ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ತಲೆದೋರಿದೆ; ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಲಿ: ಸಿದ್ದರಾಮಯ್ಯ ಕಿಡಿ
ಇದನ್ನು ನಿಯಂತ್ರಿಸಲಾಗದ ಪ್ರಧಾನಿ ದುರ್ಬಲ ನಾಯಕನೆಂದು ತಮಗೆ ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ತನ್ನ ಎದೆ ಸುತ್ತಳತೆ ಎಷ್ಟಿದೆ ಎಂಬುವುದನ್ನ ಅವರೇ ಸ್ಪಷ್ಟಪಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಟೀಕಿಸಿದ್ದಾರೆ.
ಬೆಂಗಳೂರು: ಕೊರೊನಾ ಸೋಂಕು, ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವ್ಯಾಪಕವಾಗಿ ಹರಡ್ತಿದೆ. ಕೊವಿಡ್ ನಿಯಂತ್ರಣ ಬಗ್ಗೆ ನಿಗಾವಹಿಸುವವರೇ ಇಲ್ಲವಾಗಿದೆ ಎಂದೂ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ 3ನೇ ಅಲೆ ನಿರೀಕ್ಷೆಗಿಂತ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ. ಈ ಬಗ್ಗೆ ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ವ್ಯಾಕ್ಸಿನ್ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಇದೆ. ಖಾಸಗಿ, ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದ ರಾಜ್ಯದಲ್ಲಿ ವ್ಯಾಕ್ಸಿನ್ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ. ಇನ್ನೊಂದೆಡೆ ಶಾಲಾ ಪರೀಕ್ಷೆ, ಶುಲ್ಕದ ಗೊಂದಲ ಬಗೆಹರಿದಿಲ್ಲ ಎಂದು ಹೇಳಿದ್ದಾರೆ.
ಈ ಪರಿಸ್ಥಿತಿಯಲ್ಲಿ ಸಿಎಂ ಸಚಿವರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಆರೋಗ್ಯ ತುರ್ತುಪರಿಸ್ಥಿತಿ ಎದುರಿಸಿ ಜನರ ಹಿತ ಕಾಯಬೇಕಿತ್ತು. ಆದ್ರೆ ಸಿಎಂ ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ಕೈಕಾಲು ಹಿಡಿದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡ್ತಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ. ಕಿವಿ ಹಿಂಡಿ ಬುದ್ಧಿ ಹೇಳಬೇಕಾದ ಬಿಜೆಪಿಯ ಹೈಕಮಾಂಡ್ ತಾನೇ ರಾಜ್ಯದ ನಾಯಕರನ್ನ ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡ್ತಿದೆ. ಬಿಜೆಪಿಯಲ್ಲಿನ ಭಿನ್ನಮತ ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನು ನಿಯಂತ್ರಿಸಲಾಗದ ಪ್ರಧಾನಿ ದುರ್ಬಲ ನಾಯಕನೆಂದು ತಮಗೆ ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ತನ್ನ ಎದೆ ಸುತ್ತಳತೆ ಎಷ್ಟಿದೆ ಎಂಬುವುದನ್ನ ಅವರೇ ಸ್ಪಷ್ಟಪಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಟೀಕಿಸಿದ್ದಾರೆ.
ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರವನ್ನು ವಜಾಗೊಳಿಸಲಿ. ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಬಿಜೆಪಿ ಒಳಜಗಳದಿಂದಾಗಿ ಆಡಳಿತ ವ್ಯವಸ್ಥೆ ಕುಸಿದುಬಿದ್ದಿದೆ. ಗವರ್ನರ್ ತಕ್ಷಣ ಮಧ್ಯಪ್ರವೇಶಿಸಿ ಸರ್ಕಾರ ವಜಾಗೊಳಿಸಲಿ. ರಾಜ್ಯದಲ್ಲಿ ಸರ್ಕಾರವೇ ಇಲ್ಲ, ಅರಾಜಕತೆ ಪರಿಸ್ಥಿತಿ ತಲೆದೋರಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಫೋನ್ ಕದ್ದಾಲಿಕೆ ತನಿಖೆ ಆಗಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಆರೋಪವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಅರವಿಂದ ಬೆಲ್ಲದ್ ಮಾಡಿರುವ ಆರೋಪ ಗಂಭೀರ ಸ್ವರೂಪದ್ದು. ಅದನ್ನು ತಿಪ್ಪೆ ಸಾರಿಸುವ ಸ್ಪಷ್ಟೀಕರಣದ ಮೂಲಕ ಮುಚ್ಚಿಹಾಕದೆ, ತನಿಖೆ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ, ಸತ್ಯ ಸಂಗತಿಯನ್ನು ಬಯಲಿಗೆ ತರಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ. ಇದು ಕೇವಲ ಬೆಲ್ಲದ್ ಫೋನ್ಗೆ ಸಂಬಂಧಿಸಿದ್ದಾಗಿರಲಿಕ್ಕಿಲ್ಲ. ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯ ಶಾಸಕರ ಫೋನ್ ಕದ್ದಾಲಿಕೆ ಆಗಿರಬಹುದು. ಅಲ್ಲದೆ ವಿರೋಧಪಕ್ಷದ ನಾಯಕರ ಫೋನ್ ಕದ್ದಾಲಿಕೆ ಸಾಧ್ಯತೆ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ; ಬಸವಣ್ಣನ ವಚನದ ಮೂಲಕ ಬಿಜೆಪಿ ಟೀಕಿಸಿದ ಕುಮಾರಸ್ವಾಮಿ