PUC Exam 2021: ವಿದ್ಯಾರ್ಥಿಗಳೇ ಗಮನಿಸಿ, ಪ್ರಥಮ ಪಿಯುಗೆ ಆನ್​ಲೈನ್ ಪರೀಕ್ಷೆ ನಡೆಸಲು ನಿರ್ಧಾರ

ಈ ಮೊದಲು ಪ್ರಥಮ ಪಿಯುಸಿ ಪಾಸ್ ಎಂದು ಶಿಕ್ಷಣ ಸಚಿವರು ತಿಳಿಸಿದ್ದರೂ ಸಹ, ಆನ್ ಲೈನ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

PUC Exam 2021: ವಿದ್ಯಾರ್ಥಿಗಳೇ ಗಮನಿಸಿ, ಪ್ರಥಮ ಪಿಯುಗೆ ಆನ್​ಲೈನ್ ಪರೀಕ್ಷೆ ನಡೆಸಲು ನಿರ್ಧಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 11, 2021 | 3:53 PM

ಬೆಂಗಳೂರು: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪರೀಕ್ಷೆ ಮಾಡುವಂತೆ ಎಲ್ಲಾ ಕಾಲೇಜುಗಳಿಗೆ ಪಿಯು ಬೋರ್ಡ್‌ ಸುತ್ತೋಲೆ ನೀಡಿದೆ. ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ 2 ವಿಷಯಗಳಿಗೆ ಪರೀಕ್ಷೆ ನಡೆಸಲು ಬೋರ್ಡ್‌ ಸೂಚನೆ ನೀಡಿದೆ. ಈ ಮೊದಲು ಪ್ರಥಮ ಪಿಯುಸಿ ಪಾಸ್ ಎಂದು ಶಿಕ್ಷಣ ಸಚಿವರು ತಿಳಿಸಿದ್ದರೂ ಸಹ, ಆನ್ ಲೈನ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಪಿಯು ಬೋರ್ಡ್ 2 ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್​ಸೈಟ್​ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.

ಪ್ರಥಮ ಪಿಯುಸಿಗೆ ಆನ್ ಲೈನ್ ಪರೀಕ್ಷೆ ಹೇಗೆ?

* ಇಲಾಖೆ ವೆಬ್ ಸೈಟ್ ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳೇ ಡೌನ್ ಲೋಡ್ ಮಾಡಿಕೊಳ್ಳಬೇಕು

* ಪ್ರಶ್ನೆಗಳಿಗೆ ಉತ್ತರ ಬರೆದು ವಾಟ್ಸ್ ಅಪ್, ಮೇಲ್, ಅಂಚೆ ಮೂಲಕ ರವಾನಿಸಬೇಕು

* ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಉತ್ತರ ಪತ್ರಿಕೆಯನ್ನು ಕಳುಹಿಸಬೇಕು.

* ಉಪನ್ಯಾಸಕರು ಮೌಲ್ಯಮಾಪನ ಮಾಡಬೇಕು.

* ಮೌಲ್ಯಮಾಪನದ ಬಳಿಕ ಉಪನ್ಯಾಸಕರು SATs (ಸ್ಟೂಡೆಂಟ್ಸ್ ಅಚಿವ್ ಮೆಂಟ್ ಟ್ರಾಕಿಂಗ್ ಸಿಸ್ಟಂ) ಮೂಲಕ ಫಲಿತಾಂಶ ಅಪ್ಲೋಡ್ ಮಾಡಬೇಕು.

* ಅಸಿಸ್ಮೆಂಟ್ ಲೆಕ್ಕಾಚಾರದಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ ಕೈಗೊಂಡಿದೆ.

ಮೊದಲ ಅಸಿಸ್ಮೆಂಟ್ ಜೂ.20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಿರಬೇಕು. ಅದೇ ರೀತಿ ಎರಡನೇ ಅಸಿಸ್ಮೆಂಟ್ ಜೂನ್ 26 ರಿಂದ ಜುಲೈ 5ರ ಒಳಗೆ ನಡೆಸಬೇಕು.

ಉಪನ್ಯಾಸಕರು ಜುಲೈ 10ರೊಳಗೆ ಮೌಲ್ಯಮಾಪನ ಮಾಡಿರಬೇಕು. 2 ಪತ್ರಿಕೆಗಳ ಅಂಕವನ್ನು ಸಮೀಕರಣ ಮಾಡಿ ಜುಲೈ 15 ರೊಳಗೆ ಮುಗಿಸಿ, ಜುಲೈ 20ರೊಳಗೆ ಸ್ಯಾಟ್ಸ್ ನಲ್ಲಿ ಅಪ್ಲೋಡ್ ಮಾಡಿರಬೇಕು. ಎರಡೂ ಪರೀಕ್ಷೆಗಳ ಅಂಕವನ್ನು ಜುಲೈ 20ರೊಳಗೆ ಅಪ್ಲೋಡ್ ಮಾಡಲು ಡೆಡ್ ಲೈನ್ ವಿಧಿಸಲಾಗಿದೆ.

ಮೌಲ್ಯಮಾಪನ ಪ್ರಕ್ರಿಯೆ ಹೇಗೆ ಮಾಡ್ಬೇಕು? ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕು. ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕವೆಂದು ನೀಡಬೇಕು. ಪ್ರಯೋಗ ಸಹಿತಿ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಬೇಕಿದೆ. ಈ ಹಿಂದೆ ನಡೆಸಿದ ಪ್ರಾಯೋಗಿಕ ತರಗತಿಗಳ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ಅಂಕ ನೀಡಬೇಕು ಎಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ನಿಂದ ಸುತ್ತೋಲೆ ನೀಡಲಾಗಿದೆ.

ಇದನ್ನೂ ಓದಿ: ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ

CET 2021 Exam Time Table: ಆಗಸ್ಟ್ 28, 29ರಂದು ಸಿಇಟಿ ಪರೀಕ್ಷೆ ನಡೆಸಲಾಗುವುದು; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ

(online exam is conducted for 1st puc students decided karnataka education department)

Published On - 3:38 pm, Fri, 11 June 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್