AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈಸೇರಿಲ್ಲ ಪಠ್ಯ ಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ

ಕರ್ನಾಟಕದಲ್ಲಿ ಶಾಲೆಗಳು ಆರಂಭವಾಗಿ ಒಂದು ವಾರ ಕಳೆದರೂ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಿಗಬೇಕಿದ್ದ ಮೂಲ ಸೌಕರ್ಯ ಮಾತ್ರ ಇನ್ನೂ ಸಿಕ್ಕಿಲ್ಲ. ಒಂದು ವಾರವಾದರೂ ಪಠ್ಯಪುಸ್ತಕ ಮಕ್ಕಳ ಕೈ ತಲುಪದೇ ಇರುವುದು ಸಂಕಷ್ಟಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಹೇಳುವುದೇ ಒಂದು ಮಾಡುವುದು ಮತ್ತೊಂದು ಎಂಬ ಆಕ್ರೋಶ ವ್ಯಕ್ತವಾಗಿದೆ.

ಶಾಲೆ ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈಸೇರಿಲ್ಲ ಪಠ್ಯ ಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ
ಸಾಂದರ್ಭಿಕ ಚಿತ್ರ
Vinay Kashappanavar
| Updated By: Ganapathi Sharma|

Updated on: Jun 06, 2025 | 7:00 AM

Share

ಬೆಂಗಳೂರು, ಜೂನ್ 6: ಕರ್ನಾಟಕದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. 2025-2026ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದೆ. ಚಿಣ್ಣರು ಕಳೆದ ಒಂದು ವಾರದಿಂದ ಶಾಲೆಗೆ ತೆರಳುತ್ತಿದ್ದಾರೆ. ಆದರೆ, ಶಾಲೆಗಳು ಆರಂಭವಾಗಿ ವಾರ ಕಳೆದರೂ ಇನ್ನೂ ಪಠ್ಯ ಪುಸ್ತಕಗಳು (Textbooks) ವಿದ್ಯಾರ್ಥಿಗಳ ಕೈ ಸೇರಿಲ್ಲ. ಆಂಗ್ಲ ಮಾಧ್ಯಮದ 1 ರಿಂದ 5 ನೇ ತರಗತಿ ವರೆಗಿನ ಮಕ್ಕಳಿಗೆ ನೀಡಬೇಕಾದ ಪಠ್ಯಪುಸ್ತಕ ಶಾಲೆಗಳಿಗೆ ಬಂದಿಲ್ಲ. ಕನ್ನಡ ಮಾಧ್ಯಮದ ಶೇ 20 ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕ ಇನ್ನಷ್ಟೇ ಪೂರೈಕೆಯಾಗಬೇಕಿದೆ. ಬೆಂಗಳೂರಿನ ಶಾಲೆಗಳ (Bangalore Schools)  ಸ್ಥಿತಿಗತಿಯೇ ಹೀಗಾದರೆ, ಬೇರೆ ಜಿಲ್ಲೆಗಳ ಶಾಲೆಗಳ ಕಥೆ ಏನು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ ಆರಂಭದ ದಿನವೇ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಕೊಡುತ್ತೇವೆ. ಈ ವರ್ಷ ಪಠ್ಯಪುಸ್ತಕ ತಡ ಮಾಡುವುದಿಲ್ಲ ಎಂದಿದ್ದ ಶಿಕ್ಷಣ ಇಲಾಖೆ ದಿವ್ಯ ನಿರ್ಲಕ್ಷ್ಯವಹಿಸಿದೆ. ಪಠ್ಯ ಪುಸ್ತಕಗಳು ಇಲ್ಲದೆ ತರಗತಿ ನಡೆಸಲು ಸಾಧ್ಯವಾಗದ ಶಿಕ್ಷಕರು ಸೇತುಬಂಧ ಕಾರ್ಯಕ್ರಮ ಮುಂದುವರೆಸಿದ್ದಾರೆ.

ಇನ್ನು ಶಿಕ್ಷಣ ಇಲಾಖೆಯ ನಡೆಯ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟವೂ ಆಕ್ರೋಶ ವ್ಯಕ್ತಪಡಿಸಿವೆ. ಪಠ್ಯಪುಸ್ತಕಕ್ಕೆ ಸರ್ಕಾರಕ್ಕೆ ಕಳೆದ 6 ತಿಂಗಳ ಹಿಂದೆಯೇ ಹಣ ನೀಡಿದ್ದೇವೆ. ಆದರೆ ಶಾಲೆ ಶುರುವಾಗಿ ಇಷ್ಟು ದಿನವಾದರೂ ಪಠ್ಯಪುಸ್ತಕ ಪೂರೈಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಕೊರೊನಾ ಅಬ್ಬರ...ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್
Image
ವಿದೇಶದಲ್ಲಿ ಓದುವವರೇ ಈ ವಿಷ್ಯ ಗೊತ್ತಿಲ್ಲದಿದ್ದರೆ ಮೋಸ ಹೋಗುವುದು ಖಂಡಿತಾ
Image
ಅತ್ಯಂತ ಕಡಿಮೆ ಸಮಯದಲ್ಲಿ ಪರೀಕ್ಷೆಗೆ ತಯಾರಿ ನಡೆಸುವುದು ಹೇಗೆ?
Image
ಮರಳಿ ಶಾಲೆಗೆ: ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ, ಇಲ್ಲಿವೆ ಫೋಟೋಸ್

ಇದನ್ನೂ ಓದಿ: SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

ಏತನ್ಮಧ್ಯೆ, ಈಗಾಗಲೇ ಶೇ 83 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿದೆ. ಉಳಿದವುಗಳನ್ನು ಇನ್ನೊಂದು ವಾರದಲ್ಲಿ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಡಾ. ತ್ರಿಲೋಕಚಂದ್ರ ತಿಳಿಸಿದ್ದಾರೆ.

ಒಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರತಿ ಬಾರಿಯಂತೆ ಈ ಬಾರಿಯೂ ಪಠ್ಯಪುಸ್ತಕ ವಿತರಣೆ ತಡ ಮಾಡಿದೆ. ಮಕ್ಕಳಿಗೆ ಅತ್ಯಗತ್ಯವಾಗಿ ಬೇಕಿರುವ ಪಠ್ಯಪುಸ್ತಕವನ್ನು ಇನ್ನಾದರೂ ಆದಷ್ಟು ಬೇಗ ಪೂರೈಕೆ ಮಾಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ