ಮೈಸೂರು: ಮೈಸೂರು ಹಾಲು ಒಕ್ಕೂಟ ವಿಚಾರವಾಗಲಿ ಅಥವಾ ಬೇರೆ ಯಾವುದೇ ವಿಚಾರವಾಗಲಿ ಜೆಡಿಎಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಸ್ಥಳೀಯವಾಗಿ ಅವರೇ ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಹೆಚ್.ಡಿ. ಕುಮಾರಸ್ವಾಮಿ ಹೇಳಿದರೂ ನಾವು ಜೆಡಿಎಸ್ಗೆ ಯಾವುದೇ ಬೆಂಬಲ ನೀಡುವುದಿಲ್ಲ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ. ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿ. ಸಿಡಿ ಪ್ರಕರಣದಲ್ಲಿ ಮೊದಲಿನಿಂದಲೂ ಷಡ್ಯಂತ್ರ ಆರೋಪ ಇದೆ. ನನ್ನನ್ನು ಸಿಲುಕಿಸಲು ಷಡ್ಯಂತ್ರ ನಡೆಯುತ್ತಿದೆ ಎಂದಿದ್ದ ಡಿಕೆಶಿಗೆ ಹಾಗೆ ಅನ್ನಿಸಿರಬಹುದು ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದ್ದಾರೆ.
ಇಂತಹ ಪ್ರಕರಣಗಳಿಂದ ರಾಜಕಾರಣಿಗಳ ಮಾನ ಮರ್ಯಾದೆ ಹೋಗುತ್ತದೆ. ಜನರು ರಾಜಕಾರಣಿಗಳ ಬಗ್ಗೆ ಹಗುರವಾಗಿ ಮಾತನಾಡಲು ಶುರು ಮಾಡುತ್ತಾರೆ. ಆಗ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಅಧಿಕಾರದ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಇದ್ದಾಗ ಬಡವರಿಗೆ ಭೂಮಿ ನೀಡಿದ್ದೆವು. ಬಿಜೆಪಿ ಅಧಿಕಾರಕ್ಕೆ ಬಂದು ಅದನ್ನು ವಾಪಸ್ ಕಿತ್ತುಕೊಳ್ಳುತ್ತಿದೆ. ರೈತರಿಗೆ ನೀಡಿದ್ದ ಭೂಮಿಯನ್ನು ಮಾರಾಟ ಮಾಡಬಾರದು. ಈ ವಿಚಾರವಾಗಿ ನಾವು ಮುಂದೆ ಹೋರಾಟ ಮಾಡುತ್ತೇವೆ. ಲಕ್ಷಾಂತರ ಜನರನ್ನು ಬೀದಿಗೆ ದೂಡಲು ನಾವು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: BSY ಏನು ಸತ್ಯಹರಿಶ್ಚಂದ್ರನಾ?; ನಾವು ಮತ್ತೆ ಅಧಿಕಾರಕ್ಕೆ ಬರ್ತೇವೆ Be Careful -ಸಿದ್ದರಾಮಯ್ಯ ಗುಟುರು