AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್​ ಸಿಂಧೂರ್​ ಸಂಭ್ರಮ: ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆ ಸಲ್ಲಿಸುವಂತೆ ಸೂಚನೆ

ಪಹೆಲ್ಗಾಮ್‌ನ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಗೆ ರಾಷ್ಟ್ರಾದ್ಯಂತ ಸಂಭ್ರಮ ಮತ್ತು ಶ್ಲಾಘನೆ ವ್ಯಕ್ತವಾಗಿದ್ದು, ಅನೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗಿದೆ. ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಧೈರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಪರೇಷನ್​ ಸಿಂಧೂರ್​ ಸಂಭ್ರಮ: ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆ ಸಲ್ಲಿಸುವಂತೆ ಸೂಚನೆ
ಸಚಿವ ರಾಮಲಿಂಗಾ ರೆಡ್ಡಿ
Kiran Surya
| Updated By: ವಿವೇಕ ಬಿರಾದಾರ|

Updated on:May 07, 2025 | 3:36 PM

Share

ಬೆಂಗಳೂರು, ಮೇ 07: ಪಹೆಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ (Pahelgam Terrorist attack) ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ನೆಲದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ (Operation Sindoor) ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನೆಯ ಆಪರೇಷನ್​ ಸಿಂಧೂರ್​ಗೆ ಪಾಕಿಸ್ತಾನ ಪದರುಗುಟ್ಟಿದೆ. ಆಪರೇಷನ್ ಸಿಂಧೂರ್ ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್​ ಲಾಲ್​ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ತಕ್ಕ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.

ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್​ ಸಿಂಧೂರ್​ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಜಯನಗರದ 4ನೇ ಬ್ಲಾಕ್​ನಲ್ಲಿನ ಗಣೇಶ್​ ದೇವಸ್ಥಾನದಲ್ಲಿ ತೆಂಗಿನ ಕಾಯಿ ಒಡೆದು, ವಿಶೇಷ ಪೂಜೆ ಸಲ್ಲಿಸಿ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನರು “ಭಾರತೀಯ ಹೆಣ್ಣುಮಕ್ಕಳ ಸಿಂಧೂರ ಅಳಸಿದ ಕ್ರಿಮಿಗಳಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ಭಾರತೀಯ ಸೇನೆ ಉತ್ತರ ನೀಡಿದೆ. ಪಾಕಿಸ್ತಾನದ ಕ್ರಿಮಿಗಳು ನಾಶ ಆಗಬೇಕು” ಎಂದು ಹೇಳಿದರು.

ಇದನ್ನೂ ಓದಿ
Image
ಭಾರತದ ದಾಳಿಯಿಂದ ಕೋಪಗೊಂಡು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗುಂಡು ಹಾರಿಸಿದ
Image
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
Image
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
Image
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು

ಬಿಜೆಪಿಯಿಂದ ವಿಶೇಷ ಪೂಜೆ

ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ನಗರದ ರಾಮ್ ಅಂಡ್ ಕೋ ಸರ್ಕ್​ಲನಲ್ಲಿನ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. “ಪಾಕಿಸ್ತಾನದ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳುವ ಸಂದರ್ಭ ಇದು. ಇದರಿಂದ ನಮ್ಮ ಸೈನಿಕರಿಗೆ ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಇರಲಿ ಎಂದು ಪೂಜೆ ಸಲ್ಲಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಬಗ್ಗೆ ಪಹಲ್ಗಾಮ್ ದಾಳಿ ಸಂತ್ರಸ್ತರ ಮನೆಯವರು ಹೇಳೋದೇನು? ಇಲ್ಲಿದೆ ವಿವರ

ಭಾರತೀಯ ಯೋಧರ ಕಾರ್ಯಾಚರಣೆ ಯಶಸ್ವಿ ನಿಮಿತ್ತ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿನ ಗಣೇಶ ದೇವಸ್ಥಾನದಲ್ಲಿ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು. ಭಾರತೀಯ ಸೇನೆಗಾಗಿ ವಿಶೇಷ ಮಂಗಳಾರತಿ ಮಾಡಿಸಿದರು. ಬಳಿಕ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:13 pm, Wed, 7 May 25