ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು

| Updated By: ಸಾಧು ಶ್ರೀನಾಥ್​

Updated on: Mar 23, 2021 | 11:46 AM

ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಮೇಶ್​ ಜಾರಕಿಹೊಳಿ ಸಿಡಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು
ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಮುಂದಾದ ಕೈ ನಾಯಕರು
Follow us on

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಆರಂಭಗೊಂಡಿದ್ದು, ಬಜೆಟ್ ಅಧಿವೇಶನ 2021ರಲ್ಲಿ  ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಕೈ ನಾಯಕರು ನಿರ್ಧರಿಸಿದ್ದಾರೆ. 

ಅದಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಸಿಡಿಗಳನ್ನು ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದಾರೆ. ಸದನ ಆರಂಭವಾಗುತ್ತಿದ್ದಂತೆ ಬಾವಿಗಿಳಿದು ಪ್ರತಿಭಟನೆ ಕೈಗೊಂಡಿದ್ದಾರೆ. ಇದು ಸಿಡಿ ಸರ್ಕಾರವೆಂದು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಸದನ 10 ನಿಮಿಷ ಮುಂದೂಡಿಕೆಯಾಗಿದೆ.

ಸಿಡಿ ಪ್ರದರ್ಶನ ಮಾಡುತ್ತಾ ಇದು ಸಿಡಿ ಸರ್ಕಾರ ಎಂದು ಕೈ ನಾಯಕರು ಆರೋಪ ‌ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಯಮಯ್ಯ ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಎಂ.ಬಿ ಪಾಟೀಲ್, ಜಮೀರ್ ಅಹಮದ್, ಅಜೆಯ್ ಸಿಂಗ್, ಈಶ್ವರ್ ಖಂಡ್ರೆ, ಎಂ ಕೃಷ್ಣಪ್ಪ ಸೇರಿದಂತೆ ಇನ್ನೂ ಅನೇಕ ಶಾಸಕರು ಇದರಲ್ಲಿ ಭಾಗಿಯಾಗಿದ್ದಾರೆ.

‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಯಾಗಲಿ‘; ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

ಬಾಂಬೆಗೆ ಹೋದವರು ಮಾತ್ರ ಯಾಕೆ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ಗೆ ಹೋದ್ರು? ಸದನದಲ್ಲಿ ಸಿದ್ದರಾಮಯ್ಯ ವ್ಯಂಗ್ಯ