ಬೆಂಗಳೂರಿನಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದವರಿಂದ ಭರ್ಜರಿ ದಂಡ ವಸೂಲಿ.. 11 ದಿನದಲ್ಲಿ 83.49 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ

ಕೊರೊನಾ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಯೇ ಬರೋಬ್ಬರಿ ₹83,49,740 ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪೈಕಿ 32,330 ಪ್ರಕರಣಗಳು ಮಾಸ್ಕ್​ ಹಾಕದೇ ಇರುವವರಿಗೆ ಸಂಬಂಧಿಸಿದ್ದು, 1,284 ಪ್ರಕರಣಗಳಲ್ಲಿ ದೈಹಿಕ ಅಂತರ ಪಾಲಿಸದವರಿಗೆ ದಂಡ ವಿಧಿಸಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದವರಿಂದ ಭರ್ಜರಿ ದಂಡ ವಸೂಲಿ.. 11 ದಿನದಲ್ಲಿ 83.49 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ
ಸಂಗ್ರಹ ಚಿತ್ರ
Follow us
Skanda
| Updated By: preethi shettigar

Updated on: Apr 13, 2021 | 10:50 AM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹರಸಾಹಸಪಡುತ್ತಿದೆ. ಕೆಲ ದಿನಗಳಿಂದ ಕೊರೊನಾ ನಿಯಮಾವಳಿಗಳ ಪಾಲನೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಮಾಸ್ಕ್ ಹಾಕದವರಿಂದ, ಕೊರೊನಾ ನಿಯಮ ಪಾಲನೆ ಮಾಡದವರಿಂದ ದಂಡ ವಸೂಲಿ ಮಾಡುವ ಕಾರ್ಯಕ್ಕೆ ಸರ್ಕಾರ ಈಗಾಗಲೇ ಇಳಿದಿದೆ. ಲೆಕ್ಕಾಚಾರಗಳ ಪ್ರಕಾರ ಕಳೆದ 11 ದಿನಗಳಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದವರಿಂದ ಭಾರೀ ದೊಡ್ಡ ಮೊತ್ತದ ದಂಡ ಸಂಗ್ರಹಿಸಲಾಗಿದ್ದು, ಲಕ್ಷ ಲಕ್ಷ ರೂಪಾಯಿ ಸರ್ಕಾರದ ಬೊಕ್ಕಸ ಸೇರಿದೆ.

ಕೊರೊನಾ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಯೇ ಬರೋಬ್ಬರಿ ₹83,49,740 ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪೈಕಿ 32,330 ಪ್ರಕರಣಗಳು ಮಾಸ್ಕ್​ ಹಾಕದೇ ಇರುವವರಿಗೆ ಸಂಬಂಧಿಸಿದ್ದು, 1,284 ಪ್ರಕರಣಗಳಲ್ಲಿ ದೈಹಿಕ ಅಂತರ ಪಾಲಿಸದವರಿಗೆ ದಂಡ ವಿಧಿಸಲಾಗಿದೆ. ಕೊವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಮಾರ್ಷಲ್​ಗಳ ಜೊತೆ ಪೊಲೀಸರಿಗೂ ದಂಡ ವಿಧಿಸುವ ಅಧಿಕಾರವನ್ನು ಸರ್ಕಾರ ನೀಡಿದ್ದು, ಜನಸಾಮಾನ್ಯರಿಗೆ ದಂಡದ ಬಿಸಿ ಮುಟ್ಟಿಸುವ ಮೂಲಕವಾದರೂ ಕೊರೊನಾ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.

ಲಾಕ್​ಡೌನ್​ ಬಗ್ಗೆ ಯೋಚನೆ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್ ಮಾಡಲು ಸೂಚಿಸಿದೆ ಎಂದು ಹೇಳಿದ್ದರು. ಆದರೆ, ಇದೆಲ್ಲವನ್ನೂ ಸ್ಪಷ್ಟವಾಗಿ ನಿರಾಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ ಎಂದು ಬೀದರ್​ನ ಬಸವಕಲ್ಯಾಣದಲ್ಲಿ ಹೇಳಿಕೆ ನೀಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್ ಮಾಡಲು ಸೂಚಿಸಿದೆ ಎಂಬ ಸುಧಾಕರ್ ಹೇಳಿಕೆ ಬಗ್ಗೆ ಪ್ರತ್ಯುತ್ತರಿಸಿ ನಾನು ಕೂಡಾ ಸಲಹಾ ಸಮಿತಿಯಲ್ಲಿ ಇದ್ದೇನೆ. ಯಾರೂ ಲಾಕ್​ಡೌನ್​ಗೆ ಸೂಚನೆ ನೀಡಿಲ್ಲ. ಸುಮ್ಮನೇ ತಪ್ಪು ಹೇಳಬೇಡಿ. ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Lockdown: ಸದ್ಯಕ್ಕೆ ಲಾಕ್​ಡೌನ್​ ಮಾಡಲ್ಲ.. ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್​ಗೆ ಸೂಚಿಸಿಯೂ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 

ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು

(Over Rs 83.49 Lakh fine collected from people for breaking covid 19 Guidelines in Bengaluru in past 11 days)