AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Kaveri: ಹಕ್ಕಿಪಿಕ್ಕಿ ಜನ ಸೇರಿ ಸುಡಾನ್​ನಿಂದ ಭಾರತೀಯರ ಕರೆತರಲು ಆಪರೇಷನ್ ಕಾವೇರಿ

ಸಂಘರ್ಷಪೀಡಿತ ಸುಡಾನ್​ನಲ್ಲಿ ಸಿಲುಕಿರುವ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದವರೂ ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಸಲುವಾಗಿ ಕೇಂದ್ರ ಸರ್ಕಾರವು ಸೋಮವಾರ ‘ಆಪರೇಷನ್ ಕಾವೇರಿ’ಗೆ ಚಾಲನೆ ನೀಡಿದೆ.

Operation Kaveri: ಹಕ್ಕಿಪಿಕ್ಕಿ ಜನ ಸೇರಿ ಸುಡಾನ್​ನಿಂದ ಭಾರತೀಯರ ಕರೆತರಲು ಆಪರೇಷನ್ ಕಾವೇರಿ
ಚಿತ್ರ ಕೃಪೆ; ವಿದೇಶಾಂಗ ಸಚಿವರ ಟ್ವೀಟ್Image Credit source: Twitter
ಗಣಪತಿ ಶರ್ಮಾ
|

Updated on:Apr 24, 2023 | 9:47 PM

Share

ಮುಖ್ಯಾಂಶಗಳು

  • ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದವರೂ ಸೇರಿದಂತೆ ಭಾರತೀಯರನ್ನು ಕರೆತರುವ ಸಲುವಾಗಿ ಆಪರೇಷನ್ ಕಾವೇರಿ
  • ಹಡಗುಗಳು ಮತ್ತು ವಿಮಾನಗಳು ಸಜ್ಜಾಗಿವೆ ಎಂದ ವಿದೇಶಾಂಗ ಸಚಿವ
  • ಸೌದಿ ಅರೇಬಿಯಾಕ್ಕೆ ಎರಡು ಹೆವಿ-ಲಿಫ್ಟ್ ವಿಮಾನಗಳನ್ನು ಮತ್ತು ಸುಡಾನ್ ಕರಾವಳಿಗೆ ಹಡಗು ಕಳುಹಿಸಲಾಗಿದೆ ಎಂದ ಜೈಶಂಕರ್

ನವದೆಹಲಿ: ಸಂಘರ್ಷಪೀಡಿತ ಸುಡಾನ್​ನಲ್ಲಿ (Sudan Crisis) ಸಿಲುಕಿರುವ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದವರೂ ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಸಲುವಾಗಿ ಕೇಂದ್ರ ಸರ್ಕಾರವು ಸೋಮವಾರ ‘ಆಪರೇಷನ್ ಕಾವೇರಿ (Operation Kaveri)’ಗೆ ಚಾಲನೆ ನೀಡಿದೆ. ಸೇನೆ ಮತ್ತು ಅರೆಸೇನಾ ಪಡೆಗಳ ಮಧ್ಯೆ ಸಂಘರ್ಷ ನಡೆಯುತ್ತಿರುವ ಸುಡಾನ್​ನಲ್ಲಿ ಕನ್ನಡಿಗರೂ ಸೇರಿದಂತೆ ನೂರಾರು ಮಂದಿ ಭಾರತೀಯರು ಸಿಲುಕಿದ್ದಾರೆ. ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸುಮಾರು 500 ಭಾರತೀಯರು ಸುಡಾನ್ ಬಂದರನ್ನು ತಲುಪಿದ್ದಾರೆ. ಅವರನ್ನು ಕರೆತರಲು ನಮ್ಮ ಹಡಗುಗಳು ಮತ್ತು ವಿಮಾನಗಳು ಸಜ್ಜಾಗಿವೆ. ಸುಡಾನ್‌ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸೌದಿ ಅರೇಬಿಯಾಕ್ಕೆ ಎರಡು ಹೆವಿ-ಲಿಫ್ಟ್ ವಿಮಾನಗಳನ್ನು ಮತ್ತು ಸುಡಾನ್ ಕರಾವಳಿಗೆ ಹಡಗನ್ನು ಕಳುಹಿಸಲಾಗಿದೆ ಎಂದು ಏಪ್ರಿಲ್ 23ರಂದು ವಿದೇಶಾಂಗ ಸಚಿವಾಲಯ ತಿಳಿಸಿತ್ತು.

ಸಂಘರ್ಷಕ್ಕೆ ತುಸು ವಿರಾಮ ದೊರೆತ ಸಂದರ್ಭ ಬಳಸಿಕೊಂಡು ಸುಡಾನ್‌ನಿಂದ ಜನರನ್ನು ಸ್ಥಳಾಂತರಿಸಲು ಭಾರತವು ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: Sudan conflict: ಸಂಘರ್ಷ ಪೀಡಿತ ಆಫ್ರಿಕಾದಲ್ಲಿ ಸಿಲುಕಿದ ನೂರಾರು ಕನ್ನಡಿಗರು: ಅಲ್ಲಿನ ಸಂಕಷ್ಟದ ಬಗ್ಗೆ ಟಿವಿ9 ಜೊತೆ ಅಳಲು ತೋಡಿಕೊಂಡ ದಾವಣಗೆರೆ ವ್ಯಕ್ತಿ

ಸುಡಾನ್​ನಲ್ಲಿ ಮಹಿಳೆಯರೂ ಸೇರಿದಂತೆ ಕರ್ನಾಟಕದ ಹತ್ತಾರು ಮಂದಿ ಸಿಲುಕಿದ್ದಾರೆ. ಈ ಪೈಕಿ ಹೆಚ್ಚಿನವರು ರಾಜ್ಯದ ಹಕ್ಕಿಪಿಕ್ಕಿ ಜನಾಂಗದವರಾಗಿದ್ದಾರೆ. ಜತೆಗೆ ಇತರ ರಾಜ್ಯಗಳ ಅನೇಕ ಮಂದಿಯೂ ಸಿಲುಕಿದ್ದಾರೆ.

ಸುಡಾನ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್​​ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಸುಡಾನ್​​ನಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವರದಿಯನ್ನು ಕೇಳಿದ್ದ ಪ್ರಧಾನಿ, ಅಲ್ಲಿರುವ 3,000ಕ್ಕಿಂತಲೂ ಹೆಚ್ಚು ಭಾರತೀಯರ ಸುರಕ್ಷೆ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದರು. ಕಳೆದ ವಾರ ಸುಡಾನ್​​ನಲ್ಲಿ ಗುಂಡಿನ ದಾಳಿಗೆ ಬಲಿಯಾದ ಭಾರತೀಯರ ಸಾವಿಗೆ ಮೋದಿ ಸಂತಾಪ ಸೂಚಿಸಿದ್ದರು.

28ಕ್ಕೂ ಹೆಚ್ಚು ಮಂದಿಯ ಸ್ಥಳಾಂತರ

ಫ್ರೆಂಚ್ ವಾಯುಪಡೆಯ ವಿಮಾನದ ಮೂಲಕ ಸುಡಾನ್‌ನಿಂದ ಐವರು ಭಾರತೀಯ ಪ್ರಜೆಗಳು ಸೇರಿದಂತೆ ಇತರ ದೇಶಗಳ 28 ಕ್ಕೂ ಹೆಚ್ಚು ಜನರನ್ನು ಫ್ರಾನ್ಸ್‌ನ ಸೇನಾ ನೆಲೆಗೆ ಕರೆತರಲಾಗಿದೆ ಎಂದು ಫ್ರೆಂಚ್ ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ಈ ಹಿಂದೆ ರಷ್ಯಾ-ಉಕ್ರೇನ್ ಸಂಘರ್ಷ ಆರಂಭವಾಗಿದ್ದ ಸಂದರ್ಭದಲ್ಲಿ ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಮೂಲಕ ಭಾರತೀಯರನ್ನು ಕರೆತರಲಾಗಿತ್ತು. ಅಫ್ಘಾನಿಸ್ತಾನ ಸಂಘರ್ಷದ ಸಂದರ್ಭದಲ್ಲಿ ‘ಆಪರೇಷನ್ ದೇವಿ ಶಕ್ತಿ’ ಮೂಲಕ ಭಾರತೀಯರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:40 pm, Mon, 24 April 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ