AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಶಲ್ಯದ ಆಟವಾದರೂ ಬೆಟ್ಟಿಂಗ್ ಇದ್ದರೆ ಸಾಂವಿಧಾನಿಕ ರಕ್ಷಣೆ ಇಲ್ಲ; ಕರ್ನಾಟಕದ ಕಾನೂನು ಎತ್ತಿಹಿಡಿದ ಸುಪ್ರೀಂಕೋರ್ಟ್

Supreme Court Upholds Karnataka & TN Online Betting Ban: ಸುಪ್ರೀಂ ಕೋರ್ಟ್ ಇತ್ತೀಚೆಗೆ ಐತಿಹಾಸಿಕ ತೀರ್ಪು ನೀಡಿದ್ದು, ಹಣ ಪಣಕ್ಕಿಟ್ಟು ಆಡುವ ಆನ್‌ಲೈನ್ ಕೌಶಲ್ಯದ ಆಟಗಳ ಬೆಟ್ಟಿಂಗ್‌ಗೆ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದಿದೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಆನ್‌ಲೈನ್ ಜೂಜಾಟ ನಿಷೇಧ ಕಾನೂನುಗಳನ್ನು ಎತ್ತಿಹಿಡಿಯಲಾಗಿದ್ದು, ರಾಜ್ಯ ಸರ್ಕಾರಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಅಥವಾ ನಿಷೇಧಿಸಲು ಸಂಪೂರ್ಣ ಅಧಿಕಾರವಿದೆ ಎಂದು ಸ್ಪಷ್ಟಪಡಿಸಿದೆ. ಇದು ಯುವ ಪೀಳಿಗೆಗೆ ಆನ್‌ಲೈನ್ ಜೂಜಿನಿಂದ ರಕ್ಷಣೆ ನೀಡಲು ಸಹಕಾರಿಯಾಗಲಿದೆ.

ಕೌಶಲ್ಯದ ಆಟವಾದರೂ ಬೆಟ್ಟಿಂಗ್ ಇದ್ದರೆ ಸಾಂವಿಧಾನಿಕ ರಕ್ಷಣೆ ಇಲ್ಲ; ಕರ್ನಾಟಕದ ಕಾನೂನು ಎತ್ತಿಹಿಡಿದ ಸುಪ್ರೀಂಕೋರ್ಟ್
ಗೇಮ್Image Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 03, 2026 | 4:26 PM

Share

ನವದೆಹಲಿ, ಜೂನ್ 3: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ (with stakes) ಆನ್‌ಲೈನ್ ಕೌಶಲ್ಯದ ಆಟಗಳ (Games of Skill) ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳ ಕಾನೂನುಗಳ ಸಿಂಧುತ್ವವನ್ನು ದೇಶದ ಅತ್ಯುನ್ನತ ನ್ಯಾಯಾಲಯವು ಎತ್ತಿಹಿಡಿದಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು

ಹೈಕೋರ್ಟ್‌ಗಳ ಈ ಹಿಂದಿನ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ:

  • ಟ್ರೇಡ್ ರೈಟ್ಸ್ ಅನ್ವಯಿಸುವುದಿಲ್ಲ: ಸಂವಿಧಾನದ ವಿಧಿ 19(1)(g) ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನಗಿಷ್ಟ ಬಂದ ವ್ಯಾಪಾರ ಅಥವಾ ವೃತ್ತಿ ಮಾಡುವ ಸ್ವಾತಂತ್ರ್ಯವಿದೆ. ಆದರೆ, ಹಣವನ್ನು ಪಣಕ್ಕಿಟ್ಟು ಆಡುವ ಜೂಜಾಟ ಅಥವಾ ಬೆಟ್ಟಿಂಗ್ ಪ್ರಕ್ರಿಯೆಯು ಈ ‘ಮೂಲಭೂತ ವ್ಯಾಪಾರದ ಹಕ್ಕಿನ’ ಅಡಿಯಲ್ಲಿ ಬರುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
  • ಕೌಶಲ್ಯದ ಆಟಗಳಿಗೂ ನಿಯಮ ಅನ್ವಯ: ಆಟವು ಕೌಶಲ್ಯ ಆಧಾರಿತವಾಗಿದ್ದರೂ (ಉದಾಹರಣೆಗೆ ರಮ್ಮಿ, ಪೋಕರ್ ಅಥವಾ ಫ್ಯಾಂಟಸಿ ಗೇಮ್ಸ್), ಅದರಲ್ಲಿ ಹಣವನ್ನು ಪಣಕ್ಕಿಟ್ಟು ಬಾಜಿ ಕಟ್ಟಿದಾಗ ಅದು ಜೂಜಿನ ಸ್ವರೂಪ ಪಡೆದುಕೊಳ್ಳುತ್ತದೆ. ಅಂತಹ ವ್ಯವಹಾರಗಳಿಗೆ ಕಾನೂನಿನ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
  • ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ: ಸಾರ್ವಜನಿಕ ಸುವ್ಯವಸ್ಥೆ, ಯುವಜನರ ಹಿತರಕ್ಷಣೆ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆನ್‌ಲೈನ್ ಬೆಟ್ಟಿಂಗ್ ಆಟಗಳನ್ನು ನಿಷೇಧಿಸುವ ಅಥವಾ ನಿಯಂತ್ರಿಸುವ ಸಂಪೂರ್ಣ ಕಾನೂನು ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ

ಏನಿದು ‘ಗೇಮ್ ಆಫ್ ಸ್ಕಿಲ್’ (Game of Skill)?

ಯಾವ ಆಟಗಳಲ್ಲಿ ಗೆಲುವು ಅಥವಾ ಸೋಲು ಕೇವಲ ಅದೃಷ್ಟದ ಮೇಲೆ ನಿರ್ಧಾರವಾಗದೆ, ಆಟಗಾರನ ವೈಯಕ್ತಿಕ ಸಾಮರ್ಥ್ಯದ ಮೇಲೆ ನಿರ್ಧಾರವಾಗುತ್ತದೆಯೋ ಅದನ್ನು ‘ಗೇಮ್ ಆಫ್ ಸ್ಕಿಲ್’ (ಕೌಶಲ್ಯದ ಆಟ) ಎನ್ನಲಾಗುತ್ತದೆ.

ಇದರಲ್ಲಿ ಆಟಗಾರನ ಬೌದ್ಧಿಕ ಶಕ್ತಿ, ತರಬೇತಿ, ಅನುಭವ, ಆಟದ ತಂತ್ರ, ಗಮನ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಅತ್ಯಂತ ಮುಖ್ಯವಾಗಿರುತ್ತದೆ. ಉದಾಹರಣೆಗೆ, ರಮ್ಮಿ, ಪೋಕರ್, ಚೆಸ್ ಅಥವಾ ಕೆಲವು ಮಾದರಿಯ ಫ್ಯಾಂಟಸಿ ಸ್ಪೋರ್ಟ್ಸ್ ಆಟಗಳು.

ಲಾಟರಿ ಅಥವಾ ಕಾಯಿನ್ ಟಾಸ್‌ನಂತಹ ಆಟಗಳು ಕೇವಲ ಅದೃಷ್ಟವನ್ನು ನಂಬಿರುತ್ತವೆ (Game of Chance). ಆದರೆ ಕೌಶಲ್ಯದ ಆಟಗಳಲ್ಲಿ ಅದೃಷ್ಟಕ್ಕಿಂತ ಆಟಗಾರನ ಬುದ್ಧಿವಂತಿಕೆಗೆ ಹೆಚ್ಚಿನ ಪ್ರಾಮುಖ್ಯತೆ ಇರುತ್ತದೆ.

ಕರ್ನಾಟಕ ಈ ಕಾನೂನನ್ನು ಪಾಸ್ ಮಾಡಿದ್ದು ಯಾವಾಗ?

ಆನ್‌ಲೈನ್ ಜೂಜಾಟದ ದಾಸರಾಗಿ ರಾಜ್ಯದ ಯುವ ಪೀಳಿಗೆ ಹಾದಿ ತಪ್ಪುತ್ತಿರುವುದನ್ನು ಮನಗಂಡಿದ್ದ ಕರ್ನಾಟಕ ಸರ್ಕಾರ, 2021ರ ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಮಂಡಲದಲ್ಲಿ ‘ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯ್ದೆ, 2021’ ಅನ್ನು ಅಂಗೀಕರಿಸಿತ್ತು.

ಈ ಕಾನೂನಿನ ಪ್ರಕಾರ, ಕರ್ನಾಟಕದಲ್ಲಿ ಹಣ ಅಥವಾ ಯಾವುದೇ ಮೌಲ್ಯಯುತ ವಸ್ತುವನ್ನು ಪಣಕ್ಕಿಟ್ಟು ಆಡುವ ಎಲ್ಲಾ ರೀತಿಯ ಆನ್‌ಲೈನ್ ಗೇಮ್‌ಗಳು, ಜೂಜಾಟಗಳು ಮತ್ತು ಬೆಟ್ಟಿಂಗ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ತಪ್ಪು ಮಾಡಿದವರಿಗೆ ದಂಡ ಮತ್ತು ಜೈಲು ಶಿಕ್ಷೆಯ ಪ್ರಾವಿಧಾನವನ್ನೂ ಮಾಡಲಾಗಿತ್ತು.

ಇದನ್ನೂ ಓದಿ: ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ

ಹೈಕೋರ್ಟ್ ನೀಡಿದ್ದ ಆಘಾತ: ಆದರೆ, ಈ ಕಾನೂನನ್ನು ಪ್ರಶ್ನಿಸಿ ‘ಆನ್‌ಲೈನ್ ಗೇಮಿಂಗ್ ಫೆಡರೇಶನ್’ ಮತ್ತು ವಿವಿಧ ಗೇಮಿಂಗ್ ಕಂಪನಿಗಳು ಕೋರ್ಟ್ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಧಾರವಾಡ ಮತ್ತು ಬೆಂಗಳೂರು ಪೀಠಗಳನ್ನೊಳಗೊಂಡ ಕರ್ನಾಟಕ ಹೈಕೋರ್ಟ್, 2022ರ ಫೆಬ್ರವರಿಯಲ್ಲಿ ಸರ್ಕಾರದ ಈ ತಿದ್ದುಪಡಿ ಕಾಯ್ದೆಯ ಪ್ರಮುಖ ನಿಯಮಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. “ಕೌಶಲ್ಯದ ಆಟಗಳನ್ನು ಜೂಜಿನ ವ್ಯಾಪ್ತಿಗೆ ತಂದು ಸಂಪೂರ್ಣ ನಿಷೇಧಿಸುವುದು ಸಂವಿಧಾನ ಬಾಹಿರ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಈಗ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬದಿಗೆ ಸರಿಸಿ, ರಾಜ್ಯಗಳ ಕಟ್ಟುನಿಟ್ಟಿನ ನಿಷೇಧದ ಕಾನೂನುಗಳನ್ನು ಎತ್ತಿಹಿಡಿದಿರುವುದರಿಂದ ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಭಾರಿ ಆಘಾತ ಎದುರಾಗಿದೆ.

ಸಮಾಜದ ಮೇಲಾಗುವ ಪರಿಣಾಮಗಳೇನು?

ಇತ್ತೀಚಿನ ವರ್ಷಗಳಲ್ಲಿ ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳಲ್ಲಿ ಹಣ ಕಳೆದುಕೊಂಡು ಯುವಕರು ಮತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದೇಶಾದ್ಯಂತ ತೀವ್ರವಾಗಿ ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಅತ್ಯಂತ ಮಹತ್ವದ್ದಾಗಿದೆ. ಇದು ರಾಜ್ಯ ಸರ್ಕಾರಗಳಿಗೆ ತಮ್ಮ ರಾಜ್ಯದ ಗಡಿಯೊಳಗೆ ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಆ್ಯಪ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮತ್ತು ಯುವ ಪೀಳಿಗೆಯನ್ನು ಆನ್‌ಲೈನ್ ಜೂಜಿನ ದಾಸರಾಗದಂತೆ ತಡೆಯಲು ಕಾನೂನಾತ್ಮಕವಾಗಿ ದೊಡ್ಡ ಶಕ್ತಿಯನ್ನು ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ