G Parameshwara: ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಾರೆ, ಕೆಲವರು ಪಾಕಿಸ್ತಾನ ಅಂತಾರೆ, ತನಿಖೆ ನಡೆಯುತ್ತಿದೆ: ಜಿ ಪರಮೇಶ್ವರ್​

ಮಂಗಳವಾರ (ಫೆ.27) ರಂದು ರಾಜ್ಯಸಭೆ ಚುನಾವಣೆ ನಡೆಯಿತು. ಕಾಂಗ್ರೆಸ್​​ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಗೃಹ ಸಚಿವ ಪರಮೇಶ್ವರ ಮಾತನಾಡಿ, ವೈಜ್ಞಾನಿಕವಾಗಿ ಸತ್ಯಾಸತ್ಯತೆ ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೋ ಕಳುಹಿಸುತ್ತಿದ್ದೇವೆ.

G Parameshwara: ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಾರೆ, ಕೆಲವರು ಪಾಕಿಸ್ತಾನ ಅಂತಾರೆ, ತನಿಖೆ ನಡೆಯುತ್ತಿದೆ: ಜಿ ಪರಮೇಶ್ವರ್​
ಗೃಹ ಸಚಿವ ಪರಮೇಶ್ವರ್​​
Follow us
Jagadisha B
| Updated By: ವಿವೇಕ ಬಿರಾದಾರ

Updated on:Feb 28, 2024 | 10:11 AM

ಬೆಂಗಳೂರು, ಫೆಬ್ರವರಿ 28: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ (Pro Pakistan Slogan in Karnataka Vidhana Soudha) ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಾರೆ, ಕೆಲವರು ಪಾಕಿಸ್ತಾನ ಅಂತಾರೆ. ವೈಜ್ಞಾನಿಕವಾಗಿ ಸತ್ಯಾಸತ್ಯತೆ ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯ (FSL)ಗೆ ವಿಡಿಯೋ ಕಳುಹಿಸುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೇ ಕಾನೂನು ಕ್ರಮ ಆಗೇ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಯಾರು ಮೊದಲು ಪ್ರಸಾರ ಮಾಡಿದ್ದಾರೆ ಅವರಿಂದ ವಿಡಿಯೋ ಪಡೆದು ತನಿಖೆ ಮಾಡುತ್ತೇವೆ. ಎಫ್​ಎಸ್​ಎಲ್​ಗೆ ಕಳುಹಿಸಿರುವ ಪ್ರಕಿಯೆಗಳು ಆರಂಭವಾಗಿವೆ. ಪೊಲೀಸರು ಮಾಡಿರುವ ವಿಡಿಯೋ ಚಿತ್ರೀಕರಣ, ವಿಧಾನಸೌಧ ಸಿಸಿ ಕ್ಯಾಮರಾ ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈಗಾಗಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಬಿಜೆಪಿಯವರು ಕೊಟ್ಟಿರುವ ದೂರನ್ನು ಕೂಡ ಸ್ವೀಕರಿಸಿದ್ದೇವೆ. ಸದನ ಒಳಗೆ ಹೊರಗೆ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ, ಮಾಡಲಿ. ನಾವು ತಪ್ಪು ಅಂತ ಹೇಳಲ್ಲ. ಕಾನೂನು ಚೌಕಟ್ಟಿನಲ್ಲಿ ಮಾಡಲಿ. ಇದರಲ್ಲಿ ಕಾಂಗ್ರೆಸ್ ತಪ್ಪೇನಿದೆ ? ಮುಸ್ಲಿ‌ಂ ತುಷ್ಠಿಕರಣ ಮಾಡುತ್ತಾರೆ ಅಂತ ಹೇಳುತ್ತಾನೆ ಬಂದಿದ್ದಾರೆ, ಹೋಸದೇನುಲ್ವಲ್ಲ ಎಂದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆಗೆ ಸಯ್ಯದ್ ನಾಸೀರ್ ಹುಸೇನ್ ಸ್ಪಷ್ಟನೆ

ನಾಸೀರ್ ಹುಸೇನ್ ಪತ್ರಕರ್ತರ ಮೇಲೆ ಗೂಂಡಾ ವರ್ತನೆ ತೋರಿರುವ ವಿಚಾರವಾಗಿ ಮಾತನಾಡಿದ ಪರಮೇಶ್ವರ್​, ಅವರು ಏನು ಹೇಳಿದ್ದಾರೆ ಅಂತ ನಾನು ನೋಡಿಲ್ಲ. ನೋಡಿ ಆಮೇಲೆ ಹೇಳುತ್ತೇನೆ ಎಂದು ಜಾರಿಕೊಂಡರು.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಬಿಜೆಪಿ ಇಂದು (ಬುಧವಾರ) ಸದನ ಆರಂಭಕ್ಕೂ ಮುನ್ನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:11 am, Wed, 28 February 24