AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಕೋಟಿ ರೂ. ಪಿಎಫ್ ಬಾಕಿ ಉಳಿಸಿಕೊಂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ: ಪಿಎಫ್ ಸಿಗದೆ ಸಂಕಷ್ಟದಲ್ಲಿ ಸಾರಿಗೆ ನೌಕರರು

ಬಿಎಂಟಿಸಿ, ಕೆಎಸ್ಆರ್​ಟಿಸಿ ಸೇರಿದಂತೆ ನಾಲ್ಕು ನಿಗಮದ ಒಂದು ಲಕ್ಷಕ್ಕೂ ಹೆಚ್ಚು ನೌಕರರ ಪ್ರತಿ ತಿಂಗಳು ಸಂಬಳದಲ್ಲಿ ಸಾವಿರಾರು ರುಪಾಯಿ ಹಣವನ್ನು ಪಿಎಫ್​ಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಆ ಹಣವನ್ನು ಪಿಎಫ್ ಟ್ರಸ್ಟ್​ಗೆ ಪಾವತಿ ಮಾಡಲಾಗಿಲ್ಲ ಎಂಬ ಆರೋಪ ಇದೀಗ ಕೇಳಿಬಂದಿದೆ. ಇದರಿಂದ ನೌಕರರು ಪಿಎಫ್ ಹಣವನ್ನು ಕ್ಲೈಮ್ ಮಾಡಿಕೊಳ್ಳಲು ಆಗುತ್ತಿಲ್ಲ.

3 ಸಾವಿರ ಕೋಟಿ ರೂ. ಪಿಎಫ್ ಬಾಕಿ ಉಳಿಸಿಕೊಂಡ ಕೆಎಸ್​ಆರ್​ಟಿಸಿ, ಬಿಎಂಟಿಸಿ: ಪಿಎಫ್ ಸಿಗದೆ ಸಂಕಷ್ಟದಲ್ಲಿ ಸಾರಿಗೆ ನೌಕರರು
ಸಾಂದರ್ಭಿಕ ಚಿತ್ರ
Kiran Surya
| Updated By: Ganapathi Sharma|

Updated on: May 26, 2025 | 7:39 AM

Share

ಬೆಂಗಳೂರು, ಮೇ 26: ಕೆಎಸ್ಆರ್​ಟಿಸಿ (KSRTC), ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮಳ ನೌಕರರ ಸಂಬಳದಲ್ಲಿ ಪ್ರತಿ ತಿಂಗಳು ಸಾವಿರಾರು ರೂಪಾಯಿ ಹಣವನ್ನು ಪಿಎಫ್​​ಗಾಗಿ ಕಡಿತ ಮಾಡಲಾಗುತ್ತದೆ. ‌ಆ ಹಣವನ್ನು ಪಿಎಫ್ ಟ್ರಸ್ಟ್​​ಗೆ ಪಾವತಿ ಮಾಡಬೇಕು. ಆದರೆ ಕಳೆದ ಒಂದು ವರ್ಷದಿಂದ ಪಿಎಫ್ ಟ್ರಸ್ಟ್​ಗೆ ಹಣ ಪಾವತಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಸಾರಿಗೆ ನೌಕರರು ಇದೀಗ ಕಷ್ಟದ ಸಮಯದಲ್ಲಿ ಪಿಎಫ್ ಹಣಕ್ಕಾಗಿ ಅರ್ಜಿ ಸಲ್ಲಿಸಿದರೂ ಹಣ ಸಿಗದಂತಾಗಿದೆ. ನೌಕರರ ಪಿಎಫ್ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸಾರಿಗೆ ನೌಕರರ ಮುಖಂಡ ಜಗದೀಶ್ ಆರೋಪಿಸಿದ್ದಾರೆ.

ಪಿಎಫ್ ಟ್ರಸ್ಟ್ ಗೆ ಪಾವತಿಸಬೇಕಿದ್ದ 3110 ಕೋಟಿ ರುಪಾಯಿ ಹಣವನ್ನು ನಾಲ್ಕು ಸಾರಿಗೆ ನಿಗಮಗಳು ಬಾಕಿ ಉಳಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ, ನಾಲ್ಕು ಸಾರಿಗೆ ನಿಗಮಗಳ ಎಂಡಿಗಳಿಗೆ ಪಿಎಫ್ ಟ್ರಸ್ಟ್​​ಗೆ ಪಾವತಿ ಮಾಡಬೇಕಿರುವ ಸಾವಿರಾರು ಕೋಟಿ ರುಪಾಯಿ ಹಣವನ್ನು ಪಾವತಿ ಮಾಡಿ ಎಂದು ಸಾರಿಗೆ ನೌಕರರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ಪಿಎಫ್ ಟ್ರಸ್ಟ್​​ ನೌಕರರ ಹಣವನ್ನು ಪಾವತಿ ಮಾಡಿಲ್ಲ. ಇದರಿಂದ ಪಿಎಫ್ ಟ್ರಸ್ಟ್ ನಾಲ್ಕು ನಿಗಮಗಳಿಗೆ ಪಾವತಿ ಮಾಡಬೇಕಿರುವ 3110 ಕೋಟಿ ರೂಪಾಯಿಗೆ ಶೇ 37 ರ ವರೆಗೆ ಬಡ್ಡಿ ವಿಧಿಸಲಿದೆ ಎನ್ನಲಾಗಿದೆ.

ಇದನ್ನೂ ಓದಿ
Image
ಕರಾವಳಿ ಕರ್ನಾಟಕ, ಮಲೆನಾಡು ಭಾಗದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಏನೇನಾಯ್ತು?
Image
ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ: ಕಾಲೇಜುಗಳಿಗೆ ರಜೆ ಘೋಷಣೆ
Image
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
Image
ಮುಂಗಾರು ಮಳೆ: ಕರವಾಳಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಅವಾಂತರ

ಯಾವ ನಿಗಮದಿಂದ ಎಷ್ಟು ಬಾಕಿ?

ಕೆಎಸ್ಆರ್ಟಿಸಿ- 891 ಕೋಟಿ ರುಪಾಯಿ, ಬಿಎಂಟಿಸಿ-958 ಕೋಟಿ ರುಪಾಯಿ, ಎನ್ಡಬ್ಲೂಕೆಆರ್ಟಿಸಿ- 1184 ಕೋಟಿ ರುಪಾಯಿ ಹಾಗೂ ಕೆಕೆಆರ್ಟಿಸಿ- 76 ಕೋಟಿ ರುಪಾಯಿ ಸೇರಿ ಒಟ್ಟು3110 ಕೋಟಿ ರುಪಾಯಿ ಬಾಕಿ ಉಳಿಸಿಕೊಳ್ಳಲಾಗಿದೆ. ಪಿಎಫ್ ಟ್ರಸ್ಟ್​​ಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಬಡ್ಡಿ ಪ್ರಮಾಣ ಹಚ್ಚಳವಾಗುತ್ತಲೇ ಇದೆ ಎನ್ನಲಾಗಿದೆ.

ಸಾರಿಗೆ ಇಲಾಖೆ ಕಾರ್ಯದರ್ಶಿ ಹೇಳಿದ್ದೇನು?

ಸಾರಿಗೆ ನೌಕರರ ಪಿಎಫ್ ಹಣವನ್ನು ಪಿಎಫ್ ಟ್ರಸ್ಟ್​ಗೆ ಪಾವತಿ ಮಾಡಲು ರಾಜ್ಯ ಸರ್ಕಾರ ಎರಡು ಸಾವಿರ ಕೋಟಿ ಸಹಾಯಧನವನ್ನು ನೀಡಲು ಗ್ರೀನ್ ಸಿಗ್ನಲ್ ನೀಡಿದೆ. ನಾಲ್ಕು ನಿಗಮಗಳು ಸಾಲ ಪಡೆದುಕೊಂಡು ಪಿಎಫ್ ಟ್ರಸ್ಟ್​​ಗೆ ಹಣವನ್ನು ಪಾವತಿ ಮಾಡಲಿದೆ. ನಂತರ ಆ ಹಣವನ್ನು ಸರ್ಕಾರ ನಾಲ್ಕು ನಿಗಮಗಳಿಗೆ ನೀಡಲಿದೆ. ಹಂತ ಹಂತವಾಗಿ ಪಿಎಫ್ ಟ್ರಸ್ಟ್​​ಗೆ ಹಣ ಪಾವತಿ ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ. ಎನ್​ವಿ ಪ್ರಸಾದ್ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್

ಒಟ್ಟಿನಲ್ಲಿ ಸಾರಿಗೆ ನೌಕರರಿಗೆ ತಮ್ಮದೇ ಪಿಎಫ್​ ಹಣ ಕಷ್ಟಕಾಲದಲ್ಲಿ ನೆರವಿಗೆ ಸಿಗದಂತಾಗಿದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಮುಖಂಡರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್