ಮನೆಯಲ್ಲಿ ಜಾರಿ ಬಿದ್ದು ಆಸ್ಕರ್​ ಫರ್ನಾಂಡಿಸ್​ ತಲೆಗೆ ಗಾಯ; ಮಂಗಳೂರಿನ ಖಾಸಗಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ

ಮಾಮೂಲಿ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ತಿಳಿದುಬಂದಿತ್ತು. ಹಾಗಾಗಿ, ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು. ಶಸ್ತ್ರ ಚಿಕಿತ್ಸೆ ನಡೆಸಿರುವ ಹಿನ್ನೆಲೆಯಲ್ಲಿ ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯಲ್ಲಿ ಜಾರಿ ಬಿದ್ದು ಆಸ್ಕರ್​ ಫರ್ನಾಂಡಿಸ್​ ತಲೆಗೆ ಗಾಯ; ಮಂಗಳೂರಿನ ಖಾಸಗಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ
ಆಸ್ಕರ್ ಫರ್ನಾಂಡಿಸ್
Follow us
| Updated By: ganapathi bhat

Updated on:Jul 20, 2021 | 3:01 PM

ಮಂಗಳೂರು: ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡ ಕಾರಣ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್​ ಫರ್ನಾಂಡಿಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಭಾನುವಾರ ಬೆಳಗ್ಗೆಯೇ ಮನೆಯಲ್ಲಿ ನಿಯಂತ್ರಣ ತಪ್ಪಿ ಆಸ್ಕರ್ ಫರ್ನಾಂಡಿಸ್ ಜಾರಿ ಬಿದ್ದಿದ್ದರು. ಅದರಿಂದ ತಲೆಗೆ ಏಟಾಗಿತ್ತು ಎಂದು ತಿಳಿದುಬಂದಿದೆ. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ಆಸ್ಕರ್ ನಿರ್ಲಕ್ಷ್ಯ ವಹಿಸಿದ್ದರು. ಆ ಬಳಿಕ, ಮಾಮೂಲಿ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ತಿಳಿದುಬಂದಿತ್ತು. ಹಾಗಾಗಿ, ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು. ಶಸ್ತ್ರ ಚಿಕಿತ್ಸೆ ನಡೆಸಿರುವ ಹಿನ್ನೆಲೆಯಲ್ಲಿ ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಕರ್ ಫರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಬಳಿಕ, 1998ರಲ್ಲಿ ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್​ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

ಕಾಂಗ್ರೆಸ್ ಆರೋಪ ನಿರಾಧಾರ, ಸಂಸತ್ ಅಧಿವೇಶನ ಭಂಗಗೊಳಿಸಲು ವಿಪಕ್ಷ ಹುನ್ನಾರ: ಪೆಗಾಸಸ್ ವಿವಾದ ಬಗ್ಗೆ ಬಿಜೆಪಿ ಪ್ರತಿಕ್ರಿಯೆ

Published On - 2:54 pm, Tue, 20 July 21