ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಜಮೀರ್ ಸಂದೇಶ

ಇದೇ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ‌ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ ಎನ್ನುವ ಹೆಸರಿನಡಿಯಲ್ಲಿ ಪತ್ರ್ಯುತ್ತರ ನೀಡಿದೆ. ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ದೇವರ ಬಳಿ ಪೂಜೆ ಸಲ್ಲಿಸಲಾಗುತ್ತಿದೆ. ಇದರ ಮಧ್ಯ ಇದೀಗ ಕರ್ನಾಟಕದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಜಮೀರ್ ಸಂದೇಶ
Zameer Ahmed Khan

Updated on: May 08, 2025 | 2:39 PM

ಬೆಂಗಳೂರು, (ಮೇ 08): ಆಪರೇಷನ್ ಸಿಂಧೂರ  (Operation Sindoor)ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ (Temples) ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಸಂದೇಶ ರವಾನಿಸಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ(ಮೡ 09) ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಆಪರೇಷನ್​ ಸಿಂಧೂರ್​ ಸಂಭ್ರಮ: ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆ ಸಲ್ಲಿಸುವಂತೆ ಸೂಚನೆ

ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ. ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಇಂತಹದೊಂದು ಸೂಚನೆ ನೀಡಿದ್ದು ಮೆಚ್ಚುಗೆಗೆ ಕಾರಣವಾಗಿದೆ.

ಇದನ್ನೂ ಓದಿ
ಭಾರತದ ದಾಳಿಯಿಂದ ಕೋಪಗೊಂಡು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗುಂಡು ಹಾರಿಸಿದ
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು

ಇನ್ನು ಮೊನ್ನೆ ಅಷ್ಟೇ ಇದೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದಾದರೆ ನಾನು ಸೂಸೈಡ್ ಸೂಟ್ ತೊಟ್ಟು ಹೋಗಲು ಸಿದ್ಧನಿದ್ದೇನೆ ಎಂದು ಹೇಳಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೋಲ್ ಆಗಿತ್ತು. ಇದರ ಮಧ್ಯ ಈಗ ಭಾರತ ಸೈಕರ ಶ್ರೇಯಸ್ಸಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಸೂಚನೆ ಹೊರಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:38 pm, Thu, 8 May 25