AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ

ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಗಂಭೀರ ಆರೋಪ ಮಾಡಿದ್ದು, ಅಬಕಾರಿ ಇಲಾಖೆ ಹಗರಣಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ ಸಾಕ್ಷಿ ತಮ್ಮ ಬಳಿ ಇದೆ ಎಂದು ಪೆನ್​ಡ್ರೈವ್ ಪ್ರದರ್ಶನ ಮಾಡಿದರು. ಈ ಸಂಬಂಧ ಆಡಿಯೋ ವೈರಲ್ ಆಗಿದ್ದನ್ನೂ ಪ್ರಸ್ತಾಪಿಸಿದ ಅವರು, ಪ್ರತಿ ಅಂಗಡಿಯಿಂದ ತಿಂಗಳಿಗೆ 10ರಿಂದ 15 ಸಾವಿರ ರೂ. ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ
ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪImage Credit source: tv9
ಗಣಪತಿ ಶರ್ಮಾ
|

Updated on:Feb 03, 2026 | 2:08 PM

Share

ಬೆಂಗಳೂರು, ಫೆಬ್ರವರಿ 3: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರು ಅಬಕಾರಿ ಇಲಾಖೆಯಲ್ಲಿ (Excise department) ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ಆಡಿಯೋ ಸಾಕ್ಷ್ಯ ತಮ್ಮ ಬಳಿ ಇದೆ ಎಂದರು. ಅಲ್ಲದೆ, ಅದಕ್ಕೆ ಸಂಬಂಧಿಸಿದ ಪೆನ್​ಡ್ರೈವ್ ಅನ್ನೂ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರದರ್ಶಿಸಿದ ಅವರು, ಸರ್ಕಾರ ಮತ್ತು ಇಲಾಖೆಯ ಉನ್ನತ ಅಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ‘ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆದಿದೆ’ ಎಂದಿದ್ದಾರೆ. ಅವರ ಹೇಳಿಕೆಯೇ ಅಬಕಾರಿ ಇಲಾಖೆಯಲ್ಲಿನ ಅಕ್ರಮಗಳಿಗೆ ಸಾಕ್ಷಿಯಾಗಿದೆ ಎಂದು ಅಶೋಕ್ ಹೇಳಿದರು. ತಿಮ್ಮಾಪುರ ಅವರಿಗೆ ಪಾಲು ಕೊಡಬೇಕೆಂಬ ಆಡಿಯೋ ವೈರಲ್ ಆಗಿದೆ ಎಂದು ಹೇಳಿದ ಅಶೋಕ್, ಆ ಆಡಿಯೋ ದಾಖಲೆ ಪೆನ್‌ಡ್ರೈವ್‌ನಲ್ಲಿ ಇದೆ ಎಂದು ಸದನಕ್ಕೆ ತಿಳಿಸಿದರು.

ಅಬಕಾರಿ ಇಲಾಖೆ ಜಂಟಿ ಆಯುಕ್ತ ನಾಗರಾಜಪ್ಪ ಹಾಗೂ ವಕೀಲ ರಮೇಶ್ ನಡುವಿನ ಮಾತುಕತೆಯ ವಿವರ ಪೆನ್‌ಡ್ರೈವ್‌ನಲ್ಲಿ ಇದೆ ಎಂದು ಅಶೋಕ್ ಆರೋಪಿಸಿದರು. ಆಡಿಯೋದಲ್ಲಿ ನಾಗರಾಜಪ್ಪ ಅವರು 18 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು. ಸಚಿವರು ಅಥವಾ ಅವರ ಮಗನ ಕಡೆಯಿಂದ ಸಂದೇಶ ಬಂದ ನಂತರವೇ ಕೆಲಸ ಆಗುತ್ತದೆ ಎಂದು ನಾಗರಾಜಪ್ಪ ಹೇಳಿರುವುದೂ ಆಡಿಯೋದಲ್ಲಿ ಇದೆ ಎಂದು ಅಶೋಕ್ ವಿವರಿಸಿದರು.

ಅಶೋಕ್ ಮಾತಿನ ವಿಡಿಯೋ ಇಲ್ಲಿ ನೋಡಿ

ಇನ್ನೂ ಅಬಕಾರಿ ಅಂಗಡಿಗಳಿಂದ ಪ್ರತೀ ತಿಂಗಳು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಪ್ರತಿ ಅಂಗಡಿಯಿಂದ ತಿಂಗಳಿಗೆ 10ರಿಂದ 15 ಸಾವಿರ ರೂ. ಸಂಗ್ರಹಿಸಲಾಗುತ್ತಿದೆ ಎಂದರು. ಈ ಮೂಲಕ ತಿಂಗಳಿಗೆ ಒಟ್ಟು ಸುಮಾರು 21 ಕೋಟಿ ರೂ. ಹಾಗೂ ವರ್ಷಕ್ಕೆ 252 ಕೋಟಿ ರೂ. ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅಂಕಿಅಂಶ ಸಮೇತ ಆರೋಪಿಸಿದರು.

ಇದನ್ನೂ ಓದಿ: ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ

ಮದ್ಯದ ಅಂಗಡಿಗಳಿಗೆ ಪ್ರತೀ ತಿಂಗಳು ಕಮಿಷನ್ ಮೊತ್ತವನ್ನು ಫಿಕ್ಸ್ ಮಾಡಲಾಗಿದೆ ಎಂದು ಹೇಳಿದ ಆರ್.ಅಶೋಕ್, ಈ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಅವರ ಆರೋಪಗಳಿಂದಾಗಿ ವಿಧಾನಸಭೆಯಲ್ಲಿ ಕೆಲಕಾಲ ತೀವ್ರ ಗದ್ದಲವೂ ಉಂಟಾಯಿತು.

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಅಶೋಕ್

ಸದನಕ್ಕೆ ಸಿಎಂ ಸಿದ್ದರಾಮಯ್ಯ ಈಗ ಬಂದಿದ್ದಾರೆ. ಸಿನಿಮಾದಲ್ಲಿ ಕೊನೇಯಲ್ಲಿ ಪೊಲೀಸರು ಅರೆಸ್ಟ್ ಮಾಡಲು ಬಂದಂತೆ ಬಂದಿದ್ದಾರೆ. ಇವರು ಅರೆಸ್ಟ್ ಮಾಡ್ತಾರೋ ಇಲ್ಲವೋ ನೋಡಬೇಕು ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಅಶೋಕ್ ಸಿಎಂ ಕಾಲೆಳೆದರು. ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಹಣವೆಲ್ಲ ಎಲ್ಲಿಗೆ ಹೋಗಿದೆ? ತನಿಖೆ ಆಗುವವರೆಗೂ ಸಚಿವರು ರಾಜೀನಾಮೆ ಕೊಡಬೇಕು. ರಾಜ್ಯದ ಆರ್ಥಿಕ ಇಲಾಖೆಗೆ ಕನ್ನ ಹಾಕುವ ಕೆಲಸ ಮಾಡಿದ್ದಾರೆ. ಅದಕ್ಕಾಗಿ ರಾಜೀನಾಮೆ ಕೊಡಬೇಕೆಂದು ಅಶೋಕ್ ಆಗ್ರಹಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Tue, 3 February 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ