ಕೊವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 1 ಲಕ್ಷದಿಂದ 5 ಲಕ್ಷ ರೂಪಾಯಿಗೆ ಏರಿಸಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಸಾಧ್ಯವಿದೆ. ಕೇಂದ್ರಕ್ಕೆ ಮನವರಿಕೆ ಮಾಡಿ ಈ ಅವಕಾಶ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಅವರು ಆಗ್ರಹಿಸಿದ್ದಾರೆ.
ಬೆಂಗಳೂರು: ಕೊರೊನಾದಿಂದ ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ನೀಡುವಂತೆ ಟ್ವಿಟರ್ನಲ್ಲಿ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೊರೊನಾ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ, ಆದ್ದರಿಂದ ವಿಪತ್ತು ಪರಿಹಾರದ ನಿಯಮಗಳಡಿ ಪರಿಹಾರ ನೀಡಿ ಎಂದು ಅವರು ಆಗ್ರಹಿಸಿದ್ದಾರೆ. ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಸಾಧ್ಯವಿದೆ. ಕೇಂದ್ರಕ್ಕೆ ಮನವರಿಕೆ ಮಾಡಿ ಈ ಅವಕಾಶ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಅವರು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಜೊತೆಗೆ, ಇದು BPL ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. BPL ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
.@CMofKarnataka has announced ₹1,00,000 compensation to all those BPL families where at least one member has succumbed to #Covid19.
I urge @CMofKarnataka to consider this as a national disaster and announce compensation of ₹5,00,000 as per disaster relief norms.
— Siddaramaiah (@siddaramaiah) June 14, 2021
ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟ ಪಡ್ತಾ ಇದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ. ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು @CMofKarnataka ಬಳಸಿಕೊಳ್ಳಬೇಕು. 2/2#coronavirus
— Siddaramaiah (@siddaramaiah) June 14, 2021
ಇದಕ್ಕಾಗಿ ಸುಮಾರು 250-300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲ ಬಾರಿಗೆ ಇಂತಹ ಹಣಕಾಸು ನೆರವನ್ನು ನಾವು ನೀಡುತ್ತಿದ್ದೇವೆ. ಹಣಕಾಸಿನ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಈಗ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಕೊಡ್ತಾ ಇದ್ದೇವೆ. ಅಂದ್ರೆ ಇದರ ಅರ್ಥ ಹಣಕಾಸಿನ ಪರಿಸ್ಥಿತಿ ಇರೋದರಲ್ಲಿಯೇ ಉತ್ತಮವಾಗಿದೆ ಎಂಬುದು ತಿಳಿದುಬರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಆರ್ಥಿಕ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ: ಮಂಗಳವಾರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್ ಅಂತಿಮ ದರ್ಶನಕ್ಕೆ ಅವಕಾಶ
(Opposition leader Siddaramaiah urges increase the relief fund to Covid 19 death family)