Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 100ಕ್ಕೂ ಹೆಚ್ಚು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಇವೆ..ಸಾವಿನ ವರದಿಯಾಗಿಲ್ಲ: ಡಿಸಿಎಂ ಅಶ್ವತ್ಥ ನಾರಾಯಣ್​

ಲಾಕ್​ಡೌನ್ ಬಗ್ಗೆ ಮೇ 23ರಂದು ಮುಖ್ಯಮಂತ್ರಿ ಯಡಿಯೂರಪ್ಪನವರೇ ತಿಳಿಸಲಿದ್ದಾರೆ. ಲಾಕ್​ಡೌನ್​ ಮುಂದುವರಿಸಬೇಕೋ..ಬಿಡಬೇಕೋ ಎಂಬುದನ್ನು ಅವರೇ ನಿರ್ಧಾರ ಮಾಡುತ್ತಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ತಿಳಿಸಿದರು.

ಕರ್ನಾಟಕದಲ್ಲಿ 100ಕ್ಕೂ ಹೆಚ್ಚು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಇವೆ..ಸಾವಿನ ವರದಿಯಾಗಿಲ್ಲ: ಡಿಸಿಎಂ ಅಶ್ವತ್ಥ ನಾರಾಯಣ್​
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
Follow us
Lakshmi Hegde
|

Updated on: May 20, 2021 | 10:20 PM

ಮೈಸೂರು: ರಾಜ್ಯದಲ್ಲಿ 100ಕ್ಕೂ ಹೆಚ್ಚು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಪತ್ತೆಯಾಗಿವೆ. ಆದರೆ ಬ್ಲ್ಯಾಕ್​ ಫಂಗಸ್​​ನಿಂದ ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್​ ನಾರಾಯಣ್​ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಮೂರು ಬ್ಲ್ಯಾಕ್​ ಫಂಗಸ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಲಾಗಿತ್ತು. ಆದರೆ ಅದರಲ್ಲಿ 2 ಅಲ್ಲ ಎಂಬುದು ನಂತರ ಗೊತ್ತಾಯಿತು. ಈ ಸೋಂಕಿನ ಚಿಕಿತ್ಸೆಗೆ ಅಗತ್ಯವಾದ ಔಷಧಗಳ ಕೊರತೆ ಇದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಕೆಲವೇ ವಾರಗಳಲ್ಲಿ ಅವುಗಳ ಪೂರೈಕೆ ಆಗಲಿದೆ ಎಂದೂ ಮಾಹಿತಿ ನೀಡಿದರು.

ಲಾಕ್​ಡೌನ್​ ತೀರ್ಮಾನ ಸಿಎಂಗೆ ಬಿಟ್ಟಿದ್ದು ಇನ್ನು ಲಾಕ್​ಡೌನ್ ಬಗ್ಗೆ ಮೇ 23ರಂದು ಮುಖ್ಯಮಂತ್ರಿ ಯಡಿಯೂರಪ್ಪನವರೇ ತಿಳಿಸಲಿದ್ದಾರೆ. ಲಾಕ್​ಡೌನ್​ ಮುಂದುವರಿಸಬೇಕೋ..ಬಿಡಬೇಕೋ ಎಂಬುದನ್ನು ಅವರೇ ನಿರ್ಧಾರ ಮಾಡುತ್ತಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಮಾಹಿತಿ ನೀಡಿದ್ದಾರೆ. ಲಾಕ್​ಡೌನ್​ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿನ ಅಂಕಿ-ಅಂಶ ಗಮನಿಸಿ ಸಿಎಂ ಕ್ರಮ ಕೈಗೊಳ್ಳುತ್ತಾರೆ. ಈಗಿರುವ ಕಠಿಣ ಕ್ರಮಗಳನ್ನು ಮುಂದುವರಿಸಬೇಕಾ? ಸಡಿಲಗೊಳಿಸಬೇಕಾ? ಎಂಬುದೆಲ್ಲ ಅವರಿಗೇ ಬಿಟ್ಟಿದ್ದು ಎಂದೂ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಇಲ್ಲಿ ಉತ್ಪಾದನೆಯಾದ ಶೇ.50ರಷ್ಟು ಸ್ಪುಟ್ನಿಕ್ ವಿ ಲಸಿಕೆಯನ್ನು ಸರ್ಕಾರಕ್ಕೆ ನೀಡಬೇಕು. ಉಳಿದ ಶೇ.50ರಷ್ಟನ್ನು ಮಾತ್ರ ಓಪನ್ ಮಾರ್ಕೆಟ್​ನಲ್ಲಿ ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್-19 ಪಿಡುಗಿನಿಂದ ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲು ಸೋನಿಯಾ ಗಾಂಧಿ ಸಲಹೆ

18-44 Vaccination in Karnataka: ಮೇ 22ರಿಂದಲೇ 18 ರಿಂದ 44 ವರ್ಷದವರಿಗೆ ಕೊವಿಡ್ ಲಸಿಕೆ; ಕೊವಿಡ್ ಸೇನಾನಿಗಳಿಗೆ ಮೊದಲ ಆದ್ಯತೆ

(Over 100 cases of black fungus in Karnataka said DCM Ashwath Narayan)

ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ