ಬೆಂಗಳೂರು: ಅಂತ್ಯಕ್ರಿಯೆ ವೇಳೆ ಕೇವಲ ಐವರಿಗೆ ಮಾತ್ರ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐದು ಜನಕ್ಕಿಂತ ಹೆಚ್ಚು ಜನರು ಅಂತ್ಯಕ್ರಿಯೆ ವೇಳೆ ಭಾಗವಹಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ದಿನೇ ದಿನೇ ಕೊರೊನಾ ಸೋಂಕಿತರು ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ಕಾರಣ ರಾಜ್ಯ ಸರ್ಕಾರ ಹೊಸ ಆದೇಶ ಪ್ರಕಟಿಸಿದೆ.
ಈ ಮೊದಲು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದ ಆದೇಶದಲ್ಲಿ ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಇಂದು (ಏಪ್ರಿಲ್ 25) ಒಂದೇ ದಿನ ಒಟ್ಟು 34,804 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 143 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 20,733 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಒಂದೇ ದಿನ ಸೋಂಕಿಗೆ 77 ಜನರು ಬಲಿಯಾಗಿದ್ದಾರೆ.
Cremation/funerals to be allowed with maximum of 5 people adhering to #COVID19 appropriate behaviour: Government of Karnataka
— ANI (@ANI) April 25, 2021
ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,39,201ಕ್ಕೆ (13.39 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 14,426 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,62,594 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,62,162 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು 20,733 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 6,53,656ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 77 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,800 ಜನರು ಮೃತಪಟ್ಟಿದ್ದಾರೆ. 6,53,656 ಸೋಂಕಿತರ ಪೈಕಿ 4,67,313 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,80,542 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ರಾಜ್ಯದಲ್ಲಿ ಈವರೆಗೆ ಕೊರೊನಾಗೆ 14,426 ಜನರು ಬಲಿಯಾಗಿದ್ದಾರೆ. ಭಾನುವಾರ ಒಂದೇ ದಿನ ಮೃತಪಟ್ಟವರ ಸಂಖ್ಯೆ 143. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 77 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಬಳ್ಳಾರಿ ಜಿಲ್ಲೆ ಇದೆ. ಬಳ್ಳಾರಿ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 16 ಜನರು ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 9 ಜನರು ಬಲಿಯಾಗಿದ್ದಾರೆ. ಕಲಬುರಗಿ 7, ತುಮಕೂರು, ಧಾರವಾಡ ಜಿಲ್ಲೆಗಳಲ್ಲಿ ತಲಾ 6, ಹಾಸನ 4, ಮಂಡ್ಯ 3, ವಿಜಯಪುರ, ಕೋಲಾರ, ಹಾವೇರಿ, ಬೀದರ್ ಜಿಲ್ಲೆಗಳಲ್ಲಿ ತಲಾ ಇಬ್ಬರು, ಚಾಮರಾಜನಗರ, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ
(Only 5 members are allowed to body cremation orders Karnataka Govt)
Published On - 8:11 pm, Sun, 25 April 21