AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಸಭೆ ನಂತರ ಒಕ್ಕಲಿಗರ ಸಂಘದಿಂದ ಘೋಷಣೆ
ರಾಜ್ಯ ಒಕ್ಕಲಿಗರ ಸಂಘದ ಜೊತೆ ಡಿವಿ ಸದಾನಂದಗೌಡ ಸಭೆ
ಕಿರಣ್​ ಹನಿಯಡ್ಕ
| Edited By: |

Updated on:Mar 19, 2024 | 4:37 PM

Share

ಬೆಂಗಳೂರು, ಮಾ.19: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ (DV Sadananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.

ಇದನ್ನೂ ಓದಿ: ಮಾಜಿ ಸಿಎಂ ಸದಾನಂದ ಗೌಡಗೆ ಕಾಂಗ್ರೆಸ್ ಆಹ್ವಾನ: ಅಚ್ಚರಿಯ ಹೇಳಿಕೆ ನೀಡಿದ ಡಿಕೆ ಶಿವಕುಮಾರ್

ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.

ಇದನ್ನೂ ಓದಿ: ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಇನ್ನೂ ಮೂಡದ ಒಮ್ಮತ

ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Tue, 19 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್