AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು: ಸಿಎಂ ಭೇಟಿಯಾಗಿ ಡೆಡ್‌ಲೈನ್ ನೀಡಿ ಬಂದ ಪಂಚಮಸಾಲಿ ಹೋರಾಟಗಾರರ ನಿಯೋಗ

ಪಂಚಮಸಾಲಿ ಸಮುದಾಯದ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ 2ಎ ಮೀಸಲಾತಿ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಸರ್ಕಾರಕ್ಕೆ ಡೆಡ್‌ಲೈನ್ ಸಹ ನೀಡಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು:  ಸಿಎಂ ಭೇಟಿಯಾಗಿ ಡೆಡ್‌ಲೈನ್ ನೀಡಿ ಬಂದ ಪಂಚಮಸಾಲಿ ಹೋರಾಟಗಾರರ ನಿಯೋಗ
ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರು
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 24, 2022 | 10:16 PM

Share

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ (Panchamasali  2A Reservation) ನೀಡಬೇಕೆನ್ನುವ ಕಿಚ್ಚು ಜೋರಾಗಿದ್ದು, ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಅಲ್ಲದೇ ಇದೇ ವೇಳೆ ಸರ್ಕಾರಕ್ಕೆ ಡೆಡ್​ಲೈನ್ ಕೊಟ್ಟು ಬಂದಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಈ ಹಿಂದೆ ಸರ್ಕಾರಕ್ಕೆ ನೀಡಿದ್ದ ಗಡುವು ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು(ನವೆಂಬರ್ 24) ಬೆಂಗಳೂರಿನಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಹೋರಾಟಗಾರರು ಮಹತ್ವದ ಸಭೆ ನಡೆಸಿದರು. ಬಳಿಕ ನಿಯೋಗ, ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಡಿಸೆಂಬರ್ 19ರೊಳಗೆ ಕುಲಶಾಸ್ತ್ರ ಅಧ್ಯಯನ ವರದಿ ಪಡೆಯಬೇಕು. ಇಲ್ಲದಿದ್ರೆ ಬೆಳಗಾವಿಯಲ್ಲಿ ನಡೆಯುವ ಅಧಿವೇಶನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿ ಬಂದಿದ್ದಾರೆ.

ಇನ್ನು ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಡಿಸೆಂಬರ್ 12ಕ್ಕೆ ವಿಧಾನಸೌದಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ವಿ. ಆದ್ರೆ ನಮ್ಮ ಸಮುದಾಯದವರು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿದ್ದು, ಈ ವೇಳೆ 12ನೇ ತಾರೀಖು ಮುತ್ತಿಗೆ ಹಾಕಬೇಡಿ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಆದ್ರೆ ನಾವು ಡಿ.19ರ ಒಳಗೆ ಹಿಂದುಳಿದ ಆಯೋಗದಿಂದ ವರದಿ ತರಿಸಿಕೊಳ್ಳುವುದಕ್ಕೆ ಗಡುವು ಕೊಟ್ಟಿದ್ದೇವೆ ಎಂದು ಹೇಳಿದರು.

ಇಲ್ಲವಾದರೆ ನಾವು ಅಧಿವೇಶನದ ದಿನ ಬೆಳಗಾವಿಯಲ್ಲಿ ಮುತ್ತಿಗೆ ಹಾಕುತ್ತೇವೆ. ಸುವರ್ಣ ಅಧಿವೇಶನ ವೇಳೆ ಮುತ್ತಿಗೆ ಹಾಕುತ್ತೇವೆ. ನಮ್ಮನ್ನ ದಾರಿ ತಪ್ಪಿಸೋ ಕೆಲಸ ಏನಾದ್ರೂ ಮಾಡಿದ್ರೆ ಮುಂದೆ ಏನಾಗುತ್ತೆ ಎಂದು ಸಿಎಂಗೆ ಗೊತ್ತಿದೆ. ಎಲೆಕ್ಷನ್ ನಲ್ಲಿ ಸಮಸ್ಯೆ ಎದುರಾಗುತ್ತವೆ ಅನ್ನೋದ್ರ ಬಗ್ಗೆ ಗೊತ್ತಿದೆ. ಅವರೂ ಕೂಡ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ವರದಿ ತರಿಸಿಕೊಳ್ತೀವಿ ಎಂದು ಭರವಸೆ ನೀಡಿದ್ದಾರೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಮಾಡ್ತೀವಿ ಎಂದು ಸ್ಪಷ್ಟಪಡಿಸಿದರು.

ಇನ್ನೇನು ಚುನಾವಣೆ ಐದಾರು ತಿಂಗಳು ಬಾಕಿ ಇದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕಿದೆ, ಇದರ ಮಧ್ಯೆ ಪಂಚಮಸಾಲಿ ಮೀಸಲಾತಿ ಕಿಚ್ಚು ಜೋರಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಗೆ ಮತ್ತೆ ಮೀಸಲಾತಿ ಕಂಟಕ ಎದುರಾಗಿದೆ.