AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಹಸ್ತ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಯಶವಂತಪುರ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಅವರೊಂದಿಗೆ ಬಿಜೆಪಿ ನಾಯಕರು ಸಂಧಾನ ನಡೆಸುತ್ತಿರುವ ನಡುವೆಯೇ ಸೋಮಶೇಖರ್ ಬೆಂಬಲಿಗರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಆಪರೇಷನ್ ಹಸ್ತ: ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ
ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಬೆಂಬಲಿಗರು
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on:Aug 21, 2023 | 9:19 PM

Share

ಬೆಂಗಳೂರು, ಆಗಸ್ಟ್ 21: ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (S.T.Somashekhar) ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

ಇದನ್ನೂ ಓದಿ: ಆಪರೇಷನ್ ಹಸ್ತ ಭೀತಿ; ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ,  ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್

ಸೋಮಶೇಖರ್ ಹೆಸರು ಹೇಳದಂತೆ ತಡೆದ ಶಾಸಕ ಶ್ರೀನಿವಾಸ್

ಕೆಪಿಸಿಸಿ ಸಭೆಯಲ್ಲಿ ಮಾತನಾಡುತ್ತಿದ್ದ ಆನೆಕಲ್ ಶಾಸಕ ಶಿವಣ್ಣ ಅವರು, ಸೋಮಶೇಖರ್ ಹೆಸರು ಹೇಳಿದ್ದಾರೆ. ಈ ವೇಳೆ ಸೋಮಶೇಖರ್ ಹೆಸರು ಹೇಳದಂತೆ ನೆಲಮಂಗಲ ಶಾಸಕ ಶ್ರೀನಿವಾಸ್ ಅವರು ತಡೆದಿದ್ದಾರೆ. ಕೂಡಲೇ ಮಾತು‌ ಬದಲಾಯಿಸಿದ ಅವರು, ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು.  2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ‌ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Mon, 21 August 23

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ