AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ ವರದಿಯಲ್ಲಿ ಬಹಿರಂಗ: ಪರಮೇಶ್ವರ್​​

Pro Pakistan Slogan: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಯ್ಯದ ನಾಸೀರ್ ಹುಸೇನ್​ ಗೆಲವಿನ ಸಂಭ್ರಮಾಚರಣೆ ವೇಳೆ​ ವಿಧಾನಸೌಧದ ಒಳಗೆ ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ ​ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ ವರದಿಯಲ್ಲಿ ಬಹಿರಂಗ: ಪರಮೇಶ್ವರ್​​
ಗೃಹ ಸಚಿವ ಜಿ ಪರಮೇಶ್ವರ್​
Sunil MH
| Updated By: ವಿವೇಕ ಬಿರಾದಾರ|

Updated on: Mar 05, 2024 | 11:09 AM

Share

ಬೆಂಗಳೂರು, ಮಾರ್ಚ್​ 05: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ (Vidhana Soudha Pro Pakistan Slogan) ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL)​ ವರದಿ​​ಯಲ್ಲಿ ದೃಢವಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮತ್ತು ವರದಿಯಲ್ಲಿ ಯಾರು ಕೂಗಿದ್ದಾರೆಂಬುವುದು ಬಹಿರಂಗೊಂಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parmeshwar)​ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರಿಂದ ಸರ್ಕಾರಕ್ಕೆ ಯಾವುದೇ ಮುಜುಗರವಾಗುವುದಿಲ್ಲ. ಇದನ್ನು ನಮ್ಮ ಸರ್ಕಾರ ಹೇಳಿ ಮಾಡಿಸಿರುವುದು ಅಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಂಡಿದ್ದೇವೆ ಎಂದರು.

ನಾನು ಹೇಳುತ್ತಿದ್ದೆ ಎಫ್​ಎಸ್​ಎಲ್​ ವರದಿ ಬರಲಿ ಕ್ರಮ ಕೈಗೊಳ್ಳುತ್ತೇವೆ ಅಂತ. ಖಾಸಗಿಯವರು ಕೂಡ ಎಫ್​ಎಸ್​ಎಲ್​​ ವರದಿ ಬಿಡುಗಡೆ ಮಾಡಿದ್ದರು. ಆದರೆ ಇದನ್ನು ಅಧಿಕೃತ ಅಂತ ಹೇಳಲು ಆಗಲ್ಲ. ನಮ್ಮ ಗೃಹ ಇಲಾಖೆಯ ಎಫ್​ಎಸ್​ಎಲ್​ ವರದಿ ಆಧಾರದ ಮೇಲೆ ಬಂಧನ ಮಾಡಿದ್ದೇವೆ‌. ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ

ಇನ್ನು ವಿರೋಧ ಪಕ್ಷದವರು ಸುಮ್ಮನೇ ಹೇಳುತ್ತಿರುತ್ತಾರೆ. ಅವರು ಹೇಳುತ್ತಾರೆ ಅಂತ ಬಂಧಿಸಲಾಗುತ್ತಾ ? ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಯಾವ ಕಾರಣಕ್ಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನ್ಯಾಯ ಅನ್ನೋದು ಎಲ್ಲರಿಗೂ ಒಂದೇ ಅಲ್ವಾ? 2022ರಲ್ಲಿ ನಾವು ಅಧಿಕಾರದಲ್ಲಿ ಇರಲಿಲ್ಲ. ನಾವು ಹಳೆಯ ಪ್ರಕರಣ ಗಮನಿಸಿರಲಿಲ್ಲ. ಈಗ ಗಮನಿಸಿ ಪ್ರಕರಣ ದಾಖಲಾಗಿದೆ. ಮಂಡ್ಯದಲ್ಲಿ ಎಫ್​ಐಆರ್​ ಆಗಿದೆ. ಮಾಹಿತಿ ಪಡೆಯುತ್ತಿದ್ದೇನೆ ಎಂದರು.

ಇನ್ನು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಮ್ಮ ಪೊಲೀಸರು ಅವರಿಗೆ ಪ್ರಕರಣವನ್ನು ಹಸ್ತಾಂತರ ಮಾಡಲಿದ್ದಾರೆ. ಪೊಲೀಸರು ಮಾಹಿತಿಯನ್ನ ಅವರೊಂದಿಗೆ ಹಂಚಿಕೊಳ್ಳುತ್ತಾರೆ. ಆರೋಪಿ ಬಸ್​​ನಲ್ಲಿ ಬಂದಿದ್ದನು ಅಂತ‌ ಮಾಹಿತಿ ಇದೆ. ಸಿಸಿಟಿವಿ ದೃಶ್ಯಾವಳಿಗಳನ್ನೂ ಕೂಡ ಕೊಡಲಾಗಿದೆ. ಎನ್​ಐಎ ಎಲ್ಲ ಆಯಾಮಗಳಲ್ಲೂ ತನಿಖೆ ಮಾಡುತ್ತಿದ್ದಾರೆ ಎಂದರು. ಭಯೋತ್ಪಾದನಾ ನಿಗ್ರಹ ದಳ ಕೂಡ ಇದಕ್ಕಾಗಿ ಕೆಲಸ‌ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ