ಆರ್ಕೆಸ್ಟ್ರಾ ಕಲಾವಿದರ ಬದುಕು ಹರಿದ ಕೊರೊನಾ ಮಹಾಮಾರಿ
ಬೆಂಗಳೂರು:ಕೊರೊನಾ ಸೋಂಕು ದೇಶದ ಪ್ರತಿಯೊಂದು ಉದ್ಯಮದ ಮೇಲೆ ಭಾರಿ ಹೊಡೆತ ನೀಡಿದ್ದು, ಈಗ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ಕಲಾವಿದರು ಜೀವನ ನಿರ್ವಹಣೆ ಮಾಡಲಾಗದೆ ಬೀದಿಗೆ ಬಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ರಾಜ್ಯ ಸರ್ಕಾರವು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿದೆ. ಇದರಿಂದಾಗಿ ರಾಜ್ಯದಲ್ಲಿರುವ ಐದು ಲಕ್ಷಕ್ಕೂ ಹೆಚ್ಚು ಆರ್ಕೆಸ್ಟ್ರಾ ಕಲಾವಿದರು ಉದ್ಯೋಗವಿಲ್ಲದೆ ಪರಿತಪಿಸುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕಲಾವಿದರು ಈ ಹಿಂದೆ ಮನವಿ ಮಾಡಿದ್ದರು. ಆದರೆ ಮನವಿಗೆ […]

ಬೆಂಗಳೂರು:ಕೊರೊನಾ ಸೋಂಕು ದೇಶದ ಪ್ರತಿಯೊಂದು ಉದ್ಯಮದ ಮೇಲೆ ಭಾರಿ ಹೊಡೆತ ನೀಡಿದ್ದು, ಈಗ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ಕಲಾವಿದರು ಜೀವನ ನಿರ್ವಹಣೆ ಮಾಡಲಾಗದೆ ಬೀದಿಗೆ ಬಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ರಾಜ್ಯ ಸರ್ಕಾರವು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿದೆ. ಇದರಿಂದಾಗಿ ರಾಜ್ಯದಲ್ಲಿರುವ ಐದು ಲಕ್ಷಕ್ಕೂ ಹೆಚ್ಚು ಆರ್ಕೆಸ್ಟ್ರಾ ಕಲಾವಿದರು ಉದ್ಯೋಗವಿಲ್ಲದೆ ಪರಿತಪಿಸುತ್ತಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕಲಾವಿದರು ಈ ಹಿಂದೆ ಮನವಿ ಮಾಡಿದ್ದರು. ಆದರೆ ಮನವಿಗೆ ಕಿವಿಕೊಡದ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವ ಕಲಾವಿದರು, ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಕರ್ನಾಟಕ ಅಖಿಲ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ 2 ಸಾವಿರಕ್ಕೂ ಅಧಿಕ ಕಲಾವಿದರಿಂದ ಮೌರ್ಯ ಸರ್ಕಲ್ ಬಳಿ ನಾಳೆ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪನವರ ಗಮನ ಸೆಳೆಯುವುದು ಪ್ರತಿಭಟನೆಯ ಉದ್ದೇಶ ಎಂದಿದ್ದಾರೆ.