AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ

ಭಟ್ಕಳದಲ್ಲಿ ಈಕೆಯು ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದುಕೊಂಡಿದ್ದಾಳೆ.

ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ
ಪೊಲೀಸರು ಬಿಡುಗಡೆಗೊಳಿಸಿರುವ ಬಂಧಿತ ಮಹಿಳೆಯ ಚಿತ್ರ
TV9 Web
| Updated By: guruganesh bhat|

Updated on:Jun 10, 2021 | 4:19 PM

Share

ಭಟ್ಕಳ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ರಾಷ್ಟ್ರೀಯತೆಯನ್ನು ಹೊಂದಿರುವ  ಮಹಿಳೆಯೋರ್ವಳನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಖತೀಜಾ ಮೆಹರಿನ್ ಎಂಬಾಕೆಯೇ ಬಂಧಿತ ಮಹಿಳೆ. 8 ದುಬೈನಲ್ಲಿ ಭಟ್ಕಳದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತನ ಜತೆ ವಿವಾಹವಾಗಿದ್ದ ಈಕೆ ಯಾವುದೇ ದಾಖಲೆ ನೀಡದೇ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಳು. 2014ರಲ್ಲಿ 3 ತಿಂಗಳ ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಈಕೆ 2015ರಲ್ಲಿ ಕಳ್ಳ ಮಾರ್ಗ ಅನುಸರಿಸಿ ಭಾರತ ಪ್ರವೇಶಿದ್ದಳು.

ಭಟ್ಕಳದಲ್ಲಿ ಈಕೆಯು ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದುಕೊಂಡಿದ್ದಾಳೆ. ಪೊಲೀಸರು ಆಕೆಯನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಇವೆಲ್ಲ ದಾಖಲೆಗಳನ್ನು ಕೂಡ ವಶಕ್ಕೆ ಪಡೆದಿರುವುದಾಗಿ  ತಿಳಿಸಿದ್ದಾರೆ. 3 ಮಕ್ಕಳೊಂದಿಗೆ ಭಟ್ಕಳದಲ್ಲೇ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನದ ಮಹಿಳೆಯನ್ನು ಬಂಧಿಸಿರುವ ಭಟ್ಕಳದ ಟೌನ್ ಪೊಲೀಸರು ಮಹಿಳೆ ವಿರುದ್ಧ ಸೆಕ್ಷನ್ 468, 471ರಡಿ ಪ್ರಕರಣ ದಾಖಲಿಸಿದ್ದಾರೆ.

ಈಕೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೆಲವು ತಿಂಗಳುಗಳಿಂದ ಸ್ಥಳೀಯ ಪೊಲೀಸರು ಇತರ ತನಿಖಾ ಸಂಸ್ಥೆಯ ಸಹಕಾರದೊಂದಿಗೆ ಪತ್ತೆಗೆ ಸತತವಾಗಿ ಪ್ರಯತ್ನಿಸಿ, ಅಕ್ರಮವಾಗಿ ವಾಸವಾಗಿದ್ದ ಈಕೆಯನ್ನು ಅಂತೂ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈಕೆಯ ಮೇಲೆ ವಿದೇಶಿ ಕಾಯಿದೆ ಉಲ್ಲಂಘನೆ ಮತ್ತು ಇತರೆ ಐಪಿಸಿ ಪ್ರಕರಣಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯು ಎಸ್ ಪಿ ಶಿವಪ್ರಕಾಶ್ ದೇವರಾಜು, ಎಎಸ್ ಪಿ ಬದರಿನಾಥ, ಭಟ್ಕಳ ಡಿವೈಎಸ್ ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಸಿಪಿಐ ದಿವಾಕರ ಪಿ.ಎಮ್ ಅವರ ಮಾರ್ಗದರ್ಶನ ಹಾಗೂ ಸೂಚನೆಯ ಮೇರೆಗೆ ಭಟ್ಕಳ ನಗರ ಪೊಲೀಸ್ ಠಾಣಿಯ ಪಿಎಸ್ಐ ಸುಮಾ ಬಿ. ಮತ್ತು ಸಿಬ್ಬಂದಿ ನಾರಾಯಣ ನಾಯ್ಕ, ಮುಗ್ದುಂ ಪತ್ತೆಖಾನ್, ಲೋಕಪ್ಪ ಪತ್ತಿ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಹೀನಾ ಎಫ್. ತಂಡದಿಂದ ನಡೆದಿತ್ತು.

ಇದನ್ನೂ ಓದಿ: Work From Home: ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಂ ಅವಕಾಶ ನೀಡಿದ ಫೇಸ್​ಬುಕ್

ಡ್ಯಾನಿಷ್ ಸೈಟ್ ಮದುವೆ ಫೋಟೋ ವೈರಲ್!

(Pakistani woman arrested who lived illegally in Bhatkal since 2015)

Published On - 4:18 pm, Thu, 10 June 21