AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ದಲಿತ ಸಿಎಂ ಕಾಂಗ್ರೆಸ್‌ನಿಂದ ಮಾತ್ರ’ ಎಂಬ ಸಂದೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ವಿಪಕ್ಷಗಳ ಟೀಕೆ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಹೇಳಿಕೆ ಎಂಬ ವಾದಗಳ ನಡುವೆ, ಸಿದ್ದರಾಮಯ್ಯ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆಯು ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಮತ್ತು ಅಧಿಕಾರದ ಕದನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ!
ಸಿದ್ದರಾಮಯ್ಯImage Credit source: TV9 Network
ಪ್ರಸನ್ನ ಗಾಂವ್ಕರ್​
| Edited By: |

Updated on: Feb 23, 2026 | 6:43 AM

Share

ಬೆಂಗಳೂರು, ಫೆಬ್ರವರಿ 23: ಸಿಎಂ ಸಿದ್ದರಾಮಯ್ಯ (Siddaramaiah) ಮಾಡಿದ್ದ ಸರಣಿ ಎಕ್ಸ್ ಸಂದೇಶಗಳ ಬಗ್ಗೆ ನಾನಾ ರೀತಿಯಲ್ಲಿ ಚರ್ಚೆ ನಡೆದಿತ್ತು. ವಿಪಕ್ಷ ನಾಯಕರಂತೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಉದ್ದೇಶಿಸಿಯೇ ಸಿದ್ದರಾಮಯ್ಯ ಸರಣಿ ಸಂದೇಶಗಳನ್ನು ಪ್ರಕಟಿಸಿದ್ದಾರೆ ಎಂದು ತಿರುಗು ಬಾಣ ಬಿಟ್ಟಿದ್ದರು. ಇದರಿಂದ ಅಲರ್ಟ್ ಆದ ಸಿದ್ದರಾಮಯ್ಯ, ಎಕ್ಸ್ ಸಂದೇಶಗಳ ಬಗ್ಗೆ ತಾವೇ ಸಮರ್ಥನೆ ನೀಡಿದ್ದಾರೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡುತ್ತಾ, ದಲಿತ ಸಿಎಂ ದಾಳ ಉರುಳಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಅವರ ತಂದೆ ಹೆಚ್​ಡಿ ದೇವೇಗೌಡರು, ಸ್ವಜಾತಿ ವಿರೋಧಿಗಳು. ಕುಟುಂಬವಾದಿಗಳು ಎಂದು ಎಕ್ಸ್ ಸಂದೇಶ ಪ್ರಕಟಿಸಿರುವ ಸಿಎಂ, ಮುಂದೆ ದಲಿತರು ಮುಖ್ಯಮಂತ್ರಿ ಆದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಬಿಜೆಪಿ ಜೆಡಿಎಸ್‌ನವರು ದಲಿತರನ್ನು ಸಿಎಂ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಆದರೆ, ಸಿದ್ದರಾಮಯ್ಯ ಎಕ್ಸ್ ಸಂದೇಶಕ್ಕೆ ಮತ್ತೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ, ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ದಾಳ ಉರುಳಿಸಿದ್ದಾರೆ ಎಂದು ವ್ಯಾಖ್ಯಾನಿಸಿದ್ದಾರೆ. ಸಿದ್ದರಾಮಯ್ಯ ಎಕ್ಸ್ ಸಂದೇಶಗಳ ಬಗ್ಗೆ ಬಿಜೆಪಿ ನಾಯಕರು ಕೂಡ ವ್ಯಂಗ್ಯವಾಡಿದ್ದು, ಕಾಂಗ್ರೆಸ್​ ಪಕ್ಷದೊಳಗಿನ ಬೆಳವಣಿಗೆ ಬಗ್ಗೆಯೇ ಉಲ್ಲೇಖಿಸಿದ್ದಾರೆ ಎಂದು ಕಾಲೆಳೆದಿದ್ದಾರೆ.

ದಲಿತರು ಕಾಂಗ್ರೆಸ್ ಬೆನ್ನೆಲುಬು, ದಲಿತರು ಸಿಎಂ ಆಗ್ಬೇಕು: ಮಹದೇವಪ್ಪ

ದಲಿತ ಸಿಎಂ ದಾಳ ಉರುಳಿಸಿದ ಸಿದ್ದರಾಮಯ್ಯ ಬಾಣಕ್ಕೆ, ಅವರ ಆಪ್ತ ಸಚಿವ ಮಹದೇವಪ್ಪ ದನಿಗೂಡಿಸಿದ್ದಾರೆ. ಸದ್ಯ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮುಂದೆ ದಲಿತರು ಸಿಎಂ ಆಗಬೇಕು. ಇದು ಹೈಕಮಾಂಡ್ ಗಮನದಲ್ಲಿದೆ ಎಂದಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಬಜೆಟ್ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದಿದ್ದಾರೆ.

ಕುಮಾರಸ್ವಾಮಿ, ಪರಮೇಶ್ವರ್ ಭೇಟಿ

ಏತನ್ಮಧ್ಯೆ, ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕೇಂದ್ರ ಸಚಿವ ಕು‌ಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿವಕುಮಾರ್, ಕ್ಷೇತ್ರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿ ಮಾಡಿರಬೇಕು ಎಂದಿದ್ದಾರೆ.

ಇದನ್ನೂ ಓದಿ: ವಿವಾದದ ಬೆನ್ನಲ್ಲೇ ಸರಣಿ ಎಕ್ಸ್​​ ಪೋಸ್ಟ್​​ ಬಗ್ಗೆ ಸಿಎಂ ಸ್ಪಷ್ಟನೆ: ಹೆಚ್​​ಡಿಕೆಗೂ ತಿವಿದ ಸಿದ್ದರಾಮಯ್ಯ

ಒಟ್ಟಿನಲ್ಲಿ, ಕಾಂಗ್ರೆಸ್ ಕೋಟೆಯಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಹಾಗೂ ಡಿಸಿಎಂ ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗಿ ನಡೆಯುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ