AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್​ ವಾರ್​ ವಿಶೇಷ.. ಜೈಲಿನಲ್ಲಿದ್ದುಕೊಂಡೇ ನಾಮಪತ್ರ ಸಲ್ಲಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ

ಕೊಡಗು ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ ನಡೆಯಲಿದ್ದು, ಎರಡನೇ ಹಂತದಲ್ಲಿ ಅಂದರೆ ಡಿ.27ರಂದು ಪಾಲಿಬೆಟ್ಟ ಚುನಾವಣೆ ನಡೆಯಲಿದೆ. ಇನ್ನು ಬೋಪಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದು, ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ.

ಲೋಕಲ್​ ವಾರ್​ ವಿಶೇಷ.. ಜೈಲಿನಲ್ಲಿದ್ದುಕೊಂಡೇ ನಾಮಪತ್ರ ಸಲ್ಲಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ
ಪಿ.ಪಿ.ಬೋಪಣ್ಣ, ಬಿಜೆಪಿ ಬೆಂಬಲಿತ ಅಭ್ಯರ್ಥಿ
Lakshmi Hegde
|

Updated on:Dec 18, 2020 | 2:01 PM

Share

ಕೊಡಗು: ರಾಜ್ಯದಲ್ಲೀಗ ಲೋಕಲ್​ ವಾರ್​ ರಂಗು.. ಪ್ರತಿ ಗ್ರಾಮಗಳಲ್ಲೂ ಚುನಾವಣೆಗೆ ಭರ್ಜರಿ ಸಿದ್ಧತೆಯೇ ನಡೆಯುತ್ತಿದೆ.. ಪ್ರಚಾರದ ಅಬ್ಬರವಂತೂ ಯಾವ ವಿಧಾನಸಭಾ ಚುನಾವಣೆಗೂ ಕಡಿಮೆ ಇಲ್ಲ.. ಹೀಗಿರುವಾಗ ಕೊಡಗು ಜಿಲ್ಲೆಯಲ್ಲಿ ಒಂದು ವಿಶೇಷ ನಡೆದಿದೆ. ಅಭ್ಯರ್ಥಿಯೋರ್ವರು ಜೈಲಿನಲ್ಲಿ ಇದ್ದುಕೊಂಡೇ ನಾಮಪತ್ರ ಸಲ್ಲಿಸಿದ್ದಾರೆ.

ಪಾಲಿಬೆಟ್ಟ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಪಿ.ಪಿ. ಬೋಪಣ್ಣ ಕೊಡಗು ಜೈಲಿನಲ್ಲಿದ್ದುಕೊಂಡೇ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇವರು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದು ಸದ್ಯ ನಾಮಪತ್ರವನ್ನೂ ಸಲ್ಲಿಸಿದ್ದಾರೆ. ಇದೀಗ ಭರ್ಜರಿ ಸುದ್ದಿಯಾಗಿದೆ.

ಜೈಲಿಗೆ ಹೋಗಿದ್ದೇಕೆ? ಬಿಜೆಪಿ ಕಟ್ಟಾಳು ಆಗಿರುವ ಪಿ.ಪಿ.ಬೋಪಣ್ಣ ಗೆಲುವು ತರುವ ಅಭ್ಯರ್ಥಿ. ಆದರೆ ಆಸ್ತಿ ವ್ಯಾಜ್ಯ ಸಂಬಂಧ ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಸದ್ಯ ಮಡಿಕೇರಿ ಕಾರಾಗೃಹದಲ್ಲಿ ಬಂಧಿಯಾಗಿರುವ ಇವರು, ನ್ಯಾಯಾಲಯ ಅನುಮತಿ ಪಡೆದು, ಬೆಂಬಲಿಗರ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ಬೋಪಣ್ಣ, ಪಾಲಿಬೆಟ್ಟ ಗ್ರಾ.ಪಂ. ಎರಡು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೇ, ಪಾಲಿಬೆಟ್ಟದ ಎಮ್ಮೆಗುಂಡಿ 1ನೇ ವಾರ್ಡ್ ನಿಂದ ನಾಲ್ಕು ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ 20 ವರ್ಷಗಳಿಂದ ಸದಸ್ಯರಾಗಿದ್ದಾರೆ. ಇದೇ ಬೋಪಣ್ಣ ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೇ ತ್ಯಾಜ್ಯ ವಿಲೇವಾರಿ, ಸ್ವಚ್ಛತೆ ಕಾಪಾಡಿದ್ದಕ್ಕಾಗಿ ಇದೇ ಪಾಲಿಬೆಟ್ಟ ಗ್ರಾಪಂಗೆ ರಾಷ್ಟ್ರೀಯ ಪ್ರಶಸ್ತಿ ಕೂಡ ಲಭಿಸಿದೆ.

ಎರಡು ಹಂತದಲ್ಲಿ ಚುನಾವಣೆ ಕೊಡಗು ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ ನಡೆಯಲಿದ್ದು, ಎರಡನೇ ಹಂತದಲ್ಲಿ ಅಂದರೆ ಡಿ. 27ರಂದು ಪಾಲಿಬೆಟ್ಟ ಚುನಾವಣೆ ನಡೆಯಲಿದೆ. ಇನ್ನು ಬೋಪಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದು, ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ಇದೇ ತಿಂಗಳ 27ರ ಒಳಗಾಗಿ ಜಾಮೀನು ಸಿಗದಿದ್ದರೆ ಜೈಲಿನಲ್ಲಿ ಇದ್ದುಕೊಂಡೆ ಚುನಾವಣೆ ಎದುರಿಸಬೇಕಾಗುತ್ತೆ. ಆದರೆ ಬೋಪಣ್ಣ ಪರ ಅವರ ಬೆಂಬಲಿಗರು ಪ್ರಚಾರ ನಡೆಸುತ್ತಿದ್ದಾರೆ.

ಮತ ಕೇಳಲು ಮನೆಬಾಗಿಲಿಗೆ ಬರುವವರ ಕೈಲಿ ಚಿಕನ್​-ಮಟನ್​ ಪ್ಯಾಕೆಟ್​; ಕೊಪ್ಪಳದಲ್ಲಿ ‘ರಾತ್ರಿ ಆಮಿಷ’ ಮಾಮೂಲು

Published On - 1:42 pm, Fri, 18 December 20

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ