ರಾಜ್ಯದಲ್ಲಿ ಆನ್‌ಲೈನ್ ಗೇಮ್ ನಿಷೇಧಕ್ಕೆ ಚಿಂತನೆ; ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು

| Updated By: Ganapathi Sharma

Updated on: Aug 01, 2023 | 9:26 PM

ಅಪರಾಧ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ. ಜತೆಗೆ, ಸೈಬರ್ ಕ್ರೈಂ ಕಡಿಮೆ ಮಾಡಲು ಆನ್‌ಲೈನ್ ಬೆಟ್ಟಿಂಗ್ ನಿಷೇಧ ಮಾಡುವ ಬಗ್ಗೆಯೂ ಯೋಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಆನ್‌ಲೈನ್ ಗೇಮ್ ನಿಷೇಧಕ್ಕೆ ಚಿಂತನೆ; ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು
ಸಾಂದರ್ಭಿಕ ಚಿತ್ರ
Follow us on

ಮಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಗೇಮ್ ನಿಷೇಧ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಆನ್‌ಲೈನ್ ಗೇಮ್ ನಿಷೇಧಿಸಲಾಗಿದೆ. ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ. ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ಗಳಿಂದ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ ಎಂದರು.

ಅಪರಾಧ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್ ಗೇಮ್, ಲೋನ್‌ ಆ್ಯಪ್​​ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ. ಜತೆಗೆ, ಸೈಬರ್ ಕ್ರೈಂ ಕಡಿಮೆ ಮಾಡಲು ಆನ್‌ಲೈನ್ ಬೆಟ್ಟಿಂಗ್ ನಿಷೇಧ ಮಾಡುವ ಬಗ್ಗೆಯೂ ಯೋಚಿಸಲಾಗಿದೆ. ಇದೊಂದು ಜೂಜುದಂಧೆ ಇದ್ದಂತೆ. ಇದರಿಂದ ಜನ ಹಣ ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆತಂಕ ವ್ಯಕ್ತಪಡಿಸಿದರು.

ಜತೆಗೆ ಮಾಧ್ಯಮ ವರದಿಗಳನ್ನು ಪ್ರಸ್ತಾಪಿಸಿ, ಸೈಬರ್ ಕ್ರೈಂ ನಿಯಂತ್ರಣಕ್ಕೆ ನಿಗಾವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡುವ ಸಾಲದ ಆ್ಯಪ್​ಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಇತ್ತೀಚೆಗೆ ಹೇಳಿದ್ದರು. ಅಂಥ ಆ್ಯಪ್​​ಗಳ ಬಗ್ಗೆ ಜಾಗರೂಕರಾಗಿರಬೇಕು. ಅವುಗಳಿಂದ ಸಾಲ ಪಡೆಯಬಾರದು ಎಂದು ಅವರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಖಾಲಿಯಿರುವ ಎರಡೂವರೆ ಲಕ್ಷ ಹುದ್ದೆ ಭರ್ತಿಗೆ ಕ್ರಮ; ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸಿದ್ದರಾಮಯ್ಯ ಅವರು ಮಂಗಳೂರಿನ ಹೊರವಲಯದ ಕಡಲ್ಕೊರೆತ ಪೀಡಿತ ಪ್ರದೇಶ ಬಟ್ಟಪಾಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿ, ಕಡಲ್ಕೊರತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Tue, 1 August 23