Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 1ರಿಂದ ಪುನಃ ಆನ್​ಲೈನ್ ತರಗತಿ ಪ್ರಾರಂಭ: ಮಕ್ಕಳ ಬಳಿ ಸ್ಮಾರ್ಟ್​ಫೋನ್​ನಂತಹ ಅಗತ್ಯ ಸೌಲಭ್ಯ ಇದೆಯೇ ಎಂದು ಪ್ರಶ್ನಿಸಿದ ಹೈಕೋರ್ಟ್​

Online classes: ಜುಲೈ 1ರಿಂದ ಆನ್​ಲೈನ್ ತರಗತಿಗಳನ್ನು ಪುನಃ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಲಾಕ್​ಡೌನ್ ಪರಿಣಾಮ ಪಠ್ಯಪುಸ್ತಕಗಳನ್ನು ಮುದ್ರಿಸಲು ವಿಳಂಬವಾಗಿದೆ. ಆಗಸ್ಟ್, ಸೆಪ್ಟಂಬರ್ ತಿಂಗಳಲ್ಲಿ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುತ್ತದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಜುಲೈ 1ರಿಂದ ಪುನಃ ಆನ್​ಲೈನ್ ತರಗತಿ ಪ್ರಾರಂಭ: ಮಕ್ಕಳ ಬಳಿ ಸ್ಮಾರ್ಟ್​ಫೋನ್​ನಂತಹ ಅಗತ್ಯ ಸೌಲಭ್ಯ ಇದೆಯೇ ಎಂದು ಪ್ರಶ್ನಿಸಿದ ಹೈಕೋರ್ಟ್​
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: guruganesh bhat

Updated on:Jun 08, 2021 | 9:48 PM

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್​ನಲ್ಲಿ ಪಾಠ ಕೇಳಲು ಸ್ಮಾರ್ಟ್ ಫೋನ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್, ಇಂಟರ್‌ನೆಟ್‌ ಸೌಲಭ್ಯ ಹೊಂದಿರುವ ಮಕ್ಕಳ ಸಂಖ್ಯೆ ಎಷ್ಟು? ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಪ್ರಶ್ನೆ ಮಾಡಿದೆ. ಆನ್​ಲೈನ್ ಕ್ಲಾಸ್​ಗೆ ಕೂರಲು ಅಗತ್ಯ ಸೌಲಭ್ಯ ಹೊಂದಿರುವ ಮಕ್ಕಳ ಶಾಲಾವಾರು ಅಂಕಿ ಅಂಶವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಆನ್​ಲೈನ್ ತರಗತಿಗಳಿಗೆ ಕೂರಲು ತಂತ್ರಜ್ಞಾನದ ಲಭ್ಯತೆ ಬಗ್ಗೆ ಶಾಲಾವಾರು ಅಂಕಿ-ಅಂಶಗಳನ್ನು ಜುಲೈ1ರೊಳಗೆ ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ಹೈಕೋರ್ಟ್​ಗೆ ಕೆಲವು ಮುಖ್ಯ ಮಾಹಿತಿಗಳನ್ನು ತಿಳಿಸಿದ ರಾಜ್ಯ ಸರ್ಕಾರ, 2021-22ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಕಾರ್ಯಯೋಜನೆಯನ್ನು ವಿವರಿಸಿದೆ. ಜುಲೈ 1ರಿಂದ ಆನ್​ಲೈನ್ ತರಗತಿಗಳನ್ನು ಪುನಃ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಲಾಕ್​ಡೌನ್ ಪರಿಣಾಮ ಪಠ್ಯಪುಸ್ತಕಗಳನ್ನು ಮುದ್ರಿಸಲು ವಿಳಂಬವಾಗಿದೆ. ಆಗಸ್ಟ್, ಸೆಪ್ಟಂಬರ್ ತಿಂಗಳಲ್ಲಿ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುತ್ತದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಆದರೆ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದೆ. ವಾಹನ ಸವಾರರು ವಾಹನ ರಿಲೀಸ್‌ ಮಾಡಿಸಿಕೊಳ್ಳಲು ಕೋರ್ಟ್‌ಗೆ ಓಡಾಡುವ ಅಗತ್ಯವಿಲ್ಲ. ಪೊಲೀಸರಿಗೇ ವಾಹನ ರಿಲೀಸ್ ಮಾಡುವ ಅಧಿಕಾರವನ್ನೂ ಹೈಕೋರ್ಟ್ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡಿ… ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು. ಸರ್ಕಾರದಿಂದ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಇಂದು ಈ ಆದೇಶ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ. ವಾಹನ ಮಾಲೀಕರು ಕೋರ್ಟ್​​ಗಳತ್ತ ಬಂದು ಜನಸಂದಣಿ ಆಗುವುದು ಬೇಡ. ಜನ ಜಮಾವಣೆಯಾದರೆ ಮತ್ತೆ ಕೊರೊನಾ ಸೋಂಕು ಹಬ್ಬಲು ಸಹಕಾರಿಯಾಗುತ್ತದೆ. ಹಾಗಾಗಿ ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡು, ಬಾಂಡ್​ ಬರೆಯಿಸಿಕೊಂಡು ಇಡೀ ರಾಜ್ಯದಲ್ಲಿ ಆಯಾ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲೇ ಕೇಸುಗಳನ್ನು ಇತ್ಯರ್ಥ ಪಡಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ.

ಇದನ್ನೂ ಓದಿ: ನಾವು ಮನೆಯಲ್ಲಿ ಕುಳಿತು ಫೇಸ್​ಬುಕ್ ಪೆರಟುತ್ತಿದ್ದರೆ ಫೇಸ್​ಬುಕ್ ಸೃಷ್ಟಿಕರ್ತ ಮಾರ್ಕ್ ಜುಕರ್​ಬರ್ಗ್ ಬಯಲಲ್ಲಿ ಈಟಿ ಎಸೆಯುತ್ತಿದ್ದಾರೆ!

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ತೊಡಕುಂಟಾಗದಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ (Online classes are start from July 1 in Karnataka High Court to query how many children have access to a smartphone)

Published On - 9:43 pm, Tue, 8 June 21

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!