AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತಿಗಳೂ ರಾಜಕಾರಣಿಗಳೇ: ಡಿಕೆ ಶಿವಕುಮಾರ್​ ಹೇಳಿಕೆಗೆ ಪ್ರಗತಿಪರರ ಆಕ್ರೋಶ, ಸಿಎಂಗೆ ಪತ್ರ

ಸಾಹಿತಿಗಳೂ ರಾಜಕಾರಣಿಗಳೇ ಎಂಬ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಗದಗನಲ್ಲಿ ಮಾತನಾಡಿದ ಸಾಹಿತಿ ಬಸವರಾಜ್ ಸೂಳಿಭಾವಿ, ನಾನೇ ಸಭೆ ಕರೆದಿದ್ದೇನೆ ಅದರಲ್ಲಿ ತಪ್ಪೇನಿದೆ ಅಂತಾರೆ. ಆದರೆ ಸಾಹಿತಿಗಳೂ ರಾಜಕಾರಣಿಗಳು ಅಂತಾ ಹೇಳಿ ಸಾಂಸ್ಕೃತಿಕ ವಲಯವನ್ನ ಅವಮಾನಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ಡಿಕೆ ಶಿವಕುಮಾರ್​ಗೆ ಬುದ್ಧಿ ಹೇಳಲು ಕೇಳಿಕೊಂಡಿದ್ದೇವೆ ಎಂದರು.

ಸಾಹಿತಿಗಳೂ ರಾಜಕಾರಣಿಗಳೇ: ಡಿಕೆ ಶಿವಕುಮಾರ್​ ಹೇಳಿಕೆಗೆ ಪ್ರಗತಿಪರರ ಆಕ್ರೋಶ, ಸಿಎಂಗೆ ಪತ್ರ
'ಸಾಹಿತಿಗಳೂ ರಾಜಕಾರಣಿಗಳೇ' ಡಿಕೆ ಶಿವಕುಮಾರ್​ ಹೇಳಿಕೆಗೆ ಪ್ರಗತಿಪರರ ಆಕ್ರೋಶ: ಸಿಎಂಗೆ ಪತ್ರ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 22, 2024 | 3:09 PM

Share

ಗದಗ, ಜೂನ್​ 22: ಸಾಹಿತಿಗಳೂ ರಾಜಕಾರಣಿಗಳೇ ಎಂಬ ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲದೆ ಪ್ರಗತಿಪರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾಹಿತಿ ಬಸವರಾಜ್ ಸೂಳಿಭಾವಿ (Basavaraj sulibhavi), ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಡಿಕೆ ಶಿವಕುಮಾರ್​ ಅವರಿಗೆ ಬುದ್ಧಿ ಹೇಳಲು ಕೇಳಿಕೊಂಡಿದ್ದೇವೆ ಎಂದರು.

ವಿಚಾರವಾದಿಗಳ, ಪ್ರಗತಿಪರರ ಆಶಯದಂತೆ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬರಹಗಾರರನ್ನ, ಸಾಹಿತಿಗಳನ್ನ ಅವಮಾನಿಸುವ, ದರ್ಪತೋರುವ ಕೃತ್ಯ ದುರಂತ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ 60-70% ಕಮೀಷನ್ ನಡೆದಿದೆ: ಸಿಸಿ ಪಾಟೀಲ್ ಆರೋಪ

ಡಿಕೆ ಶಿವಕುಮಾರ್​ ನಾನೇ ಸಭೆ ಕರೆದಿದ್ದೇನೆ ಅದರಲ್ಲಿ ತಪ್ಪೇನಿದೆ ಅಂತಾರೆ. ಆದರೆ ಸಾಹಿತಿಗಳೂ ರಾಜಕಾರಣಿಗಳು ಅಂತಾ ಹೇಳಿ ಸಾಂಸ್ಕೃತಿಕ ವಲಯವನ್ನ ಅವಮಾನಿಸಿದ್ದಾರೆ. ಇನ್ನು ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ್ದು ತಪ್ಪೇನು ಎಂದು ಸಚಿವ ತಂಗಡಗಿ ಅಂತಾರೆ. ಅವರ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಕ ಅಧಃಪತನಕ್ಕೆ ಸಾಕ್ಷಿ ಎಂದು ಕಿಕಾರಿದ್ದಾರೆ.

ಪಕ್ಷದ ಸರ್ಕಾರ ಅನ್ನೋದಾದರೆ ಸಚಿವ ಸಂಪುಟ ಸಭೆಯನ್ನ ಪಕ್ಷದ ಕಚೇರಿಯಲ್ಲಿ ಕರೆಯಿರಿ. ಸಾಂಸ್ಕೃತಿಕ ರಂಗದ ಮೇಲೆ ಹಿಡಿತ ಸಾಧಿಸುವ ಪ್ರಯತ್ನ ಸರಿಯಲ್ಲ. ಸಂಪುಟದ ಸದಸ್ಯರಿಗೆ ತಿಳಿಹೇಳುವಂತೆ ಸಿಎಂಗೆ ಪತ್ರ ಬರೆದು ಕೇಳಿಕೊಂಡಿದ್ದೇವೆ‌‌. ಸಿಎಂ ಮಾತ್ನಾಡ್ತಿರೋದು ಅನುಮಾನ ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್​ ಸೊಕ್ಕು ಮುರಿಯುತ್ತೇವೆ: ವಿಜಯೇಂದ್ರ

ಸಂಸ್ಕೃತಿಕ ಕ್ಷೇತ್ರಕ್ಕೆ ಸೇರಿದ ಅಕಾಡಮಿಗಳು ಸ್ವಾಯತ್ತವಾಗಿ ಕೆಲಸ ಮಾಡುತ್ತವೆ. ಅಕಾಡಮಿಗಳ ಅಧ್ಯಕ್ಷರನ್ನ ಪಕ್ಷದ ಕಚೇರಿಗೆ ಕರೆದು ಸಭೆ ಮಾಡಿದ್ದು ಸಂವಿಧಾನಾತ್ಮಕ ಕ್ರಮವಲ್ಲ. ಸಭೆಯಲ್ಲಿ ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಲು ಹೇಳಿದ್ದಾರೆ.

ರಮೇಶ್ ಬಾಬುಗೆ ಸಾಹಿತಿಗಳ ಸವಾಲ್ 

ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಅಕಾಡಮಿಯಲ್ಲಿ ಅವಕಾಶ ಸಿಗದವರು ವಿರೋಧಿಸುತ್ತಿದ್ದಾರೆ ಅಂತಾರೆ. ಸಾಹಿತಿಗಳು ರಾಜಕಾರಣಿಗಳ ಹಿಂದೆ ಓಡಾಡುತ್ತಿದ್ದರು ಅಂತೆಯೂ ಹೇಳಿದ್ದಾರೆ. ಹಿಂದೆ ಓಡಾಡಿದ ಸಾಹಿತಿಗಳ ಬಗ್ಗೆ ದಾಖಲೆ ಸಮೇತ ರಮೇಶ್ ಬಾಬು ಮಾಹಿತಿ ನೀಡಲಿ. ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಸವಾಲ್ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷವನ್ನ ಜನರಿಂದ ದೂರ ತೆಗೆದುಕೊಂಡು ಹೋಗುವ ಕೆಲಸವನ್ನ ಡಿಕೆ ಶಿವಕುಮಾರ್​, ಸಚಿವ ತಂಗಡಗಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:00 pm, Sat, 22 June 24

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ