ರಾಜ್ಯದಲ್ಲಿ ಮೂರಂಕಿಗೆ ಇಳಿದ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ
ಬೆಂಗಳೂರಿನಲ್ಲಿಂದು 369 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. 10 ಜನರ ಪೈಕಿ ಐವರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ರಾಮನಗರ ಹಾಗೂ ಗದಗದಲ್ಲಿ ಅತಿ ಕಡಿಮೆ ಎಂದರೆ 2 ಕೊರೊನಾ ಕೇಸ್ ಪತ್ತೆ ಆಗಿದೆ.
ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ಕಡಿಮೆ ಆಗಿದೆ. ಹಲವು ತಿಂಗಳ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣ ಮೂರಂಕಿಗೆ ಇಳಿಕೆ ಆಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 830 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,02,240ಕ್ಕೇರಿದೆ.
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,954 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 16,065 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 254 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿಂದು 369 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. 10 ಜನರ ಪೈಕಿ ಐವರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ರಾಮನಗರ ಹಾಗೂ ಗದಗದಲ್ಲಿ ಅತಿ ಕಡಿಮೆ ಎಂದರೆ 2 ಕೊರೊನಾ ಕೇಸ್ ಪತ್ತೆ ಆಗಿದೆ.
ಈಗಾಗಲೇ ತುರ್ತು ಬಳಕೆಗೆ ಕೊರೊನಾ ಔಷಧ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈಗಾಗಲೇ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸುತ್ತೋಲೆ ಕೂಡ ಹೊರಡಿಸಿದೆ. ದೇಶದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಒಪ್ಪಿಗೆ ಸಿಗುತ್ತಿದ್ದಂತೆ, ಜನರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಕೊರೊನಾ ಲಸಿಕೆ ವಿತರಣೆಗೆ ಸರ್ಕಾರದಿಂದ ಮಾರ್ಗಸೂಚಿ; ಆನ್ಲೈನ್ ನೋಂದಣಿಗೆ ಅವಕಾಶ