ಕೋವಿಡ್ ಬರೋಕೆ ಪದ್ಮನಾಭ ನಗರ ಕ್ಷೇತ್ರದ ಆರ್ ಅಶೋಕ ಕಾರಣ.. ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಪದ್ಮನಾಭನಗರದಲ್ಲಿ ಕಾರ್ಯಕ್ರಮ ನಡೆಸಲು ಅಶೋಕ್ ಅನುಮತಿ ಪಡೆಯಬೇಕಂತೆ! ಈ‌ ಮೈದಾನ ಏನೂ ಅಶೋಕ್ ಅವರ ಅಪ್ಪನ ಮನೆ ಆಸ್ತಿನಾ? ಇದು ಪಬ್ಲಿಕ್ ಪ್ರಾಪರ್ಟಿ. ಅಧಿಕಾರಿಗಳು ಇದಕ್ಕೆ ಮಣೆ ಹಾಕಬಾರದು ಎಂದು ಕಟಕಿಯಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋವಿಡ್ ಬರೋಕೆ ಪದ್ಮನಾಭ ನಗರ ಕ್ಷೇತ್ರದ ಆರ್ ಅಶೋಕ ಕಾರಣ.. ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ
ಕೋವಿಡ್ ಬರೋಕೆ ಪದ್ಮನಾಭ ನಗರ ಕ್ಷೇತ್ರದ ಆರ್ ಅಶೋಕ ಕಾರಣ.. ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 03, 2021 | 1:35 PM

ಬೆಂಗಳೂರು: ಕೋವಿಡ್ ಬರೋಕೆ ಈ ಕ್ಷೇತ್ರದ ಶಾಸಕ ಆರ್ ಅಶೋಕ ಕಾರಣ ಎಂದು ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗ. ನಾವು ಕಂಡು, ಕೇಳಿರಲಿಲ್ಲ. ಚೀನಾದಿಂದ ನಮ್ಮ ದೇಶಕ್ಕೆ ಬಂದಿದೆ.. ಕೋವಿಡ್ ಬರೋಕೆ ನಾವು ಕಾರಣನಾ? ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ. ಕೋವಿಡ್ ಬರೋಕೆ ಈ ಕ್ಷೇತ್ರದ (ಪದ್ಮನಾಭ ನಗರ -Padmanabhanagar) ಆರ್ ಅಶೋಕ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ಷೇಪಾರ್ಹವಾಗಿ  ಟೀಕಿಸಿದ್ದಾರೆ.

ಅವರು (ಆರ್ ಅಶೋಕ- r ashok) ಸಿಎಂ ಆಗದೆ ಇರಬಹುದು.. ಆದ್ರೆ ಕಂದಾಯ ಸಚಿವರಾಗಿದ್ದರಲ್ಲ. ಅಶೋಕ ಅವರನ್ನು ಅನೇಕ ಭಾರಿ ಗೆಲ್ಲಿಸಿದ್ದೀರಿ. ಜನರಿಗೆ ಆಹಾರ, ಔಷಧಿ, ಬೆಡ್ ಗಳು ಕೊಡುವುದು ಅಶೋಕ್ ಜವಾಬ್ದಾರಿ ಎಂದು ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈದಾನ ಅಶೋಕ್ ಅವರ ಅಪ್ಪನ ಮನೆ ಆಸ್ತಿನಾ? ಅಧಿಕಾರಗಳು ಎಚ್ಚರಿಕೆಯಿಂದ ಇರಬೇಕು: ಪದ್ಮನಾಭನಗರದಲ್ಲಿ ಕಾರ್ಯಕ್ರಮ ನಡೆಸಲು ಅಶೋಕ್ ಅನುಮತಿ ಪಡೆಯಬೇಕಂತೆ! ಈ‌ ಮೈದಾನ ಏನೂ ಅಶೋಕ್ ಅವರ ಅಪ್ಪನ ಮನೆ ಆಸ್ತಿನಾ? ಇದು ಪಬ್ಲಿಕ್ ಪ್ರಾಪರ್ಟಿ. ಅಧಿಕಾರಿಗಳು ಇದಕ್ಕೆ ಮಣೆ ಹಾಕಬಾರದು ಎಂದು ಕಟಕಿಯಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಅಧಿಕಾರಗಳು ಎಚ್ಚರಿಕೆಯಿಂದ ಇರಬೇಕು. ಅಶೋಕ ಒಬ್ಬ ಶಾಸಕ ಅಷ್ಟೇ.. ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಿಗಳನ್ನೂ ಎಚ್ಚರಿಸಿದರು.

ನಿಮ್ಮ ದಮ್ಮಯಾ ಅಂತಿನಿ ಈ ಬಾರಿ ಅಶೋಕ್​ನನ್ನು ಗೆಲ್ಲಿಸಬೇಡಿ: ಪದ್ಮನಾಭ ನಗರದಲ್ಲಿ ನಮ್ಮನ್ನು ಸೋಲಿಸಿದ್ದೀರಿ. ಅಶೋಕ್ ಅವರನ್ನು ಆರು ಭಾರಿ ಗೆಲ್ಲಿಸಿದ್ದೀರಿ. ನಿಮ್ಮ ದಮ್ಮಯಾ ಅಂತಿನಿ ಈ ಭಾರಿ ಬದಲಾವಣೆ ಮಾಡಿ. ಇದೊಂದು ಸಾರಿ ಎಂದು ಸಿದ್ದರಾಮಯ್ಯ ಕ್ಷೇತ್ರದ ಜನರಲ್ಲಿ ಕೋರಿದರು. ಅದಕ್ಕೆ ಒಳ್ಳೆಯ ಕ್ಯಾಂಡಿಡೇಟ್ ಬೇಕು ಎಂದು ಕಾರ್ಯಕರ್ತರು ಮಾರುತ್ತರ ನೀಡಿದರು. ಅದಕ್ಕೆ ಒಳ್ಳೆಯ ಕ್ಯಾಂಡಿಡೇಟ್ ಕೊಡ್ತೇವೆ ಈ ಸಾರಿ ಎಂದು ಸಿದ್ದರಾಮಯ್ಯ ಹೇಳಿದರು. ಆದರೂ ಕಾರ್ಯಕರ್ತರು ನೀವೇ ಸ್ಪರ್ಧೆ ಮಾಡಿ ಎಂದು ಕೂಗಿದರು. ಆಗ, 224 ಕ್ಷೇತ್ರದಲ್ಲೂ ನಾನೇ ನಿಲ್ಲೋಕೆ ಆಗಲ್ಲ. ನಾನು ಈಗ ಬಾದಾಮಿ ಶಾಸಕ. ಬಾದಾಮಿಯಿಂದ ನಿಲ್ಲುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಯಡಿಯೂರಪ್ಪನ್ನು ತೆಗೆದು ಹಾಕಿದ್ದು ವಯಸ್ಸು ಆಗಿದೆ ಎಂದಲ್ಲ; ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ ತೆಗೆದ್ರು: ಸಿದ್ದರಾಮಯ್ಯ

(Padmanabhanagar mla r ashok is the cause for coronavirus says siddaramaiah)

Published On - 12:49 pm, Tue, 3 August 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ