ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ

ತುಳಸಿ ಗೌಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದವರು. ಇವರು ಹಾಲಕ್ಕಿ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿರುವ ಇವರಿಗೆ ಈಗ 77 ವರ್ಷ.

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ
ತುಳಸಿ ಗೌಡ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕ್ಷಣ
Follow us
TV9 Web
| Updated By: Lakshmi Hegde

Updated on:Nov 08, 2021 | 9:40 PM

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿ ವರ್ಗಕ್ಕೆ ಸೇರಿಸುವಂತೆ ಪದ್ಮಶ್ರೀ ಪುರಸ್ಕೃತ ಪರಿಸರವಾದಿ, ವೃಕ್ಷಮಾತೆ ಎಂದೇ ಹೆಸರಾಗಿರುವ ತುಳಸಿ ಗೌಡ ಇಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ, ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಬಳಿಕ ದೆಹಲಿಯಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು, ನಮ್ಮ ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಬೇಕು ಎಂದು 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಅದನ್ನು ಈಡೇರಿಸಿದರೆ ನಮಗೆ ತುಂಬ ಖುಷಿಯಾಗುತ್ತದೆ ಎಂದು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಶಸ್ತಿ ಪಡೆದಿದ್ದು ಖುಷಿಯಾಗಿದೆ. ಕಾರ್ಯಕ್ರಮದ ಬಳಿಕ ಪ್ರಧಾನಿ ನರೇಂದ್ರ ಮೋದಿ ನನ್ನನ್ನು ಮಾತನಾಡಿಸಲು ಬಂದರು. ನಾನು ಗಿಡ ಬೆಳೆಸಿದ್ದೇನೆ ಎಂದು ಪ್ರಧಾನಿ ಮೋದಿಗೆ ಹೇಳಿದೆ. ಆದರೆ ಅವರಿಗೆ ಅರ್ಥ ಆಗಲಿಲ್ಲ. ನಾನು ಕೈಸನ್ನೆ ಮೂಲಕ ತಿಳಿಸಿದೆ. ನಾನು 15-20 ಲಕ್ಷ ಮರಗಳನ್ನು ಬೆಳೆಸಿದ್ದೇನೆ. ಯಾರೂ ಮರ ಕಡಿಯಬಾರದು. ಅಕೇಶಿಯಾ ಮರಗಳನ್ನು ಬೇಕಾದರೆ ಕಡಿದುಕೊಳ್ಳಲಿ. ಆದರೆ ಬೇರೆ ಮರಗಳನ್ನು ಕಡಿಯಬಾರದು. ನಾವು ಮರ ಬೆಳೆಸುವುದು, ಬೇರೆಯವರು ಕಡಿಯುವುದಾ? ಎಂದು ಹೇಳಿದರು.

ತುಳಸಿ ಗೌಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದವರು. ಇವರು ಹಾಲಕ್ಕಿ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸಾಲುಮರದ ತಿಮ್ಮಕ್ಕನವರಂತೆ ಇವರೂ ಕೂಡ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿರುವ ಇವರಿಗೆ ಈಗ 77 ವರ್ಷ. ಅವರ ಈ ಪರಿಸರ ಪ್ರೇಮ ಮತ್ತು ಅದರ ಬಗೆಗಿನ ನಿಷ್ಠೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಇದನ್ನೂ ಓದಿ: ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು

Published On - 9:21 pm, Mon, 8 November 21

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್