AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಶಿಕ್ಷಣ ಅಸಮರ್ಪಕತೆ ಪರಿಹಾರಕ್ಕೆ ಕ್ರಮ; 5,766 ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಟಿವಿ ಅಳವಡಿಸಲು ಚಿಂತನೆ

ಕರ್ನಾಟಕ ರಾಜ್ಯದ 5,766 ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯದಲ್ಲಿ ಟಿವಿ ಸೆಟ್​ಗಳನ್ನು ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಯಾವುದೇ ತಂತ್ರಜ್ಞಾನದ ಬಳಕೆ, ಸೌಕರ್ಯ ಕೊರತೆ ಇರುವವರಿಗೆ, ಅದರಿಂದ ಶಿಕ್ಷಣದಿಂದ ವಂಚಿತರಾದವರಿಗೆ ಈ ಯೋಜನೆ ಸಹಾಯವಾಗಲಿದೆ.

ಆನ್​ಲೈನ್ ಶಿಕ್ಷಣ ಅಸಮರ್ಪಕತೆ ಪರಿಹಾರಕ್ಕೆ ಕ್ರಮ; 5,766 ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಟಿವಿ ಅಳವಡಿಸಲು ಚಿಂತನೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on: Jul 13, 2021 | 8:39 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಹಾಗೂ ವ್ಯವಸ್ಥೆ ಮತ್ತೆ ಮೊದಲ ಸ್ಥಿತಿಗೆ ಮರಳದ ಹಿನ್ನೆಲೆಯಲ್ಲಿ ಕಳೆದ ಸುಮಾರು ಎರಡು ವರ್ಷದಷ್ಟು ಕಾಲದಿಂದ ವರ್ಕ್ ಫ್ರಮ್ ಹೋಮ್, ಆನ್​ಲೈನ್ ಕ್ಲಾಸ್​ನಂತಹ ಪದ್ಧತಿ ಚಾಲ್ತಿಯಲ್ಲಿದೆ. ಆದರೆ, ಇಂಟರ್​ನೆಟ್, ಸೌಕರ್ಯ, ಸಂಪನ್ಮೂಲದ ಕೊರತೆ ಇತ್ಯಾದಿ ತೊಂದರೆಗಳಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಗ್ರಾಮ ಪಂಚಾಯತ್​ನ ಗ್ರಂಥಾಲಯದ ಸ್ಥಳವನ್ನು ಸರ್ಕಾರ ಆನ್​ಲೈನ್ ಕಲಿಕೆಗೆ ಬಳಸಲು ಮುಂದಾಗಿದೆ.

ಕರ್ನಾಟಕ ರಾಜ್ಯದ 5,766 ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯದಲ್ಲಿ ಟಿವಿ ಸೆಟ್​ಗಳನ್ನು ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಯಾವುದೇ ತಂತ್ರಜ್ಞಾನದ ಬಳಕೆ, ಸೌಕರ್ಯ ಕೊರತೆ ಇರುವವರಿಗೆ, ಅದರಿಂದ ಶಿಕ್ಷಣದಿಂದ ವಂಚಿತರಾದವರಿಗೆ ಈ ಯೋಜನೆ ಸಹಾಯವಾಗಲಿದೆ. ಈ ಟಿವಿ ಸೌಲಭ್ಯದಿಂದ ಲೈವ್, ಆನ್​ಲೈನ್, ರೆಕಾರ್ಡೆಡ್ ಅಕಾಡೆಮಿಕ್ ಸೆಷನ್​​ಗಳನ್ನು ಕೇಳಲು, ನೋಡಲು ಸಹಾಯವಾಗಲಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಮಳೆಯಿಂದಾಗಿಯೂ ಮಕ್ಕಳ ಶಿಕ್ಷಣಕ್ಕೆ ತೊಂದರೆ ಉಂಟಾಗಿದೆ. ಮಲೆನಾಡು ಭಾಗದಲ್ಲಿ ಮಳೆಯಿಂದ ಬಹಳಷ್ಟು ನೆಟ್​ವರ್ಕ್ ಸಮಸ್ಯೆ ಕಂಡುಬಂದಿದೆ. ಕೊರೊನಾ ಕಾರಣದಿಂದ ಇನ್ನಷ್ಟು ಸಮಯ ನೇರಶಿಕ್ಷಣಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಈ ಹೊಸ ಕ್ರಮ ನಡೆಸುವ ಬಗ್ಗೆ ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್​ವರ್ಕ್ ಬಲಗೊಳಿಸುವ ಬಗ್ಗೆಯೂ ಚಿಂತಿಸಲಾಗಿದೆ ಎಂದು ಶೈಕ್ಷಣಿಕ ಸಲಹೆಗಾರ ಪ್ರೊ. ದೊರೆಸ್ವಾಮಿ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಪ್ರಶಾಂತ್ ಪ್ರಕಾಶ್ ಹೇಳಿದ್ದಾರೆ.

ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಬಗ್ಗೆ ಎಸ್ಎಸ್ಎಲ್​ಸಿ ಪರೀಕ್ಷೆ ಮುಗಿದ ನಂತರ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ಸಂಕಷ್ಟ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ನೆಟ್ವರ್ಕ್ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿ ಈ ಚಿಂತನೆ ಮಾಡಿದ್ದಾರೆ.

ಈಗಾಗಲೇ ಡಾ.ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!

SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಪ್ರವೇಶ: ಸಚಿವ ಸುರೇಶ್ ಕುಮಾರ್