ಕೊರೊನಾ ಬಿಕ್ಕಟ್ಟು: ನೋಂದಣಿ ಇಲಾಖೆಯ ದಸ್ತಾವೇಜು ನಕಲು, ಋಣಭಾರ ಪತ್ರಕ್ಕೆ ಆಫ್​ಲೈನ್ ಸೇವೆ ಇನ್ನಿಲ್ಲ

ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು ಫೇಸ್​ಶೀಲ್ಡ್ ಧರಿಸಿ‌ ಕೆಲಸ ನಿರ್ವಹಿಸಬೇಕು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಸೂಚನೆ ನೀಡಿದೆ.

ಕೊರೊನಾ ಬಿಕ್ಕಟ್ಟು: ನೋಂದಣಿ ಇಲಾಖೆಯ ದಸ್ತಾವೇಜು ನಕಲು, ಋಣಭಾರ ಪತ್ರಕ್ಕೆ ಆಫ್​ಲೈನ್ ಸೇವೆ ಇನ್ನಿಲ್ಲ
ಸಾಂಕೇತಿಕ ಚಿತ್ರ
Follow us
|

Updated on: Apr 23, 2021 | 10:48 PM

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು ಫೇಸ್​ಶೀಲ್ಡ್ ಧರಿಸಿ‌ ಕೆಲಸ ನಿರ್ವಹಿಸಬೇಕು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಸೂಚನೆ ನೀಡಿದೆ. ದಸ್ತಾವೇಜು ದೃಢೀಕೃತ ನಕಲುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಕಡ್ಡಾಯವಾಗಿ ಕಾವೇರಿ ಆನ್​ಲೈನ್ ಸೇವೆ ಮೂಲಕವೇ ನಡೆಸಬೇಕು. ಜತೆಗೆ ಋಣಭಾರ ಪತ್ರವನ್ನು ಆನ್​ಲೈನ್ ಮೂಲಕ ಸ್ವೀಕರಿಸಿ ನೀಡಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಶುಕ್ರವಾರ ಒಂದೇ ದಿನ 26,962 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 190 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 16,662 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 124 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,74,959ಕ್ಕೆ (12.74 ಲಕ್ಷ) ಏರಿಕೆಯಾಗಿದೆ. ಮೃತರ ಒಟ್ಟು ಸಂಖ್ಯೆ 14,075 ತಲುಪಿದೆ. ಸೋಂಕಿತರ ಪೈಕಿ 10,46,554 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,14,311 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 190 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 124 ಜನರು ಸಾವನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 8, ಕಲಬುರಗಿ 7, ಬಳ್ಳಾರಿ 6, ತುಮಕೂರು, ಕೋಲಾರ, ಧಾರವಾಡ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ಐವರು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾವೇರಿ ಜಿಲ್ಲೆಗಳಲ್ಲಿ ತಲಾ ನಾಲ್ವರು, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ಯಾದಗಿರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 14,075 ಜನರು ಸಾವನ್ನಪ್ಪಿದ್ದಾರೆ.

ಇಂದಿನಿಂದಲೇ ಶುರುವಾಗಿದೆ ವಾರಾಂತ್ಯದ ಕರ್ಫ್ಯೂ

ಕರ್ನಾಟಕದಲ್ಲಿ ಅಂಕೆಮೀರಿ ಹಬ್ಬುತ್ತಿರುವ ಕೊವಿಡ್-19 ಪಿಡುಗನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ರಾಜ್ಯವಿಡೀ ರಾತ್ರಿ ಕರ್ಫ್ಯೂ ವಿಧಿಸುವ ಜೊತೆಗೆ ಕೆಲವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಅವುಗಳೊಂದಿಗೆ ವಾರಾಂತ್ಯದ ಕರ್ಫ್ಯೂ ಸಹ ಹೇರಿದೆ. ಹೊಸ ಲಾಕ್​ಡೌನ್​ಗೆ ಸಂಬಂಧಿಸಿದ ನಿಯಮಾವಳಿಗಳು ಏಪ್ರಿಲ್ 21ರಿಂದ ಜಾರಿಗೆ ಬಂದಿದ್ದು, ಮೇ 4ರವರೆಗೆ ಅಸ್ತಿತ್ವದಲ್ಲಿರುತ್ತವೆ. ಕೇವಲ ತುರ್ತು ಸಂದರ್ಭ ಮತ್ತು ಅಗತ್ಯ ವಸ್ತುಗಳ ಖರೀದಿಗೆ ಹೊರತುಪಡಿಸಿ ಬೇರೆ ಯಾವ ಕಾರಣಕ್ಕೂ ಜನ ಮನೆಬಿಟ್ಟು ಆಚೆ ಬಾರದಂತೆ ಸರ್ಕಾರ ಆಗ್ರಹಿಸಿದೆ. ಸರ್ಕಾರ ವಿಧಿಸಿರುವ ವಾರಾಂತ್ಯದ ಲಾಕ್​ಡೌನ್ ಇಂದಿನಿಂದ ಅಂದರೆ ಶುಕ್ರವಾರದಿಂದ ಜಾರಿಗೆ ಬಂದಿದ್ದು, ಉಳಿದ ದಿನಗಳಲ್ಲಿ ರಾತ್ರಿ ಕರ್ಪ್ಯೂಗೆ ಸಂಬಂಧಿಸಿದ ಎಲ್ಲ ನಿಯಮಗಳು ಅನ್ವಯವಾಗುತ್ತವೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Online services must in Sub Registrar offices due to covid19 case increase in Karnataka)

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ