ಈ ಪುಂಡಾಟದ ದೃಶ್ಯವನ್ನು ಸೆರೆ ಹಿಡಿದಿದ್ದರು. ಅದು ಮಾಜಿ ಡಾನ್​ ಮುತ್ತಪ್ಪ ರೈ ಅವರ ಮಗ ರಿಕ್ಕಿ ರಾಯ್​ ಚಲಾಯಿಸುತ್ತಿರುವ ಕಾರು ಎಂದು ತಿಳಿದು ಬಂದಿತ್ತು. ಅಲ್ಲಿಗೆ ಬರುವ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿರುವುದಾಗಿ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸರು ರಿಕ್ಕಿ ವಿರುದ್ಧ ಎಫ್​ಐಆರ್ ದಾಖಲು ಮಾಡಿಕೊಂಡು ಕಾರು ಸೀಜ್ ಮಾಡಿ ತನಿಖೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾರಿನ ಮತ್ತೊಂದು ಕಳ್ಳಾಟ ಬಟಾಬಯಲಾಗಿದ್ದು, ರಿಕ್ಕಿ ರೈ ಮೇಲೆ ವಂಚನೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಲ್ಯಾಂಬೋರ್ಗಿನಿ ಕಾರು ಜಪ್ತಿ ಮಾಡಿದ ಸಾರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್: 1 ವಾರದಲ್ಲಿ ಕಾರು ಹಿಂದಿರುಗಿಸಿ

ರಿಜಿಸ್ಟರ್ ಮಾಡಿಸದೇ ವಂಚನೆ

ದೆಹಲಿಯಲ್ಲಿ ಖರೀದಿಸಿದ್ದ ಕಾರು ರಿಜಿಸ್ಟರ್ ಮಾಡಿಸಿಲ್ಲ. RTO ಹರಾಜಿನಲ್ಲಿ ಫ್ಯಾನ್ಸಿ ನಂಬರ್ ಖರೀದಿ ಮಾಡಿ ಟ್ಯಾಕ್ಸ್ ಕಟ್ಟದೇ ಕಾರಿಗೆ ಅಳವಡಿಕೆ ಮಾಡಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರ ದಾಖಲೆ ಪರಿಶೀಲನೆ ವೇಳೆ ಅಕ್ರಮ ಬಯಲಿಗೆ ಬಂದಿದೆ. ಡ್ರಿಫ್ಟಿಂಗ್ ಮಾಡಿದ ಮೊದಲ ದಿನ ಕಾರಿನ ನಂಬರ್ ಪತ್ತೆಯಾಗಿದ್ದರೂ ಸಹ ಕಾರಿನ ಮಾಲೀಕರು ಪತ್ತೆಯಾಗಿರಲಿಲ್ಲ. ದೆಹಲಿಯಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿರೋ ರಿಕ್ಕಿ ರೈ, ಅದಕ್ಕೆ ಹೊಸ ಕಲರ್ ಮಾಡಿಸಿದ್ದರು.ಆದ್ರೆ ಇಲ್ಲಿವರೆಗೂ ಅದನ್ನು ಬೆಂಗಳೂರಿನಲ್ಲಿ ರಿಜಿಸ್ಟರ್ ಮಾಡಿಸಿಲ್ಲ. ಜೊತೆಗೆ ತನ್ನ ಕಾರಿಗೆ ka 05 NR 0009 ನಂಬರ್ ನ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಅದನ್ನು ಕೂಡ ರಿಜಿಸ್ಟರ್ ಮಾಡಿಸಿ ಅದಕ್ಕೆ ಟ್ಯಾಕ್ಸ್ ಕಟ್ಟಬೇಕಿದೆ. ಆದ್ರೆ, ಅದನ್ನೂ ಸಹ ಕಟ್ಟಿಲ್ಲ.

ರಿಕ್ಕಿ ರೈ ವಿರುದ್ಧ ವಂಚನೆ ಕೇಸ್ ದಾಖಲು

ಲ್ಯಾಂಬೋರ್ಗಿನಿ ಕಾರು ಅಗಿರೋ ಹಿನ್ನೆಲೆಯಲ್ಲಿ ರಿಜಿಸ್ಟರ್ ಗೆ ಲಕ್ಷಾಂತರ ರೂಪಾಯಿ ಟ್ಯಾಕ್ಸ್ ಕಟ್ಟಿಬೇಕಿತ್ತು. ಆದರೆ ಇದ್ಯಾವುದೂ ಮಾಡದೇ ನಿಯಮ ಉಲ್ಲಂಘನೆ ಮಾಡಿ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ನೀಡಿದ ದೂರಿನ ಅನ್ವಯ ಕಬ್ಬನ್ ಪಾರ್ಕ್ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಬಿ ಎನ್ ಎಸ್ 318(4) 304(2) 341 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಈ ನಡುವೆ ಅನಿಲ್ ಕುಂಬ್ಳೆ ಸರ್ಕಲ್ ನಲ್ಲಿ ಡ್ರಿಫ್ಟಿಂಗ್ ಕೇಸ್ ನಲ್ಲಿ ಸ್ಥಳ ಪರಿಶೀಲನೆಗೆ ಪೊಲೀಸರು ನೀಡಿದ ನೋಟಿಸ್ ಗೂ ರಿಕ್ಕಿ ರೈ ಯಾವುದೇ ಉತ್ತರ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ. ಇದೀಗ ವಂಚನೆ ಕೇಸ್​ ಸಂಬಂಧ ಈಗ ಕಾನೂನು ಸುವ್ಯವಸ್ಥೆ ಪೊಲೀಸರು ಸಹ ತನಿಖೆ ನಡೆಸುತ್ತಿದ್ದು, ಸದ್ಯ ಕಾರು ಸಂಚಾರಿ ಪೊಲೀಸರ ವಶದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Fri, 27 March 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ