AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಡೀಸೆಲ್​ಗಳನ್ನು ಜಿಎಸ್​ಟಿ ಅಡಿ ತರಬಾರದು: ಸಿದ್ದರಾಮಯ್ಯ ಆಗ್ರಹ

ಪೆಟ್ರೋಲ್ ಮತ್ತು ಡೀಸೆಲ್​ನ ಜಿಎಸ್​ಟಿ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ದೇಶದ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಈ ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿದೆ.

ಪೆಟ್ರೋಲ್ ಡೀಸೆಲ್​ಗಳನ್ನು ಜಿಎಸ್​ಟಿ ಅಡಿ ತರಬಾರದು: ಸಿದ್ದರಾಮಯ್ಯ ಆಗ್ರಹ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Sep 17, 2021 | 4:08 PM

Share

ಬೆಂಗಳೂರು: ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ಅಡಿ ತರಬಾರದು ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮೊದಲು ಬಾಕಿ ಇರುವ ಜಿಎಸ್​ಟಿ ಬಿಲ್ ಕ್ಲಿಯರ್ ಮಾಡಲಿ. ಬಳಿಕ ಇದರ ಬಗ್ಗೆ ಚರ್ಚಿಸೋಣ ಎಂದು ಅವರು ಒತ್ತಾಯಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್​ಗಳ ಸರಕು ಮತ್ತು ಸೇವಾ ತೆರಿಗೆ (GST) ವ್ಯಾಪ್ತಿಗೆ ತರುವ ಕುರಿತು ಈಗಾಗಲೇ ಹಲವು ಚರ್ಚೆಗಳು ನಡೆದಿವೆ. ಹಲವು ವರ್ಷಗಳಿಂದ ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಪೆಟ್ರೋಲ್ ಮತ್ತು ಡೀಸೆಲ್​ನ ಜಿಎಸ್​ಟಿ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ದೇಶದ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಈ ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಪೆಟ್ರೋಲ್ ಮತ್ತು ಡೀಸೆಲ್​ನ ಜಿಎಸ್​ಟಿ ವ್ಯಾಪ್ತಿಗೆ ತರುವ ಪ್ರಸ್ತಾವನೆಯನ್ನು ಸಲ್ಲಿಸುತ್ತಾರೆ. ಕರ್ನಾಟಕದಿಂದ ವಾಣಿಜ್ಯ ತೆರಿಗೆ ಆಯುಕ್ತ ಸಿ ಶಿಖಾ ಅವರು ಸಭೆಯಲ್ಲಿ ಭಾಗವಹಿಸುತ್ತಾರೆ. ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗುವುದರಿಂದ ಶುಕ್ರವಾರ ನಡೆಯುವ ಸಭೆಯಲ್ಲಿ ಬೊಮ್ಮಾಯಿ ಪರವಾಗಿ ವಾಣಿಜ್ಯ ತೆರಿಗೆ ಆಯುಕ್ತ ಸಿ ಶಿಖಾ ಅವರು ಭಾಗವಹಿಸಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಣಕಾಸು ಖಾತೆ ಹೊಂದಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೊರೊನಾದಿಂದ ಉಂಟಾದ ಆರ್ಥಿಕ ಪರಿಸ್ಥಿತಿಯನ್ನು ಚೇತರಿಸಿಕೊಳ್ಳಲು ನಮಗೆ ಸಮಯ ಬೇಕಾಗಿರುವುದರಿಂದ ಪರಿಹಾರವನ್ನು ಮುಂದುವರಿಸುವಂತೆ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಬೊಮ್ಮಾಯಿ ಶಿಖಾಗೆ ಎರಡು ಪತ್ರಗಳನ್ನು ನೀಡಿದ್ದಾರೆ. ಒಂದು ದೀರ್ಘಾವಧಿಯವರೆಗೆ ಪರಿಹಾರ ನೀಡುವ ಮನವಿ ಪತ್ರವಾಗಿದೆ. ಇನ್ನೊಂದು ಜಿಎಎಸ್​ಟಿ ಪ್ರಸ್ತಾಪದ ಬಗ್ಗೆ ಕರ್ನಾಟಕದ ಅಭಿಪ್ರಾಯ ಹೊಂದಿರುವ ಪತ್ರವಾಗಿದೆ.

ಇನ್ನು ಕೇಂದ್ರ ಸರ್ಕಾರದ ಪ್ರಸ್ತಾವನೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಕರ್ನಾಟಕ ರಾಜ್ಯ ಜಿಎಸ್​ಟಿ ಸಲಹಾ ಮಂಡಳಿಯ ಸದಸ್ಯ ಬಿ.ಟಿ.ಮನೋಹರ್, ಕರ್ನಾಟಕ ಮಾತ್ರವಲ್ಲ, ಹಲವು ರಾಜ್ಯಗಳು ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ಪ್ರಸ್ತಾಪವನ್ನು ವಿರೋಧಿಸುತ್ತಿವೆ. ಆದರೆ ಇದು ಅಗತ್ಯವಾದ ಸುಧಾರಣೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

GST: 2021ರ ಆಗಸ್ಟ್ ತಿಂಗಳ ಜಿಎಸ್​ಟಿ 1.12 ಲಕ್ಷ ಕೋಟಿ ರೂಪಾಯಿ ಸಂಗ್ರಹ; ಯಾವುದರ ಮೂಲಕ ಎಷ್ಟು ಆದಾಯ?

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​​ ಬೆಲೆಯಲ್ಲಿ ಇಳಿಕೆಯಿಲ್ಲ; ಸತತ 12 ದಿನಗಳಿಂದ ಇಂಧನ ದರ ಸ್ಥಿರ

(Opposition Leader Siddaramaiah urges did not bring Petrol and Diesel under GST)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್