AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರದಿಂದ ಕಾಂಗ್ರೆಸ್​​ಗೆ ಚಳಿ, ಜ್ವರ ಬಿಡಿಸಿದ್ದೀವಿ: ವಿಪಕ್ಷ ನಾಯಕ ಆರ್​ ಅಶೋಕ್

ರಾಜ್ಯದಲ್ಲಿ ನಾನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆ ಬಳಿಕ ಹೊಸ ಹುರುಪು ಬಂದಿದೆ. 1 ವಾರದಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್​​ಗೆ ಚಳಿ, ಜ್ವರ ಬಿಡಿಸಿದ್ದೀವಿ. ಇದೇ ಮೊದಲ ಬಾರಿ ಬಜೆಟ್​ ಮಂಡನೆ ವೇಳೆ ಪ್ರತಿಭಟನೆ ಮಾಡಿದ್ದೇವೆ ಎಂದು ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ದೆಹಲಿಯತ್ತ ಹೊರಟ ವಿಪಕ್ಷ ನಾಯಕ ಆರ್​​ ಅಶೋಕ್​​ ಹೇಳಿದ್ದಾರೆ.

ಒಂದು ವಾರದಿಂದ ಕಾಂಗ್ರೆಸ್​​ಗೆ ಚಳಿ, ಜ್ವರ ಬಿಡಿಸಿದ್ದೀವಿ: ವಿಪಕ್ಷ ನಾಯಕ ಆರ್​ ಅಶೋಕ್
ವಿಪಕ್ಷ ನಾಯಕ ಅಶೋಕ್
ನವೀನ್ ಕುಮಾರ್ ಟಿ
| Edited By: |

Updated on:Feb 19, 2024 | 3:57 PM

Share

ದೇವನಹಳ್ಳಿ, ಫೆಬ್ರವರಿ 16: ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ದೆಹಲಿಯತ್ತ ಹೊರಟ ವಿಪಕ್ಷ ನಾಯಕ ಆರ್. ಅಶೋಕ್ (Siddaramaiah)​​ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, 1 ವಾರದಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್​​ಗೆ ಚಳಿ, ಜ್ವರ ಬಿಡಿಸಿದ್ದೀವಿ. ಇದೇ ಮೊದಲ ಬಾರಿ ಬಜೆಟ್​ ಮಂಡನೆ ವೇಳೆ ಪ್ರತಿಭಟನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಬಳಿಕ ಹೊಸ ಹುರುಪು ಬಂದಿದೆ. 40% ಕಾಂಗ್ರೆಸ್ ಸರ್ಕಾರದ ಬಜೆಟ್​ ಪಾರದರ್ಶಕವಾಗಿ ಇರಬೇಕಿತ್ತು. ಸರ್ಕಾರದ ಬಜೆಟ್​ಗೆ ಅದರದೇ ಆದ ಪಾವಿತ್ರ್ಯತೆ ಇದೆ. ಬಜೆಟ್​ ಓದುವಾಗಲೆ ಕೇಂದ್ರ ಸರ್ಕಾರ ಮೋಸ ಮಾಡಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಒಬ್ಬರೇ ಅಲ್ಲ, ಬಿಜೆಪಿಯವರು ಬಜೆಟ್​ ಮಂಡಿಸಿದ್ದೇವೆ ಎಂದು ಕಿಡಿಕಾರಿದ್ದಾರೆ.

ಬಿಎಸ್​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ. ಬಜೆಟ್​ನಲ್ಲಿ ನಾವು ಯಾವತ್ತೂ ಸಹ ಕೇಂದ್ರ ಸರ್ಕಾರವನ್ನು ತೆಗಳಿಲ್ಲ‌ ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ ಮೆಚ್ಚಿಸಲು ಮೋದಿರನ್ನು ಟಾರ್ಗೆಟ್

ಇಲ್ಲಿ ಒಂದು ರೀತಿ ಚುನಾವಣೆಯ ಸ್ಟಂಟ್​ಗಾಗಿ ಸೋನಿಯಾ ಗಾಂಧಿ ಮೆಚ್ಚಿಸಲು ಮೋದಿರನ್ನು ಟಾರ್ಗೆಟ್ ಮಾಡಿದ್ದಾರೆ. ಮುಖ್ಯಮಂತ್ರಿಗಳ ಸೇಡಿನ ಭಾಷಣದ ವಿರುದ್ಧ ನಾನು ಮಾತನಾಡಿದ್ದೇನೆ. 7 ಕೋಟಿ ಜನರ ವಿರುದ್ಧ ಸೇಡು ತೀರಿಸಿಕೊಳ್ಳುವ ರೀತಿ ಬಜೆಟ್​ ಮಂಡನೆ ಮಾಡಲಾಗಿದೆ. ಹೀಗಾಗಿ ನಾವು ಪ್ರತಿಭಟನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಅವಸರದಲ್ಲಿ ತಮ್ಮ ಶಾಸಕರೊಂದಿಗೆ ಸಭೆ ನಡೆಸುವ ಸ್ಥಿತಿ ಕುಮಾರಸ್ವಾಮಿಗೆ ಯಾಕೆ ನಿರ್ಮಾಣವಾಯಿತು?

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ದಿವಾಳಿಯಾಗಿ ಅವರೆಲ್ಲ ಒದ್ದಾಡುತ್ತಿದ್ದಾರೆ. ಬಜೆಟ್​​ನಲ್ಲಿ ಘೋಷಿಸಿದ್ದಾರೆ ಅಷ್ಟೇ, ಸರ್ಕಾರದ ಬಳಿ 1 ರೂ. ಇಲ್ಲ. ಕಳೆದ 8 ತಿಂಗಳಿಂದ ಒಂದು ಕಾಮಗಾರಿ ಕೂಡ ಸರ್ಕಾರ ಆರಂಭಿಸಿಲ್ಲ. ರಾಜ್ಯದಲ್ಲಿ ಬಡವರಿಗೆ ಹೊಸದಾಗಿ 1 ರೇಷನ್‌ ಕಾರ್ಡ್ ಸಹ ಕೊಟ್ಟಿಲ್ಲ. ಸರ್ಕಾರ ಬಡ ವಿದ್ಯಾರ್ಥಿಗಳ ಸ್ಕಾಲರ್​​ಶಿಪ್​ ಎಲ್ಲಾ ಬಂದ್ ಮಾಡಿದೆ.

ಇದನ್ನೂ ಓದಿ: ಸದನದಲ್ಲಿ ಏನಿಲ್ಲ ಏನಿಲ್ಲ ಅಂತ ಕೂಗಾಡಿದ ಬಿಜೆಪಿ ಶಾಸಕ ಸುನೀಲ ಕುಮಾರ ತಲೇಲಿ ಏನೂ ಇಲ್ಲ: ಸಿದ್ದರಾಮಯ್ಯ

ಸರ್ಕಾರದ ಬಳಿ ಹಣ ಇಲ್ಲ ಅಂತಾ ಗೊತ್ತಾಗಿದಕ್ಕೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್​ ನಾಯಕರು ಹುಚ್ಚರ ರೀತಿ ವರ್ತಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ನಿರಾಶದಾಯಕವಾದ ಬಜೆಟ್ ಸಿಎಂ ಮಂಡಿಸಿದ್ದಾರೆ: ಮಾಜಿ ಸಚಿವ ಶ್ರೀರಾಮುಲು

ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಬಜೆಟ್ ಬಗ್ಗೆ ನಾವು ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದೆವು. ನಿರಾಶದಾಯಕವಾದ ಬಜೆಟ್ ಸಿಎಂ ಮಂಡಿಸಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಕೆಲ ಸಮುದಾಯಗಳನ್ನ ಓಲೈಸುವ ಕೆಲಸ ಮಾಡಿದ್ದಾರೆ. ಬಜೆಟ್​ನಲ್ಲಿ ಪ್ರತಿಭಾರಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಬೆಟ್ಟು ತೋರಿಸುವ ಕೆಲಸ ಮಾಡಿಕೊಂಡು ಬಂದಿದೆ. ಈ ಬಜೆಟ್​ನಲ್ಲಿ ನಮ್ಮ ನಿರೀಕ್ಷೆ ತಕ್ಕಂತೆ ಆಗಿಲ್ಲ ಇದು ಹುಸಿಯಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:18 pm, Fri, 16 February 24

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!