ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಎರಡನೇ ಬಲಿಯಾಗಿದೆ. ಉಸಿರಾಟದ ತೊಂದರೆ ಎಂದು ಆಸ್ವತ್ರೆಗೆ ಹೋಗಿದ್ದ 60 ವರ್ಷದ ವೃದ್ಧೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಹೊಸಕೋಟೆ ನಗರದ ಎಂವಿ ಬಡಾವಣೆಯ 60 ವರ್ಷದ ಮಹಿಳೆ ಎದೆನೋವು ಮತ್ತು ಉಸಿರಾಟದ ತೊಂದರೆ ಎಂದು ಜಯದೇವ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಎದೆನೋವಿಲ್ಲ ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ವೈದ್ಯರು ರವಾನಿಸಿದ್ದರು. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು.
ಕೊರೊನಾ ಸೋಂಕು ತಗುಲಿದ ಕಾರಣ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಮಾಹಾಮಾರಿ ಕೊರೊನಾದಿಂದ ಸಾವಿಗೀಡಾಗಿರುವುದಾಗಿ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.