Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ

Kannada: ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Kannada: ಔದಾರ್ಯ ಇರಬೇಕು.. ಆದ್ರೆ ನಮ್ಮ ಮಾತೃಭಾಷೆ ಕನ್ನಡವನ್ನೇ ಕುಂಠಿತಗೊಳಿಸುವಷ್ಟೂ ಇರಬಾರ್ದು -ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
KUSHAL V
|

Updated on: Feb 13, 2021 | 7:32 PM

ಮಂಡ್ಯ: ಕರ್ನಾಟಕದಲ್ಲಿ ಕನ್ನಡ ಕಲಿಯದಿದ್ದರೆ ಬದುಕಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಸೃಷ್ಟಿಸಬೇಕಾಗಿದೆ. ರಾಜ್ಯದಲ್ಲಿ ಕನ್ನಡ ಕಲಿಯುವ ಅನಿವಾರ್ಯತೆ ಸೃಷ್ಟಿಸಬೇಕಾಗಿದೆ. ಈ ರೀತಿ ಮಾಡುವುದು ನಮ್ಮ ಕರ್ತವ್ಯವಾಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಔದಾರ್ಯ ಇರಬೇಕು. ಆದರೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕುಂಠಿತಗೊಳಿಸುವಷ್ಟು ಇರಬಾರದು. ಇನ್ನೊಬ್ಬರಿಗೆ ಕೆಡುಕನ್ನು ಬಯಸದಿರುವುದೇ ಮನುಷ್ಯತ್ವ. ಹಾಗಾಗಿಯೇ ಬಸವಣ್ಣ ದಯೆಯೇ ಧರ್ಮದ ಮೂಲ ಎಂದರು. ಕನ್ನಡ ಭಾಷೆ ಬಹಳ ಶ್ರೀಮಂತ, ಪ್ರಾಚೀನ ಭಾಷೆಯಾಗಿದ್ದು. ಇದನ್ನು ಉಳಿಸಿ ಬೆಳೆಸಬೇಕಿರುವುದು ನಮ್ಮ ಕರ್ತವ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ಕರ್ನಾಟಕ ಸಂಘದ ಕಟ್ಟಡ ನಿರ್ಮಾಣಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ 50 ಲಕ್ಷ ಹಣ ಕೇಳಿದ್ದರು. 50 ಲಕ್ಷ ಹಣ ಕೇಳಿದ್ದರೂ ನಾನು 25 ಲಕ್ಷ ಹಣ ನೀಡಿದ್ದೆ. ಏನಾದರೂ 1 ಕೋಟಿ ಕೇಳಿದ್ರೆ 50 ಲಕ್ಷ ಹಣ ಕೊಡುತ್ತಿದ್ದೆ. ಕನ್ನಡಿಗರ ಹಣ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಕೊಡುತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

‘ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ’ ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಬಳಿಕ ಶಾಸಕರು ಸಿಎಂ ಸ್ಥಾನದ ಬಗ್ಗೆ ನಿರ್ಧಾರ ಮಾಡ್ತಾರೆ. ಬಳಿಕ ಹೈಕಮಾಂಡ್ ಅಂತಿಮವಾಗಿ ಮುದ್ರೆ ಒತ್ತುತ್ತೆ ಎಂದು ತಾವು ಸಿಎಂ ಆಗುವ ವಿಚಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಡುವೆ, ಹೆಚ್‌.ವಿಶ್ವನಾಥ್ ಒಬ್ಬ ಸೀರಿಯಸ್ ಪಾಲಿಟೀಷಿಯನ್ ಅಲ್ಲ. ಆತನ ಬಗ್ಗೆ ಪದೇಪದೆ ಉತ್ತರ ನೀಡಲಾಗಲ್ಲ ಎಂದು ಸಹ ಹೇಳಿದರು. ಜೊತೆಗೆ, ರಾಜ್ಯ ಬಜೆಟ್ ಬಗ್ಗೆ ನಿರೀಕ್ಷೆಯೇ ಇಲ್ಲವೆಂದ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ, ಖಜಾನೆ ಖಾಲಿಯಾಗಿದೆ. 35 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಸಾಲ ಮಾಡಿದೆ. ಸಾಲ, ಬಡ್ಡಿ, ಚಕ್ರ ಬಡ್ಡಿ ಮನ್ನಾ ಮಾಡೋದೇ ಆಗುತ್ತೆ. ಇನ್ನೇನು ಉತ್ತಮ ಯೋಜನೆ ನೀಡಲು ಸಾಧ್ಯವಾಗುತ್ತೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಇದನ್ನೂ ಓದಿ: ಮಂಡ್ಯಕ್ಕೆ ಹೋಗುವಾಗ Tea ಬ್ರೇಕ್​.. ಮದ್ದೂರು ವಡೆ ಜೊತೆ ಚಹಾ ಸವಿದ ಸಿದ್ದರಾಮಯ್ಯ!

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್