ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಸೋಮಣ್ಣ, ಪ್ರೇಮಾ ಧನರಾಜ್‌ ಸಾಧನೆ ಬಗ್ಗೆ ತಿಳಿಯಿರಿ

ಕೇಂದ್ರ ಸರ್ಕಾರ 75ನೇ ಗಣರಾಜ್ಯೋತ್ಸವ ನಿಮಿತ್ತ ಪದ್ಮ ಪ್ರಶಸ್ತಿಗಳ ಪಟ್ಟಿಯನ್ನು ಪ್ರಕಟಿಸಿದ್ದು, 34 ಪ್ರಶಸ್ತಿ ಪುರಸ್ಕೃತರ ಪೈಕಿ ಕರ್ನಾಟಕದ ಇಬ್ಬರು ಸೋಮಣ್ಣ ಹಾಗೂ ಪ್ರೇಮ ಧನರಾಜ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಹಾಗಾದ್ರೆ, ಇವರಿಬ್ಬರ ಸಾಧನೆ ಏನು ಎನ್ನುವುದನ್ನು ಸಂಕ್ಷಿಪ್ತವಾಗಿ ತಿಳಿದುಕೊಳ್ಳಿ

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಸೋಮಣ್ಣ, ಪ್ರೇಮಾ ಧನರಾಜ್‌ ಸಾಧನೆ ಬಗ್ಗೆ ತಿಳಿಯಿರಿ
ಪ್ರೇಮಾ ಧನರಾಜ್‌, ಸೋಮಣ್ಣ,
Follow us
ರಮೇಶ್ ಬಿ. ಜವಳಗೇರಾ
|

Updated on: Jan 25, 2024 | 11:26 PM

ಬೆಂಗಳೂರು, (ಜನವರಿ 15): 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards) ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 34 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು ಈ ಪೈಕಿ ಕರ್ನಾಟಕದ ಇಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. 25 ಸಾವಿರ ಜನರಿಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಮಾಡಿರುವ ಪ್ರೇಮಾ ಧನರಾಜ್ ಹಾಗೂ ಜೇನುಕುರುಬ ಸೋಮಣ್ಣ ಅವರಿಗ ಪದ್ಮಶ್ರೀ ಪ್ರಶಸ್ತಿ ದೊರೆತಿದೆ.

ಜೇನುಕುರುಬ ಸೋಮಣ್ಣರ ಸಾಧನೆ

ಮೈಸೂರು ಜಿಲ್ಲೆಯ ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕು ಮೊತ್ತ ಹಾಡಿಯ ಮೂಲದವರಾದ 66 ವರ್ಷದ ಸೋಮಣ್ಣ ಜೇನು ಕುರುಬ ಬುಡಕಟ್ಟ ಸಮುದಾಯದ ಹಕ್ಕುಗಳಿಗಾಗಿ ಕಳೆದ 4 ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶಗಳಲ್ಲಿ ವಾಷಿಸುವ ಬುಡಕಟ್ಟು ಸಮುದಾಯಗಳ ಜನರ ರಕ್ಷಣೆ ಹಾಗೂ ಸುರಕ್ಷತೆ ಬಗ್ಗೆ ಇವರು ನಿರಂತರವಾಗಿ ಸರ್ಕಾರದ ಗಮನ ಸೆಳೆಯುತ್ತ ಬಂದಿದ್ದಾರೆ.

ಇದನ್ನೂ ಒದಿ: Padma Awards 2024 Winners List: ಕರ್ನಾಟಕದ ಇಬ್ಬರು ಸೇರಿದಂತೆ 34 ಸಾಧಕರಿಗೆ ಪದ್ಮಶ್ರೀ, ಇಲ್ಲಿದೆ ಪುರಸ್ಕೃತರ ಪಟ್ಟಿ

ಪ್ರೇಮಾ ದೇವರಾಜ್ ಅವರ ಬಗ್ಗೆ

ಇನ್ನು ಪ್ರೇಮಾ ದೇವರಾಜ್ ಅವರು ವೃತ್ತಿಯಲ್ಲಿ ಡಾಕ್ಟರ್ ಆಗಿದ್ದು, ಇವರು ಅಗ್ನಿ ರಕ್ಷಾ ಎಂಬ ಸರ್ಕಾರೇತರ ಸಂಸ್ಥೆಯ ಮೂಲಕ ಸುಟ್ಟ ಗಾಯಗಳಿಗೆ ತುತ್ತಾದ 25,000ಕ್ಕೂ ಅಧಿಕ ಮಂದಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಕುರಿತು ಮೂರು ಪುಸ್ತಕಗಳನ್ನು ಬರೆದಿದ್ದಾರೆ. 1965ರಲ್ಲಿ ಪ್ರೇಮ ಧನರಾಜ್‌ ಅವರಿಗೆ 8 ವರ್ಷವಾಗಿದ್ದಾಗ, ಬೆಂಗಳೂರಿನಲ್ಲಿ ಮನೆಯ ಅಗ್ನಿ ದುರಂತದಲ್ಲಿ ಶೇ 50ರಷ್ಟು ಸುಟ್ಟ ಗಾಯಗಳಿಂದ ಬದುಕುಳಿದಿರುವ ಇವರು ಬಾಲ್ಯದಲ್ಲಿ 14ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಮನೆಯ ಅಡುಗೆ ಮನೆಯಲ್ಲಿ ಆಟವಾಡುವ ವೇಳೆ ಸ್ಟವ್‌ ಸಿಡಿದು ಅಅವರ ಮುಖ, ಕುತ್ತಿಗೆ ಹಾಗೂ ದೇಹ ಸಂಪೂರ್ಣವಾಗಿ ಸುಟ್ಟುಹೋಗಿತ್ತು. ಅಸಾಧ್ಯ ನೋವಿನ ನಡುವೆಯೂ ಅವರು ತಮ್ಮ ಬದುಕುವ ಹೋರಾಟವನ್ನು ಬಿಟ್ಟಿರಲಿಲ್ಲ. ಶೇ. 50ರಷ್ಟು ಸುಟ್ಟ ಗಾಯಗಳಾಗಿದ್ದ ಪ್ರೇಮಾ ಬದುಕುವುದೇ ಅನುಮಾನ ಎಂದು ವೈದ್ಯರು ತಿಳಿಸಿದ್ದರು. ಅಂದಾಜು ಒಂದು ತಿಂಗಳ ಚಿಕಿತ್ಸೆಯ ಬಳಿಕ ಪ್ರೇಮಾ ಅವರನ್ನು ಅವರ ತಂದೆ ಸಿಎಸ್‌ ಧನರಾಜ್‌ ಹಾಗೂ ತಾಯಿ ರೋಸಿ ಧನರಾಜ್‌ ತಮಿಳುನಾಡಿನ ವೆಲ್ಲೂರ್‌ನಲ್ಲಿರುವ ಕ್ರಿಶ್ಚಿಯನ್‌ ಮೆಡಿಕಲ್‌ ಕಾಲೇಜಿಗೆ ಚಿಕಿತ್ಸೆಗಾಗಿ ಸೇರಿಸಿದ್ದರು.

ಇದೀಗ ಇವರಿಬ್ಬರ ಸಾಧನೆಯನ್ನು ಗಮನಿಸಿ ಕೇಂದ್ರ ಸರ್ಕಾರ 2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು