AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ಉದ್ವಿಗ್ನ: ಕರ್ನಾಟಕದಾದ್ಯಂತ ಕಟ್ಟೆಚ್ಚರ ವಹಿಸಲು ಗುಪ್ತಚರ ಇಲಾಖೆ ಸೂಚನೆ

ಪಹಲ್ಗಾಮ್ ಉಗ್ರ ದಾಳಿಯ ನಂತರ, ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಹೆಚ್ಚಾಗಿದೆ. ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸಾರ್ವಜನಿಕರ ರಕ್ಷಣೆ ಮತ್ತು ಸುರಕ್ಷತೆಗಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಗಡಿಯಲ್ಲಿ ಉದ್ವಿಗ್ನ: ಕರ್ನಾಟಕದಾದ್ಯಂತ ಕಟ್ಟೆಚ್ಚರ ವಹಿಸಲು ಗುಪ್ತಚರ ಇಲಾಖೆ ಸೂಚನೆ
ಕರ್ನಾಟಕ ಪೊಲೀಸ್​
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on:May 09, 2025 | 4:25 PM

Share

ಬೆಂಗಳೂರು, ಮೇ 09: ಪಹಲ್ಗಾಮ್ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ (Indian Army) ಆಪರೇಷನ್ ಸಿಂದೂರ್ (Operation Sindoor) ಮೂಲಕ ಪ್ರತ್ಯುತ್ತರ ನೀಡಿದೆ. ಸದ್ಯ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ರಾಜ್ಯ ಗುಪ್ತಚರ ಇಲಾಖೆ ಸುತ್ತೋಲೆ ಹೊರಡಿಸಿದೆ.

“ಉಗ್ರ ಕೃತ್ಯಗಳಂತಹ ಪ್ರಕರಣಗಳಲ್ಲಿ ಭಾಗಿಯಾದವರು, ಶಿಕ್ಷೆಗೊಳಗಾದವರು, ಭಯೋತ್ಪಾದನೆ ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾದವರು, ಡಿಟೋನೇಟರ್ ನಂತಹ ಉಪಕರಣಗಳ ತಯಾರು ಮಾಡುವ ಸ್ಥಳ, ಮೂಲಭೂತವಾದದ ಮೂಲಕ ಮಾಡುವಂತಹ ಕೃತ್ಯದಲ್ಲಿ ಭಾಗಿಯಾದವರು, ಭಾಷಣ, ಘೋಷಣೆಗಳ ಮೂಲಕ ಶಾಂತಿ ಭಂಗವನ್ನುಂಟು ಮಾಡುವವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವವರು, ನಿಮ್ಮ ವ್ಯಾಪ್ತಿಯ ನಗರ ಅಥವಾ ಜಿಲ್ಲೆಗಳಿಗೆ ಭೇಟಿ ನೀಡುವ ಅಪರಿಚಿತರು, ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಮತ್ತು ಅವರು ತಂಗುವ ಸ್ಥಳ ಹಾಗೂ ಹೋಟೆಲ್​ಗಳ ಮೇಲೆ ದೇಶದ ಭದ್ರತೆಯ ದೃಷ್ಟಿಯಿಂದ ನಿಗಾ ವಹಿಸಲು ಗುಪ್ತಚರ ಇಲಾಖೆ ಸೂಚನೆ ನೀಡಿದೆ.

ಏನೆಲ್ಲ ಕ್ರಮ ಕೈಗೊಳ್ಳಬೇಕು

  1. ಸಾರ್ವಜನಿಕ ರಕ್ಷಣೆಯ ಬಗ್ಗೆ, ಅಭ್ಯಾಸ ಮತ್ತು ತಾಲೀಮುಗಳನ್ನು ಏರ್ಪಡಿಸುವುದು.
  2. ಗ್ರಾಮ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತಿರುವ ಸಿವಿಲ್ ಡಿಫೆನ್ಸ್ ವಾರ್ಡನ್ಸ್ ವಾಲೆಂಟಿಯರ್ಸ್, ಹೋಂಗಾರ್ಡ್, ಎನ್.ಸಿ.ಸಿ, ಎನ್.ಎಸ್.ಎಸ್. ಎನ್.ವೈ.ಕೆ.ಎಸ್, ಮತ್ತಿತರೆ ವಿದ್ಯಾರ್ಥಿ ಸಂಘಟನೆಗಳು ಜನರನ್ನು ಜಾಗೃತಗೊಳಿಸುವುದು ಮತ್ತು ಅವರನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯಗೊಳಿಸುವುದು.
  3. ಸಾರ್ವಜನಿಕರಲ್ಲಿ ಶಾಂತವಾಗಿರುವಂತೆ, ಜಾಗೃತವಾಗಿರುವಂತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ತಮ್ಮೊಂದಿಗೆ ಹಾಗೂ ಮನೆಗಳಲ್ಲಿ ನಿಗಧಿತ ನಗದು, ಇಂಧನ ತುಂಬಿದ ವಾಹನಗಳು, ಸಾಕಷ್ಟು ಔಷಧಿಗಳು, ಕೆಡದೇ ಇರುವಂತಹಹೊದಿಕೆಗಳು ಮತ್ತು ತಮ್ಮ ಮೊಬೈಲ್‌ಗಳನ್ನು ಸದಾ ಜಾರ್ಜ್‌ನಲ್ಲಿ ಇಟ್ಟುಕೊಳ್ಳುವಂತೆ ಹಾಗೂ ಮುಖ್ಯವಾದ ದಾಖಲೆಗಳನ್ನು ಇಟ್ಟುಕೊಳ್ಳುವಂತೆ ಎಚ್ಚರಿಸುವುದು.
  4. ಘಟಕಾಧಿಕಾರಿಗಳು, ನಿಮ್ಮ ಅಧೀನದಲ್ಲಿರುವ ಅಧಿಕಾರಿಗಳಿಗೆ ಹಾಗೂ ಠಾಣಾಧಿಕಾರಿಗಳಿಗೆ ಈ ಮೇಲ್ಕಂಡ ಎಲ್ಲಾ ಅಂಶಗಳ ಪಾಲನೆ ಮಾಡಲು ನಿರ್ದೇಶನ ನೀಡುವುದು ಹಾಗೂ ಅರಿವು ಮೂಡಿಸುವುದು.
  5. ಘಟಕಾಧಿಕಾರಿಗಳು ತಮ್ಮ ಘಟಕಗಳಲ್ಲಿನ ವೈರ್‌ಲೆಸ್ ಉಪಕರಣಗಳು, ಕಂಪ್ಯೂಟರ್‌ಗಳನ್ನು ಮತ್ತು ವಾಹನಗಳನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳುವುದು. ಶಸ್ತ್ರಾಗಾರದಲ್ಲಿನ ಶಸ್ತ್ರಗಳನ್ನು ಮತ್ತು ಮದ್ದುಗುಂಡುಗಳನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳುವುದು.

ಎಲ್ಲೆಲ್ಲಿ ಕಟ್ಟೆಚ್ಚರ

ಆಡಳಿತ ಕಟ್ಟಡಗಳು, ರಕ್ಷಣಾ ಸ್ಥಾವರಗಳು, ಏರ್​ಪೋರ್ಟ್​ಗಳು, ವಿಜ್ಞಾನ ಸಂಶೋಧನಾ ಕೇಂದ್ರಗಳು, ಅಣೆಕಟ್ಟುಗಳು, ಉಪಗ್ರಹ ಕೇಂದ್ರ, ಜಲವಿದ್ಯುತ್ ಸ್ಥಾವರಗಳು, ಥರ್ಮಲ್ ಸ್ಥಾವರಗಳು, ಸಾಫ್ಟ್​​ವೇರ್ ಕಂಪನಿಗಳು, ಪೈಪ್​ಲೈನ್ ಕೇಂದ್ರಗಳು, ಕೈಗಾರಿಕೆಗಳು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕೇಂದ್ರಗಳು, ಜನಸಂದಣಿ ಸೇರುವ ಶಾಪಿಂಗ್ ಮಾಲ್​ಗಳು ಮತ್ತು ಹೋಟೆಲ್​ಗಳು, ವಿದೇಶಿ ರಾಜತಾಂತ್ರಿಕ ಕಚೇರಿಗಳು, ವಸತಿ ಮತ್ತಿತರ ಕಟ್ಟಡಗಳು, ಜನ ಸಂದಣಿ ಸೇರುವ ದೇವಾಲಯಗಳು, ಮಸೀದಿ, ಚರ್ಚ್​ಗಳು ಮತ್ತು ಜನಸಂದಣಿ ಸೇರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಆದೇಶ ಹೊರಡಿಸಿದೆ.

ಇದನ್ನೂ ಓದಿ
Image
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
Image
ಪೆಹಲ್ಗಾಮ್​​ ಕೇಂದ್ರದ ಪೂರ್ವ ನಿಯೋಜಿತ ಕೃತ್ಯ ಎಂದ ಮುನಿರ್​​ ವಿರುದ್ಧ ಕೇಸ್
Image
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
Image
ಪಾಕಿಸ್ತಾನದ ಮೇಲೆ ಭಾರತ ದಾಳಿ; ಕರಾಚಿ ಬಿಟ್ಟು ದಾವೂದ್ ಇಬ್ರಾಹಿಂ ಪರಾರಿ

ಇದನ್ನೂ ಓದಿ: ಮಂಗಳೂರು ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ದಾವಣಗೆರೆ ಎಸ್​ಪಿಯಿಂದ ಎಚ್ಚರಿಕೆ

ದಾವಣಗೆರೆ: ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗೊ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ಭಾರತ, ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಸೃಷ್ಟಿಯಾಗಿದೆ. ಹೀಗಾಗಿ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ನಮ್ಮ ಜಿಲ್ಲೆಯಲ್ಲೂ ಕೂಡ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

“ಜನ ಆತಂಕಕ್ಕೆ ಒಳಗಾಗದ ರೀತಿ ಪೊಲೀಸರು ತಿಳಿವಳಿಕೆ ನೀಡಬೇಕು. ದಾವಣಗೆರೆ ಜಿಲ್ಲೆಯಾದ್ಯಂತ ಅಗತ್ಯ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಜಾಲತಾಣಗಳಲ್ಲಿ ಅನುಮಾನಾಸ್ಪದ ಸುದ್ದಿಗಳು, ಸುಳ್ಳು ಸುದ್ದಿಗಳು, ಪ್ರಚೋದನಾತ್ಮಕ ಪೋಸ್ಟ್​, ದ್ವೇಷ ಭಾಷಣಗಳು ಕಂಡುಬಂದರೆ 9480803208 ವಾಟ್ಸಾಪ್ ನಂಬರ್​ಗೆ ಮಾಹಿತಿ ನೀಡಬಹುದು” ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:24 pm, Fri, 9 May 25