AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್​ನಿಂದ ಬಂತು ಖಡಕ್ ಸಂದೇಶ, ಸಚಿವರ ವರದಿ ಸಲ್ಲಿಸಲು ಸೂಚನೆ

ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ಕಲಹದ ಬಗ್ಗೆ ಹೈಕಮಾಂಡ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಸಚಿವರ ಅನಗತ್ಯ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಹೈಕಮಾಂಡ್ ಅಭಿಪ್ರಾಯಪಟ್ಟಿದ್ದು, ಪಕ್ಷದ ಶಿಸ್ತು ಉಲ್ಲಂಘಿಸಿ ವಿರುದ್ಧ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ನಾಯಕತ್ವ ಬದಲಾವಣೆ ಸಂಬಂಧ ಮಾತನಾಡುವವರ ವರದಿ ಕೋರಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್​ನಿಂದ ಬಂತು ಖಡಕ್ ಸಂದೇಶ, ಸಚಿವರ ವರದಿ ಸಲ್ಲಿಸಲು ಸೂಚನೆ
ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ: ಕಾಂಗ್ರೆಸ್ ಹೈಕಮಾಂಡ್​ನಿಂದ ಬಂತು ಖಡಕ್ ಸಂದೇಶ
ಪ್ರಸನ್ನ ಗಾಂವ್ಕರ್​
| Edited By: |

Updated on: Jan 16, 2025 | 7:58 AM

Share

ಬೆಂಗಳೂರು, ಜನವರಿ 16: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿರುವ ಬೆನ್ನಲ್ಲೇ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ಖಡಕ್ ಸಂದೇಶ ರವಾನೆ ಮಾಡಿದೆ. ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬ ಸ್ಪಷ್ಟೀಕರಣ ನೀಡಿದ್ದಾರೆ.

ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ಎಂದಿರುವ ಹೈಕಮಾಂಡ್ ಹೇಳಿರುವುದಾಗಿ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಬಹಿರಂಗ ಹೇಳಿಕೆ ನೀಡುವವರ ವರದಿ ಕೇಳಿದ ಹೈಕಮಾಂಡ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ, ಸಚಿವರ ಬದಲಾವಣೆ ಎಲ್ಲವೂ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು. ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ, ಪಕ್ಷದ ಹೈಕಮಾಂಡ್. ಪಕ್ಷದ ನಾಯಕರು ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕು. ಇಂತಹ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್‌ ನಾಯಕರು ಕೇಳಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಚಿವರ ನಡತೆ ಸರಿಯಲ್ಲ: ಹೈಕಮಾಂಡ್ ಗರಂ

ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ. ಆದರೆ ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುವವರ ಸಂಪೂರ್ಣ ವರದಿ ನೀಡಿ ಎಂದು ಹೈಕಮಾಂಡ್ ಕೇಳಿದೆ. ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್‌ ಸೂಚಿಸಿದೆ. ಕೆಲವು ಸಚಿವರು ಪದೇ ಪದೆ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ ಹೆಚ್​ಸಿ ಮಹದೇವಪ್ಪ ಅವರು ಪದೇ ಪದೇ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಪರಿಣಾಮ ತಟ್ಟಲಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸಾಹುಕಾರ್ ಹೊಸ ಆಟ: ಸಿಎಂ ಕರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆಶಿಗೆ ಜಾರಕಿಹೊಳಿ ಶಾಕ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು