AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆನ್​ಲೈನ್ ಹೂಡಿಕೆ ಹೆಸರಿನಲ್ಲಿ ಭಾರಿ ವಂಚನೆ, ಬೃಹತ್ ಜಾಲ ಭೇದಿಸಿದ ಕೆಂಗೇರಿ ಪೊಲೀಸರು, 8 ಮಂದಿಯ ಬಂಧನ

ಬೆಂಗಳೂರಿನಲ್ಲಿ ಆನ್​​ಲೈನ್​​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಬೃಹತ್ ಜಾಲ ಪತ್ತೆಯಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ದೇಶ ವಿದೇಶದ ಜನರನ್ನು ತಮ್ಮ ಜಾಲದಲ್ಲಿ ಬೀಳಿಸಿ ಕೋಟಿಗಟ್ಟಲೆ ಹಣ ದೊಚಿದ್ದಾರೆ. ಲಾಭದ ಆಮಿಷವೊಡ್ಡಿ ಜನರಿಗೆ ಮೋಸ ಮಾಡುತ್ತಿದ್ದವರು ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನಲ್ಲಿ ಆನ್​ಲೈನ್ ಹೂಡಿಕೆ ಹೆಸರಿನಲ್ಲಿ ಭಾರಿ ವಂಚನೆ, ಬೃಹತ್ ಜಾಲ ಭೇದಿಸಿದ ಕೆಂಗೇರಿ ಪೊಲೀಸರು, 8 ಮಂದಿಯ ಬಂಧನ
ಬೆಂಗಳೂರಿನಲ್ಲಿ ಕೋಟ್ಯಂತರ ರೂ.ಗಳ ಆನ್​ಲೈನ್ ದೋಖಾ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 07, 2025 | 2:43 PM

Share

ಬೆಂಗಳೂರು, ಅಕ್ಟೋಬರ್ 7: ಇತ್ತೀಚೆಗೆ ಆನ್​ಲೈನ್ ವಂಚನೆಗಳು, ಸೈಬರ್ ಅಪರಾಧಗಳು ( Cyber fraud) ಹೆಚ್ಚುತ್ತಲೇ ಇವೆ. ದಿನ ಬೆಳಗಾದರೆ ಒಬ್ಬರಲ್ಲ ಒಬ್ಬರು ಈ ಅಪರಾಧ ಜಾಲಕ್ಕೆ ಸಿಲುಕಿ ಹಣವನ್ನು ಕಳೆದುಕೊಳ್ಳುತ್ತಾರೆ. ಇದೀಗ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಇಂಥದ್ದೇ ಪ್ರಕರಣ ದಾಖಲಾಗಿದ್ದು, 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆನ್​ಲೈನ್ ಹೂಡಿಕೆಯ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಗಳು ದೇಶ ವಿದೇಶದ ಜನರನ್ನು ತಮ್ಮ ಜಾಲದಲ್ಲಿ ಬೀಳಿಸುತ್ತಿದ್ದರು.

ಲಾಭದ ಆಮಿಷವೊಡ್ಡಿ ಕೋಟ್ಯಂತರ ಹಣ ಲೂಟಿ

ಬೆಂಗಳೂರಿನಲ್ಲಿ ಆನ್​​ಲೈನ್​​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಫೇಸ್​​ಬುಕ್​​, ವಾಟ್ಸಾಪ್​, ಇನ್​​ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳ ಮೂಲಕ ಹೂಡಿಕೆಗೆ ಆಮಿಷವೊಡ್ಡಲಾಗುತ್ತಿತ್ತು. ದೇಶ ವಿದೇಶಗಳ ಜನರಿಗೆ ಹಣ ಹೂಡಿಕೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಹೂಡಿಕೆ ಮಾಡಿದ ಹಣಕ್ಕಿಂತ ಹೆಚ್ಚು ಲಾಭ ನೀಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ  ಆನ್​ಲೈನ್ ಟ್ರೇಡಿಂಗ್​ನಲ್ಲಿ ಬರೋಬ್ಬರಿ 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!

ನಿನ್ನೆ (ಅ.6) 7 ಕಡೆ ದಾಳಿ ನಡೆಸಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 19 ಲ್ಯಾಪ್​​ಟಾಪ್​​​, 40 ಮೊಬೈಲ್‌, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲುಗಳು, 10 ಮೆಮೊರಿ ಕಾರ್ಡ್ ಹಾಗೂ ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷಿನ್, 6 ಕೋಟಿ ಬೆಲೆಬಾಳುವ ಸ್ಥಿರಾಸ್ತಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆಯ ಪ್ರಕರಣಗಳು

ಈ ಹಿಂದೆಯೂ ಕರ್ನಾಟಕದ ಹಲವೆಡೆ ಸೈಬರ್ ವಂಚನೆಯ ಪ್ರಕರಣಗಳು ಕಂಡುಬಂದಿವೆ. ಇದೇ ತಿಂಗಳಿನಲ್ಲಿ ಬೆಂಗಳೂರು ಮೂಲದ ಇಬ್ಬರು ವ್ಯಕ್ತಿಗಳು ನಕಲಿ ಆನ್​ಲೈನ್ ಟ್ರೇಡಿಂಗ್ ಆ್ಯಪ್​ಗಳನ್ನು ನಂಬಿ ಸೈಬರ್ ವಂಚನೆಗೆ ಒಳಗಾಗಿದ್ದರು. ಇಬ್ಬರೂ ಸೇರಿ ಒಟ್ಟೂ 2.28 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದರು. ಅದಲ್ಲದೇ ಮ್ಯಾಟ್ರಿಮೊನಿಯಲ್ಲಿ 59 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರು ವ್ಯಕ್ತಿಯೊಬ್ಬನಿಂದ 2.3 ಕೋಟಿ ರೂ.ಗಳ ವಂಚನೆಗೆ ಒಳಗಾಗಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Tue, 7 October 25

Follow Us
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ