AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಹೋರಾಟವನ್ನು ಕೆಲವರು ಸ್ವಾರ್ಥಕ್ಕಾಗಿ ಬಳಸಿದ್ದು ಖಂಡನೀಯ, ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿ.ಸಿ. ಪಾಟೀಲ್

ಸಮುದಾಯಕ್ಕೆ ಕಾನೂನು ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತೆ. ಹೀಗಾಗಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ಅಧ್ಯಯನ ಮಾಡಿ ವರದಿ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಫಾರಸು ಮಾಡಿದ್ದಾರೆ.

ಪಂಚಮಸಾಲಿ ಹೋರಾಟವನ್ನು ಕೆಲವರು ಸ್ವಾರ್ಥಕ್ಕಾಗಿ ಬಳಸಿದ್ದು ಖಂಡನೀಯ, ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿ.ಸಿ. ಪಾಟೀಲ್
ಸಿ.ಸಿ. ಪಾಟೀಲ್
TV9 Web
| Updated By: ganapathi bhat|

Updated on:Apr 06, 2022 | 7:48 PM

Share

ಬೆಂಗಳೂರು: ಪಂಚಮಸಾಲಿ ಸಮಾವೇಶದಲ್ಲಿ ಎಲ್ಲ ಗುರು, ಹಿರಿಯರು ಭಾಗಿಯಾಗಿದ್ದರು. ಪಂಚಮಸಾಲಿ ಸಮಾವೇಶ ಅರ್ಥಪೂರ್ಣವಾಗಿ ನಡೆಯಿತು. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಿಗಬೇಕು ಎಂದು ಒತ್ತಾಯಿಸುವುದು ಪ್ರಮುಖ ಉದ್ದೇಶವಾಗಿತ್ತು. ಆದರೆ, ಈ ಹೋರಾಟವನ್ನು ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದು ಖಂಡನೀಯ. ಕೆಲವರು ಸಮುದಾಯದ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಿದರು ಎಂದು ರಾಜ್ಯ ಸಚಿವರು, ಬಿಜೆಪಿ ನಾಯಕರಾದ ಸಿ.ಸಿ. ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮುದಾಯದ 2A ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ಹಾಗೂ ರಾಜ್ಯ ಸಚಿವರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಶಾಸಕರು, ಮಾಜಿ ಶಾಸಕರು ಭಾಗಿಯಾಗಿದ್ದರು.

ಸಮುದಾಯಕ್ಕೆ ಕಾನೂನು ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತೆ. ಹೀಗಾಗಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ಅಧ್ಯಯನ ಮಾಡಿ ವರದಿ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಫಾರಸು ಮಾಡಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪಾಟೀಲ್ ಹೇಳಿದರು.

ಯತ್ನಾಳ್ ಹಾಗೂ ಕಾಶಪ್ಪನವರ್ ವಿರುದ್ಧ ಸಿ.ಸಿ. ಪಾಟೀಲ್ ಖಂಡನೆ ಕೆಲವು ನಾಯಕರು ಈ ಹೋರಾಟದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. ಸಮಾವೇಶದಲ್ಲಿ ದಾರಿತಪ್ಪಿಸುವಂತಹ ಭಾಷಣ ಮಾಡಿದ್ದಾರೆ. ಸಮುದಾಯಕ್ಕೆ ತನ್ನದೇ ಆದ ಒಂದು ಪಾವಿತ್ರ್ಯತೆ ಇದೆ. ಆದರೆ ಅದಕ್ಕು ಕಳಂಕ ತರುವಂತಹ ಕೆಲಸ ಮಾಡಬಾರದು. ಸಮುದಾಯದ ಋಣ ತೀರಿಸುವಂತಹ ಕೆಲಸ ಮಾಡಬೇಕು ಎಂದು ಸಿ.ಸಿ. ಪಾಟೀಲ್ ಬಸನಗೌಡ ಪಾಟೀಲ ಯತ್ನಾಳ್ ಮತ್ತು ವಿಜಯಾನಂದ ಕಾಶಪ್ಪನವರ್ ವಿರುದ್ಧ ಆರೋಪಿಸಿದರು.

ಪಂಚಮಸಾಲಿ ಸಮುದಾಯಕ್ಕೆ ವಿಜಯಾನಂದ ಕಾಶಪ್ಪನವರ್ ಏನು ಕೊಡುಗೆ ನೀಡಿದ್ದಾರೆ. ಅವರ ಸರ್ಕಾರದ ಅವಧಿಯಲ್ಲಿ ಏನು ಮಾಡಿದ್ದಾರೆ ಎಂದು ಪಾಟೀಲ್ ಪ್ರಶ್ನಿಸಿದರು. ಕೇವಲ ಬೂಟಾಟಿಕೆ ಮಾತುಗಳಿಂದ ಏನೂ ಆಗುವುದಿಲ್ಲ. ಕಾಶಪ್ಪನವರ್ ಜಯಮೃತ್ಯುಂಜಯಶ್ರೀಗಳನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡಿದ್ದಾರೆ. ಸಮಾವೇಶದಲ್ಲಿ ವಿಜಯಾನಂದ ಕಾಶಪ್ಪನವರ್​ನ್ನು ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷರಾಗಿ ಘೋಷಿಸಿದ್ದಾರೆ. ಇದು ಕಾನೂನುಬಾಹಿರ. ಸಮಾವೇಶದಲ್ಲಿ ಶ್ರೀಗಳು ಹೀಗೆ ಘೋಷಣೆ ಮಾಡಬಾರದಿತ್ತು ಎಂದು ಪಾಟೀಲ್ ವಾಗ್ದಾಳಿ ನಡೆಸಿದರು.

ಬಿಜೆಪಿ ಶಾಸಕ ಯತ್ನಾಳ್ ಅವರೇ ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಇದು ನಿನ್ನೆಯ ಚಾಳಿ ಅಲ್ಲ. ಈ ಮೊದಲೂ ಇಂಥಾ ಹೇಳಿಕೆ ನೀಡಿದ್ದರು. ನಿನ್ನೆ ನಡೆದ ಭಾಷಣದಲ್ಲೂ ಅವರು ಇದೇ ರೀತಿ ಮಾತಾಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಚಿವ ಪಾಟೀಲ್ ಯತ್ನಾಳ್ ವಿರುದ್ಧ ಹರಿಹಾಯ್ದರು.

ಸಮುದಾಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಸಮುದಾಯದ ಬಗ್ಗೆ ಸಿಎಂ ಬಿ.ಎಸ್‌. ಯಡಿಯೂರಪ್ಪಗೆ ಬಹಳ ಗೌರವವಿದೆ. ಯಡಿಯೂರಪ್ಪ ಸಮಿತಿಯ ವರದಿ ಆಧರಿಸಿ ಕ್ರಮಕೈಗೊಳ್ಳುತ್ತಾರೆ. ಸದ್ಯದಲ್ಲಿಯೇ ಸಿಎಂ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ಒಟ್ಟು ಸಮುದಾಯದ ಅಭಿಪ್ರಾಯವನ್ನು ಪಡೆಯಬೇಕು. ಕೆಲವೇ ಕೆಲವರ ಅಭಿಪ್ರಾಯವನ್ನು ಪಡೆಯುವುದಕ್ಕೆ ಬರುವುದಿಲ್ಲ. ಕೆಲವು ಶಾಸಕರು, ಸ್ವಾಮೀಜಿಗಳ ಅಭಿಪ್ರಾಯ ಮಾತ್ರ ಪಡೆದರೆ ಫಲಪ್ರದವಾಗಲ್ಲ. ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡಬೇಕು ಎಂದು ಸಿ.ಸಿ.ಪಾಟೀಲ್ ಹೇಳಿದರು.

ಸರ್ಕಾರದ ಜತೆ ಸ್ವಾಮೀಜಿಗಳು ಮಾತುಕತೆಗೆ ಬರಬೇಕು. ನಿನ್ನೆ ನಡೆದ ಕೆಲವು ಘಟನೆಗಳು ಬಹಳ ದುರದೃಷ್ಟಕರ. ಸಮುದಾಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಮಗೆ ಸಮಯ ನೀಡಿದರೆ ನಮ್ಮ ಬದ್ಧತೆಯನ್ನು ತೋರಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದರು. ಸಮಾವೇಶದ ನಿನ್ನೆಯ ಕೆಲವು ಘಟನೆಗಳನ್ನು ಖಂಡಿಸುತ್ತೇವೆ. ಬಿಜೆಪಿಯ ಎಲ್ಲ ಶಾಸಕರು ಇದನ್ನು ಒಟ್ಟಾಗಿ ಖಂಡಿಸುತ್ತೇವೆ. ಈ ವಿಚಾರದಲ್ಲಿ ಎಲ್ಲ ಶಾಸಕರ ಬೆಂಬಲ ಸಿಎಂ ಯಡಿಯೂರಪ್ಪಗೆ ಇದೆ ಎಂದು ತಿಳಿಸಿದರು.

ಇದನ್ನೂ ಒದಿ: ಪಂಚಮಸಾಲಿ ಸಮಾವೇಶದಲ್ಲಿ ಸಿಎಂ BSY ವಿರುದ್ಧ ಯತ್ನಾಳ್​ ಗುಡುಗು.. ಹೈಕಮಾಂಡ್​ನಿಂದ ಬಂತು ಬುಲಾವ್

ಮಾ.4ರೊಳಗೆ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ರೆ ಅಮರಣಾಂತ ಸತ್ಯಾಗ್ರಹ -ಜಯಮೃತ್ಯುಂಜಯಶ್ರೀ ವಾರ್ನಿಂಗ್​

Published On - 1:55 pm, Mon, 22 February 21

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್