ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರಲ್ಲ: ಎಲ್ಲಾ ಗೊಂದಲಗಳಿಗೆ ಡಿಕೆಶಿ ತೆರೆ

|

Updated on: Jun 27, 2024 | 10:54 PM

‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. 

ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರಲ್ಲ: ಎಲ್ಲಾ ಗೊಂದಲಗಳಿಗೆ ಡಿಕೆಶಿ ತೆರೆ
ನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರಲ್ಲ: ಎಲ್ಲಾ ಗೊಂದಲಗಳಿಗೆ ಡಿಕೆಶಿ ತೆರೆ
Follow us on

ಬೆಂಗಳೂರು, ಜೂನ್​ 27: ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಕೇಂದ್ರ ಸಚಿವರಾಗಿ ಹೆಚ್​ಡಿ ಕುಮಾರಸ್ವಾಮಿ ಆಯ್ಕೆ ಆಗಿದ್ದಾರೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ತೆರವಾಗಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ (Channapatna) ಉಪಚುನಾವಣೆ ನಡೆಯಲಿದೆ. ಈ ಉಪಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಧುಮುಕ್ಕಿದ್ದು, ಪರೋಕ್ಷವಾಗಿ ತಾವೇ ಸ್ಪರ್ಧಿಸುವುದಾಗಿ ಈ ಹಿಂದೆ ಸುಳಿವು ನೀಡಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲದಕ್ಕೂ ಡಿಕೆ ಶಿವಕುಮಾರ ತೆರೆ ಎಳೆದಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್​, ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್​

ಇನ್ನು ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಡಿಕೆ ಶಿವಕುಮಾರ್​​ ಸ್ಪರ್ಧೆ ಮಾಡುತ್ತಿಲ್ಲ. ಆದರೆ ಡಿಕೆ ಸುರೇಶ್​ರನ್ನು ಸ್ಪರ್ಧೆಗ ಇಳಿಸುವ ನಿಟ್ಟಿನಲ್ಲಿ ಅಣಿಯಾಗುತ್ತಿದ್ದಾರೆ. ಅವರ ಮಾತಿನಲ್ಲಿ ರಾಜಕೀಯ ತಂತ್ರಗಾರಿಕೆ ಇದೆ ಎಂದು ಇತ್ತೀಚೆಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ: ಡಿಕೆಶಿ ರಾಜಕೀಯ ತಂತ್ರ ಬಿಚ್ಚಿಟ್ಟ ಜಿಟಿಡಿ

ಡಿಕೆ ಶಿವಕುಮಾರ್ ಪುತ್ರಿ‌ ಐಶ್ವರ್ಯ ಹೆಗ್ಡೆ ರಾಜಕೀಯ ಬರ್ತಾರಾ ಎಂಬ‌ ಕುತೂಹಲ ಕಾಂಗ್ರೆಸ್​ ಕಾರ್ಯಕರ್ತರಲ್ಲಿ ಮೂಡಿತ್ತು. ಏಕೆಂದರೆ ಲೋಕಸಭಾ ಚುನಾವಣೆ ವೇಳೆ ಡಿಕೆ ಸುರೇಶ್ ನಾಮಿನೇಷನ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಐಶ್ವರ್ಯ, ಥೇಟ್ ಒಬ್ಬ ಕಾಂಗ್ರೆಸ್ ಕಾರ್ಯಕರ್ತನಂತೆ ಭಾಗವಹಿಸಿದ್ದರು.

ಇದನ್ನೂ ಓದಿ: ಉಪಚುನಾವಣೆ ಘೋಷಣೆಗೂ ಮುನ್ನವೇ ರಂಗೇರುತ್ತಿದೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ

ರಾಮನಗರದಲ್ಲಿ ನಡೆದ ನಾಮಿನೇಷನ್ ಕಾರ್ಯಕ್ರಮದ ವೇದಿಕೆ ಬಳಿ ಒಬ್ಬ ಸಾಮಾನ್ಯ ಕಾರ್ಯಕರ್ತೆಯಂತೆ ನಿಂತಿದ್ದ ಐಶ್ವರ್ಯ, ಅವರು ಕೂಡ ತನ್ನ ತಂದೆಯಂತೆ ಅವರದ್ದೇ ದಾರಿಯಲ್ಲಿ ನಡೆಯುತ್ತಾರಾ ಎಂಬ ಪ್ರಶ್ನೆ ಬಹುತೇಕರಿಗೆ ಮೂಡಿತ್ತು. ಆದರೆ ಸದ್ಯ ಇದಕ್ಕೆಲ್ಲಾ ತೆರೆ ಬಿದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:36 pm, Thu, 27 June 24