AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್​ಗಾಮ್ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ ಆರಂಭ, ಇಲ್ಲಿದೆ ವಿವರ

ಪಹಲ್​ಗಾಮ್ ಉಗ್ರ ದಾಳಿ, ಕರ್ನಾಟಕ ಸಹಾಯವಾಣಿ: ಜಮ್ಮು ಮತ್ತು ಕಾಶ್ಮೀರದ ಪಹಲ್​ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನ್ನಡಿಗರು ಮೃತಪಟ್ಟು, ಕರ್ನಾಟಕದ ಅನೇಕ ಪ್ರವಾಸಿಗರು ಅಲ್ಲಿ ಸಿಲುಕಿರುವ ಕಾರಣ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ರಾಜ್ಯದ ಪ್ರವಾಸಿಗರ ಬಗ್ಗೆ ಅವರ ಕುಟುಂದವರು, ಸಂಬಂಧಿಕರು ಮಾಹಿತಿ ನೀಡುವಂತೆ ಸರ್ಕಾರ ಮನವಿ ಮಾಡಿದೆ.

ಪಹಲ್​ಗಾಮ್ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ ಆರಂಭ, ಇಲ್ಲಿದೆ ವಿವರ
ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ
ಗಣಪತಿ ಶರ್ಮಾ
|

Updated on:Apr 23, 2025 | 11:54 AM

Share

ಬೆಂಗಳೂರು, ಏಪ್ರಿಲ್ 23: ಕಾಶ್ಮೀರದ ಪಹಲ್​ಗಾಮ್​​ನಲ್ಲಿ  (Pahalgam Terror Attack) ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಕರ್ನಾಟಕದ (Karnataka) ಅನೇಕ ಪ್ರವಾಸಿಗರು ಸದ್ಯ ಅಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರಲು ಕರ್ನಾಟಕ ಸರ್ಕಾರ 2 ತಂಡಗಳನ್ನು ಕಳುಹಿಸಿದೆ. ಸಚಿವ ಅನಿಲ್ ಲಾಡ್ ಅವರ ನೇತೃತ್ವದಲ್ಲಿ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಸಹಾಯವಾಣಿ (Karnataka Helpline) ಸಂಖ್ಯೆಗಳನ್ನು ಆರಂಭಿಸಿದೆ. ರಾಜ್ಯದ ಪ್ರವಾಸಿಗರ ಸಂಬಂಧಿಕರು, ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.

ಕಾಶ್ಮೀರ ಉಗ್ರ ದಾಳಿ: ಕರ್ನಾಟಕ ಸಹಾಯವಾಣಿ ಸಂಖ್ಯೆಗಳು

  • 080-43344334
  • 080-43344335
  • 080-43344336
  • 080-43344342

ಕನ್ನಡಿಗರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾ ಸಹಾಯವಾಣಿ

  • 08226- 213160
  • 08226- 223161
  • 08226- 223163
  • ಮೊಬೈಲ್: 9740942901

ಹಾವೇರಿಯ ಕುಟುಂಬಗಳು ಸುರಕ್ಷಿತ

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸದ ವೇಳೆ ಜಮ್ಮು ಪ್ರವಾಸದಲ್ಲಿ ಇದ್ದ ಹಾವೇರಿ ಜಿಲ್ಲೆಯ ಎರಡು ಕುಟುಂಬಗಳು ಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. ಹಾವೇರಿಯ ವಿರೇಶ್ ದಂಪತಿ ಹಾಗೂ ಶಿಗ್ಗಾವಿಯ ನಾಗರಾಜ್ ದಂಪತಿ ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿದ್ದಾರೆ. ಸದ್ಯ ಇವರು ಸದ್ಯ ಜಮ್ಮುವಿನ ಕತ್ರಾದಲ್ಲಿದ್ದಾರೆ.

ಇದನ್ನೂ ಓದಿ
Image
ಐಸ್ ಕ್ರೀಂ ತಿನ್ನಲೆಂದು ನಿಂತಿದ್ದರಿಂದ ಪಹಲ್ಗಾಮ್ ಉಗ್ರ ದಾಳಿಯಿಂದ ಬಚಾವ್
Image
ಕಾಶ್ಮೀರದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ ದೌಡು
Image
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
Image
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ

ಮತ್ತೊಂದೆಡೆ, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ದಾಳಿ ಹಿನ್ನೆಲೆ ಸಾವಿರಾರು ಸಂಖ್ಯೆಯ ಪ್ರವಾಸಿಗರು ಕಾಶ್ಮೀರ ತೊರೆಯುತ್ತಿದ್ದಾರೆ. ಕಾಶ್ಮೀರದ ಹೋಟೆಲ್‌, ಲಾಡ್ಜ್‌ಗಳಿಂದ ಪ್ರವಾಸಿಗರು ನಿರ್ಗಮಿಸುತ್ತಿದ್ದು, ಶ್ರೀನಗರದ ವಿಮಾನ ನಿಲ್ದಾಣದಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ.

ಇದನ್ನೂ ಓದಿ: ಐಸ್ ಕ್ರೀಂ ತಿನ್ನಲೆಂದು ನಿಂತಿದ್ದರಿಂದ ಬಚಾವ್: ಪಹಲ್ಗಾಮ್ ಉಗ್ರ ದಾಳಿಯಿಂದ ಬೆಂಗಳೂರು ನಿವಾಸಿ ಪಾರಾಗಿದ್ದು ಹೀಗಂತೆ!

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸಹ ಮೃತಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Wed, 23 April 25

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ