ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರ: ಅತಿ ಹಿಂದುಳಿದ ವರ್ಗಗಳ ಅಧಿಕಾರಿಗಳ ಸಭೆಯಲ್ಲಿ ವಿರೋಧ
ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಅವೈಜ್ಞಾನಿಕ ಎಂಬ ನಿಲುವನ್ನು ಸಭೆ ವ್ಯಕ್ತಪಡಿಸಿದೆ. ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಳಪಡಿಸುವುದನ್ನು ವಿರೋಧಿಸಲು ತೀರ್ಮಾನ ಮಾಡಲಾಗಿದೆ.
ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಬಗ್ಗೆ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ವಿರೋಧ ಕೇಳಿಬಂದಿದೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು (ಅಕ್ಟೋಬರ್ 26) ನಡೆದ ಸಭೆಯಲ್ಲಿ ವಿರೋಧ ಅಭಿಪ್ರಾಯ ಕೇಳಿಬಂದಿದೆ.
ಪರಿಷತ್ನ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ದ್ವಾರಕನಾಥ್ ಸೇರಿದಂತೆ ಇತರರು ಸಭೆಯಲ್ಲಿ ಭಾಗಿ ಆಗಿದ್ದರು. ಈ ಸಭೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರಕ್ಕೆ ವಿರೋಧ ವ್ಯಕ್ತವಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ನೀಡದಂತೆ ಆಗ್ರಹ ಕೇಳಿಬಂದಿದೆ. ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಅವೈಜ್ಞಾನಿಕ ಎಂಬ ನಿಲುವನ್ನು ಸಭೆ ವ್ಯಕ್ತಪಡಿಸಿದೆ. ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಳಪಡಿಸುವುದನ್ನು ವಿರೋಧಿಸಲು ತೀರ್ಮಾನ ಮಾಡಲಾಗಿದೆ.
ಇದನ್ನೂ ಓದಿ: ಮತ್ತೆ ಪಂಚಮಸಾಲಿ ಮೂರನೆ ಪೀಠದ ಕಹಳೆ; ಸಮುದಾಯದ ಸ್ವಾಮೀಜಿಗಳ ಗೌಪ್ಯ ಸಭೆ
ಇದನ್ನೂ ಓದಿ: ಸಿಎಂ ಭರವಸೆ: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದೂಡಲು ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ