Karnataka Rains: ಕರ್ನಾಟಕದ ಈ 10 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ

|

Updated on: Jul 08, 2024 | 7:51 AM

ಕರ್ನಾಟಕದ ಬಹುತೇಕ ಕಡೆ ಮಳೆ ಜೋರಾಗಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಈ 10 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆ
ಮಳೆ
Image Credit source: India Today
Follow us on

ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕ್ಯಾಸಲ್​ರಾಕ್, ಮಂಕಿ, ಕೊಟ್ಟಿಗೆಹಾರ, ಲೋಂಡಾ, ಕುಮಟಾ, ಕದ್ರಾ, ಶಿರಾಲಿ, ಕೊಲ್ಲೂರು, ಗೋಕರ್ಣ, ಸೇಡಂ, ಆಗುಂಬೆಯಲ್ಲಿ ಮಳೆಯಾಗಿದೆ.

ಕಾರವಾರ, ಕೋಟ, ಉಡುಪಿ, ಧರ್ಮಸ್ಥಳ, ಅಂಕೋಲಾ, ಕುಂದಾಪುರ, ಧರ್ಮಸ್ಥಳ, ಚಿತ್ತಾಪುರ, ಚಿಂಚೋಳಿ, ಕಳಸ, ಮುಲ್ಕಿ, ಬೆಳ್ತಂಗಡಿ, ಪುತ್ತೂರು, ಕಲಬುರಗಿ, ಉಪ್ಪಿನಂಗಡಿ, ಸಿದ್ದಾಪುರ, ಕಾರ್ಕಳದಲ್ಲಿ ಮಳೆಯಾಗಿದೆ.
ಯಲ್ಲಾಪುರ, ಅಡಕಿ, ಕಮಲಾಪುರ, ಕೊಪ್ಪ, ಹುಂಚದಕಟ್ಟೆ, ಬಾಳೆಹೊನ್ನೂರು, ಕಮ್ಮರಡಿ, ಹಳಿಯಾಳ, ಜೇವರ್ಗಿ, ಕೂಡಲಸಂಗಮ, ಇಂಡಿ, ಖಜೂರಿ, ಆನವಟ್ಟಿ, ಮೂರ್ನಾಡು, ನಾಪೋಕ್ಲು, ಸೋಮವಾರ ಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾನುವಾರ ಹಲವೆಡೆ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಇಂದಿನಿಂದ ವರುಣನ ಆರ್ಭಟ ಮತ್ತಷ್ಟು ಜೋರು

ಕಾರವಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ