Oxygen Emergency: ತುಮಕೂರು, ಮಂಡ್ಯ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ; ರೋಗಿಗಳು ಕಂಗಾಲು

ಅಸಹಾಯಕ ಸ್ಥಿತಿಯಲ್ಲಿರುವ ರೋಗಿಗಳು ಮುಂದೇನು ಮಾಡಬೇಕು ಎಂದು ತೋಚದೆ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ನೆರವಿಗೆ ಬರಬಹುದು ಎಂಬ ನಿರೀಕ್ಷೆಯಲ್ಲಿ ರೋಗಿಗಳ ಸಂಬಂಧಿಕರು ಕಾಯುತ್ತಿದ್ದಾರೆ.

Oxygen Emergency: ತುಮಕೂರು, ಮಂಡ್ಯ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ; ರೋಗಿಗಳು ಕಂಗಾಲು
ತುಮಕೂರಿನ ಅಶ್ವಿನಿ ಆಸ್ಪತ್ರೆ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:May 05, 2021 | 9:07 PM

ಬೆಂಗಳೂರು: ತುಮಕೂರು ಮತ್ತು ಮಂಡ್ಯ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಬುಧವಾರ ವೈದ್ಯಕೀಯ ಆಮ್ಲಜನಕದ ಕೊರತೆ ಕಾಣಿಸಿಕೊಂಡಿದ್ದು, ರೋಗಿಗಳನ್ನು ತುರ್ತಾಗಿ ಬೇರೆಡೆಗೆ ಕರೆದೊಯ್ಯುವಂತೆ ಆಸ್ಪತ್ರೆ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಈಗಾಗಲೇ ಅಸಹಾಯಕ ಸ್ಥಿತಿಯಲ್ಲಿರುವ ರೋಗಿಗಳು ಮುಂದೇನು ಮಾಡಬೇಕು ಎಂದು ತೋಚದೆ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ನೆರವಿಗೆ ಬರಬಹುದು ಎಂಬ ನಿರೀಕ್ಷೆಯಲ್ಲಿ ರೋಗಿಗಳ ಸಂಬಂಧಿಕರು ಕಾಯುತ್ತಿದ್ದಾರೆ.

ಆಕ್ಸಿಜನ್​ ಕೊರತೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ ರೋಗಿಗಳನ್ನು ತೆರವುಗೊಳಿಸಲು ಸಿಬ್ಬಂದಿ ಮುಂದಾಗಿದ್ದಾರೆ. ರಾತ್ರಿ 12 ಗಂಟೆಯ ಒಳಗೆ ಆಸ್ಪತ್ರೆ ಖಾಲಿ ಮಾಡುವಂತೆ ರೋಗಿಗಳಿಗೆ ಸೂಚನೆ ನೀಡಲಾಗಿದೆ. ಈ ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನೀಡಿರುವ ಸೂಚನೆಯಿಂದ ರೋಗಿಗಳು ಮತ್ತು ಅವರ ಸಂಬಂಧಿಗಳು ಪರದಾಡುವಂತಾಗಿದೆ.

ಮಂಡ್ಯದಲ್ಲಿಯೂ ಮೆಡಿಕಲ್​ ಆಕ್ಸಿಜನ್​ ಸಮಸ್ಯೆಯಿಂದ ಇಂಥದ್ದೇ ಸಮಸ್ಯೆ ತಲೆದೋರಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲವೇ ಗಂಟೆಯಲ್ಲಿ ಆಕ್ಸಿಜನ್​ ಖಾಲಿಯಾಗಲಿದೆ ಎಂಬ ಆತಂಕದ ಸೂಚನೆಯನ್ನು ಸಿಬ್ಬಂದಿ ನೀಡುತ್ತಿದ್ದಾರೆ. ಮೈಸೂರಿಂದ ಇಂದು ಬರಬೇಕಿದ್ದ ಆಕ್ಸಿಜನ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸಮಸ್ಯೆಯಾಗಿದೆ. ಜಿಲ್ಲಾಡಳಿತಕ್ಕೆ ತಿಳಿಸಿದ್ರೂ ಕ್ರಮ ತೆಗೆದುಕೊಂಡಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆ ಸಿಬ್ಬಂದಿಯೊಬ್ಬರು ತಿಳಿಸಿದರು. ಈಗಾಗಲೇ ನಾಲ್ವರು ರೋಗಿಗಳನ್ನು ಸಂಬಂಧಿಕರು ಬೇರೆಡೆಗೆ ಕರೆದೊಯ್ದಿದ್ದಾರೆ. ಆದರೆ ಉಳಿದವರಿಗೆ ಎಲ್ಲಿಗೆ ಹೋಗಬೇಕೆಂಬ ಗೊಂದಲ ಕಾಡುತ್ತಿದೆ. ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಆಕ್ಸಿಜನ್ ಕೊಟ್ಟ ತುಮಕೂರು ಡಿಎಚ್​ಒ ಕಚೇರಿ ತುಮಕೂರಿನ ಅಶ್ವಿನಿ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ತುರ್ತು ಪರಿಸ್ಥಿತಿ ಎದುರಾಗಿರುವುದನ್ನು ಗಮನಿಸಿದ ಜಿಲ್ಲಾ ವೈದ್ಯಾಧಿಕಾರಿ ಕಚೇರಿ 80 ಜಂಬೋ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿ, 37 ಸೋಂಕಿತರ ಜೀವ ಕಾಪಾಡಿದೆ.

(Oxygen Emergency in Tumkur and Mandya Private Hospitals Treating covid patients SOS call sent)

ಇದನ್ನೂ ಓದಿ: ಆಕ್ಸಿಜನ್ ಇಲ್ಲದೆ ರೋಗಿಗಳ ಸಾವು: ಚಾಮರಾಜನಗರ ದುರಂತದ ನ್ಯಾಯಾಂಗ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು, ಇದು ಈವರೆಗಿನ ದಾಖಲೆ

Published On - 9:03 pm, Wed, 5 May 21

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ