AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷ ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ! ಹೆಣ್ಣು ಮಕ್ಕಳೇ ಹೆಚ್ಚು

ಮಕ್ಕಳ ಅಪಹರಣ ಹಾಗೂ ನಾಪತ್ತೆ ಸಂಬಂಧ ವಿಧಾನಸಭೆ ಕಲಾಪದಲ್ಲಿ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಮಕ್ಕಳ ಅಪಹರಣ ಪ್ರಕರಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ. ಈ ಪೈಕಿ ಅ3 ಸಾವಿರದಷ್ಟು ಕೇಸ್​​ಗಳನ್ನು ಪೊಲೀಸರು ಬೇಧಿಸಿದ್ದರೆ, ಸಾವಿರಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಇನ್ನೂ ನಿಗೂಢವಾಗಿದೆ.

5 ವರ್ಷ ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ! ಹೆಣ್ಣು ಮಕ್ಕಳೇ ಹೆಚ್ಚು
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Aug 20, 2025 | 6:49 AM

Share

ಬೆಂಗಳೂರು, ಆಗಸ್ಟ್ 20: ಕಳೆದ ಐದು ವರ್ಷದ ಅವಧಿಯಲ್ಲಿ ಕರ್ನಾಟಕ (Karnataka) ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಈ ವಿಚಾರವನ್ನು ಖುದ್ದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢ ಆದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚು. ಮಕ್ಕಳು ಕಾಣೆಯಾದ ಲೆಕ್ಕಾಚಾರದ ಪೈಕಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಮಕ್ಕಳ ಅಪಹರಣವು ವರ್ಷದಿಂದ ವರ್ಷಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಈ ವರ್ಷ ಜುಲೈ ಅಂತ್ಯಕ್ಕೆ 2,170 ಮಕ್ಕಳು ನಾಪತ್ತೆಯಾಗಿದ್ದಾರೆ. ಅದರಲ್ಲೂ ಕಿಡ್ನಾಪ್ ಹಾಗೂ ನಿಗೂಢ ಆದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚಿರುವುದು ಕಳವಳಕಾರಿಯಾಗಿದೆ.

ಮಕ್ಕಳು ನಾಪತ್ತೆ ಅಂಕಿ ಅಂಶ

2020ರಿಂದ ಈವರೆಗೂ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆ ಪ್ರಕರಣ ದಾಖಲಾಗಿದ್ದು, ಈ ಪೈಕಿ 13,542 ಪ್ರಕರಣಗಳಲ್ಲಿ ಮಕ್ಕಳು ಪೋಷಕರ ಮಡಿಲಿಗೆ ಸೇರಿದ್ಧಾರೆ. ಬಾಕಿ 1,336 ಮಕ್ಕಳು ನಿಗೂಢವಾಗಿದ್ದಾರೆ. ಅಪಹರಣಕ್ಕೆ ಒಳಗಾದ 10,792 ಹೆಣ್ಣು ಮಕ್ಕಳ ಪೈಕಿ 1,003 ಮಂದಿ ಕಾಣೆಯಾಗಿದ್ದಾರೆ. 4,086 ಗಂಡು ಮಕ್ಕಳ ಪೈಕಿ 333 ಮಕ್ಕಳು ನಿಗೂಢವಾಗಿದ್ದಾರೆ. ಅಪಹರಣ ಪ್ರಕರಣದಲ್ಲಿ ಐದು ವರ್ಷದಲ್ಲಿ 634 ಅಪಹರಣಕಾರರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಮಕ್ಕಳು ನಾಪತ್ತೆ ಪ್ರಕರಣ: ಜಾವ ಜಿಲ್ಲೆಗೆ ಯಾವ ಸ್ಥಾನ?

  1. ಬೆಂಗಳೂರು
  2.  ದಾವಣಗೆರೆ
  3. ಉಡುಪಿ
  4. ದಕ್ಷಿಣ ಕನ್ನಡ
  5. ಹಾವೇರಿ
  6. ಚಿತ್ರದುರ್ಗ
  7. ತುಮಕೂರು
  8.  ಮೈಸೂರು

ಮಕ್ಕಳು ನಾಪತ್ತೆಯಾಗಲು, ಅಪಹರಣಕ್ಕೆ ಕಾರಣವೇನು?

ಬಾಲ ಕಾರ್ಮಿಕರಾಗಿ ದುಡಿಸಲು ಮಕ್ಕಳ ಅಪಹರಣ ಮಾಡಲಾಗುತ್ತಿದೆ. ಹಣದಾಸೆ ತೋರಿಸಿ ವೇಶ್ಯಾವಾಟಿಕೆ ಜಾಲಕ್ಕೆ ತಳ್ಳುವುದು. ಸೋಷಿಯಲ್ ಮೀಡಿಯಾ ಪ್ರಭಾವದಿಂದ ಪ್ರೀತಿ-ಪ್ರೇಮ ಸೆಳೆತಕ್ಕೆ ಒಳಗಾಗಿ ನಾಪತ್ತೆಯಾಗುವುದು. ಇನ್ನು ಅಂಗಾಂಗ ಮಾರಾಟ ದಂಧೆ, ಭಿಕ್ಷಾಟನೆಯಲ್ಲಿ ತೊಡಗಿಸಲು ಮಕ್ಕಳ ಅಪಹರಣ ಮಾಡಲಾಗುತ್ತಿದೆ ಎಂಬ ವಿಚಾರ ಬಯಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹುಲಿ ಸಂತತಿ ಅಪಾಯದಲ್ಲಿ: ಐದು ವರ್ಷಗಳಲ್ಲಿ 75 ವ್ಯಾಘ್ರಗಳ ಸಾವು

ಒಟ್ಟಾರೆಯಾಗಿ ರಾಜ್ಯದಲ್ಲಿ ಮಕ್ಕಳ ನಾಪತ್ತೆ ಕೇಸ್ ದಿನೇ ದಿನೇ ಹೆಚ್ಚಳವಾಗುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದು, ಹಾಗೆಯೇ ಪೋಷಕರು ಕೂಡ ಎಚ್ಚೆತ್ತುಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ