ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಬಿ.ವರಳೆ ಪ್ರಮಾಣ ವಚನ ಸ್ವೀಕಾರ

| Updated By: Rakesh Nayak Manchi

Updated on: Oct 15, 2022 | 12:57 PM

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಳೆ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಬಿ.ವರಳೆ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಬಿ.ವರಳೆ ಪ್ರಮಾಣ ವಚನ ಸ್ವೀಕಾರ
Follow us on

ಬೆಂಗಳೂರು: ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಳೆ (P.B.Varale) ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಿ.ಬಿ.ವರಳೆ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಸಚಿವ ಗೋವಿಂದ ಎಂ ಕಾರಜೋಳ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್.ಎಸ್ ಓಕಾ (Abhay.S. Oka) ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಮುಂಬಡ್ತಿ ಪಡೆದ ಹಿನ್ನೆಲೆ ಬಾಂಬೆ ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಪಿ.ಬಿ.ವರಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಅ.11ರಂದು ಆದೇಶ ಹೊರಡಿಸಲಾಗಿತ್ತು.

ಮಹಾರಾಷ್ಟ್ರದ ನಿಪಾನಿ ಎಂಬಲ್ಲಿ ಜನಿಸಿದ್ದ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠ ವಿವಿಯಲ್ಲಿ ಕಾನೂನು ಪದವಿ ಪಡೆದು ಹಿರಿಯ ವಕೀಲ ಎಸ್.ಎನ್.ಲೋಹಿಯ ಬಳಿ ಸಹಾಯಕರಾಗಿ ವೃತ್ತಿ ಜೀವನವನ್ನು ಆರಂಭವಿಸಿದರು. ನಂತರ ಔರಂಗಬಾದ್ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಬಾಂಬೆ ಹೈಕೋರ್ಟ್‍ನ ಔರಂಗಬಾದ್ ಪೀಠದಲ್ಲಿ ಮಹಾರಾಷ್ಟ್ರ ಸರ್ಕಾರದ ಸಹಾಯಕ ಅಭಿಯೋಜಕರಾಗಿ, ಬಾಂಬೆ ಹೈಕೋರ್ಟ್​ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 15 October 22